ವಿಶಾಖಪಟ್ಟಣಂ: ಆರಂಭಿಕ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟಿ20ಐ ಸರಣಿಯನ್ನು (IND vs NZ) 3-0 ಅಂತರದಲ್ಲಿ ವಶಪಡಿಸಿಕೊಂಡಿರುವ ಭಾರತ ತಂಡ (Indian Cricket Team), ಇದೀಗ ಜನವರಿ 28 ರಂದು ಇಲ್ಲಿನ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಕೊನೆಯ ಎರಡು ಪಂದ್ಯಗಳಲ್ಲಿ ತನ್ನ ಬೆಂಚ್ ಸಾಮರ್ಥ್ಯವನ್ನು ಆಡಿಸಲು ಎದುರು ನೋಡುತ್ತಿದೆ. ಇನ್ನು ಟಿ20ಐ ಸರಣಿಯನ್ನು ಈಗಾಗಲೇ ಕಳೆದುಕೊಂಡಿರುವ ಪ್ರವಾಸಿ ನ್ಯೂಜಿಲೆಂಡ್ (New Zealand) ತಂಡ, ಕನಿಷ್ಠ ಕೊನೆಯ ಎರಡು ಪಂದ್ಯಗಳನ್ನು ಗೆದ್ದು ಟಿ20 ವಿಶ್ವಕಪ್ ಟೂರ್ನಿಗೆ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಬಯಸುತ್ತಿದೆ.
ಭಾನುವಾರ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೂರನೇ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬಾಟ್ ಮಾಡಿದ್ದ ನ್ಯೂಜಿಲೆಂಡ್ ತಂಡ, 153 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ಅಭಿಷೇಕ್ ಶರ್ಮಾ (68 ರನ್) ಹಾಗೂ ಸೂರ್ಯಕುಮಾರ್ ಯಾದವ್ (57 ರನ್) ಅವರ ಸ್ಪೋಟಕ ಅರ್ಧಶತಕಗಳ ಬಲದಿಂದ ಕೇವಲ 10 ಓವರ್‌ಗಳಿಗೆ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 17 ರನ್ ನೀಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ತಂಡದಲ್ಲಿ ಗಮನಾರ್ಹ ಬದಲಾವಣೆ ಮಾಡಿದ ನ್ಯೂಜಿಲ್ಯಾಂಡ್
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆ ಸಾಧ್ಯತೆ
ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ, ತನ್ನ ಬೆಂಚ್ ಆಟಗಾರರ ಸಾಮರ್ಥ್ಯವನ್ನು ಪರೀಕ್ಷಿಸಲಿದೆ. ಹಾಗಾಗಿ ಮೂರು ಆಟಗಾರರಿಗೆ ವಿಶ್ರಾಂತಿ ನೀಡಬಹುದು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಹಾಗೂ ಹರ್ಷಿತ್ ರಾಣಾ ಅವರಿಗೆ ವಿಶ್ರಾಂತಿ ನೀಡಬಹುದು. ಇವರ ಸ್ಥಾನಗಳಿಗೆ ಕ್ರಮವಾಗಿ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ಅರ್ಷದೀಪ್ ಸಿಂಗ್‌ಗೆ ಅವಕಾಶವನ್ನು ಕೊಡಬಹುದು.
ಪಿಚ್ ರಿಪೋರ್ಟ್
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ನಾಲ್ಕನೇ ಪಂದ್ಯ ವಿಶಾಖಪಟ್ಟಣಂನ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಇದೇ ಅಂಗಣದಲ್ಲಿ ಕೊನೆಯ ಬಾರಿ ಒಡಿಐ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳಿಂದ ಗೆದ್ದಿತ್ತು. ಇಲ್ಲಿನ ಪಿಚ್ ಬ್ಯಾಟಿಂಗ್‌ಗೆ ಯೋಗ್ಯವಾಗಿದೆ. ಆರಂಭದಲ್ಲಿ ಪಿಚ್ ವೇಗದ ಬೌಲರ್‌ಗಳಿಗೆ ನೆರವು ನೀಡಲಿದೆ. ಪಂದ್ಯ ಸಾಗುತ್ತಿದ್ದಂತೆ ಪಿಚ್ ಸ್ಪಿನರ್‌ಗಳಿಗೆ ನೆರವು ನೀಡಲಿದೆ.
ಜೇಸನ್ ಹೋಲ್ಡರ್ ಕಮ್‌ಬ್ಯಾಕ್, 2026ರ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ!
ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ
ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ XI
ನ್ಯೂಜಿಲೆಂಡ್: ಡೆವೋನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಇಶ್ ಸೋಧಿ, ಜಾಕೋಬ್ ಡಫಿ/ ಲಾಕಿ ಫರ್ಗ್ಯೂಸನ್
IND vs NZ: 20 ಎಸೆತಗಳಲ್ಲಿ 68 ರನ್ ಗಳಿಸಿದರೂ ಅಭಿಷೇಕ್ ಶರ್ಮಾರ ಕಾಲೆಳೆದ ಯುವರಾಜ್ ಸಿಂಗ್!
ಪಂದ್ಯದ ವಿವರ
ನಾಲ್ಕನೇ ಟಿ20ಐ ಪಂದ್ಯ
ಭಾರತ vs ನ್ಯೂಜಿಲೆಂಡ್
ದಿನಾಂಕ: ಜನವರಿ 28, 2026
ಸಮಯ: ಸಂಜೆ 07: 00 ಗಂಟೆಗೆ
ಸ್ಥಳ: ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ವಿಶಾಖಪಟ್ಟಣಂ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್‌ಸ್ಟಾರ್