ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

5 ವಿಕೆಟ್‌ ಪಡೆದ ಹೊರತರಾಗಿಯೂ ಅನಗತ್ಯ ದಾಖಲೆಯನ್ನು ಹೆಗಲೇರಿಸಿಕೊಂಡ ಅರ್ಷದೀಪ್‌ ಸಿಂಗ್‌!

ನ್ಯೂಜಿಲೆಂಡ್‌ ವಿರುದ್ಧ ಭಾರತ ತಂಡದ ಯುವ ವೇಗಿ ಅರ್ಷದೀಪ್‌ ಸಿಂಗ್‌ ಅವರು ಐದು ವಿಕೆಟ್‌ ಸಾಧನೆ ಮಾಡಿದರು. ಆ ಮೂಲಕ ಭಾರತ ತಂಡ 46 ರನ್‌ಗಳ ಗೆಲುವಿಗೆ ನೆರವು ನೀಡಿದರು. ಇದರ ಹೊರತಾಗಿಯೂ ಅರ್ಷದೀಪ್‌ ಸಿಂಗ್‌ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಗಲೇರಿಸಿಕೊಂಡಿದ್ದಾರೆ.

5 ವಿಕೆಟ್‌ ಕಿತ್ತರೂ ಅನಗತ್ಯ ದಾಖಲೆ ಬರೆದ ಅರ್ಷದೀಪ್‌ ಸಿಂಗ್‌!

5 ವಿಕೆಟ್‌ ಕಿತ್ತರೂ ಅನಗತ್ಯ ದಾಖಲೆ ಬರೆದ ಅರ್ಷದೀಪ್‌ ಸಿಂಗ್‌. -

Profile
Ramesh Kote Feb 1, 2026 5:16 PM

ತಿರುವನಂತಪುರಂ: ಐದು ಪಂದ್ಯಗಳ ಟಿ20ಐ ಸರಣಿಯ (IND vs NZ) ಕೊನೆಯ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 46 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್‌ ಮಾಡಿದ ಟೀಮ್‌ ಇಂಡಿಯಾ (India) ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 271 ರನ್‌ಗಳನ್ನು ದಾಖಲಿಸಿತು. ಬಳಿಕ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ 225 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಒಂದು ಹಂತದಲ್ಲಿ, ನ್ಯೂಜಿಲೆಂಡ್ ಗುರಿಯತ್ತ ವೇಗವಾಗಿ ಮುನ್ನಡೆಯುತ್ತಿತ್ತು. ಆದರೆ, ಅರ್ಷದೀಪ್ ಸಿಂಗ್ (Arshdeep Singh) ಅವರ ಅದ್ಭುತ ಪ್ರದರ್ಶನದಿಂದಾಗಿ, ಟೀಮ್ ಇಂಡಿಯಾ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್‌ ಐದು ವಿಕೆಟ್‌ಗಳನ್ನು ಕಬಳಿಸಿದರು, ಆದರೆ ಇದರ ಹೊರತಾಗಿಯೂ, ಅನಗತ್ಯ ದಾಖಲೆಯೊಂದನ್ನು ಹೆಗಲೇರಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಐದನೇ ಟಿ20ಐ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 5 ವಿಕೆಟ್‌ಗಳನ್ನು ಕಬಳಿಸಿದರು. ಅವರು ತಮ್ಮ ನಾಲ್ಕು ಓವರ್‌ಗಳಲ್ಲಿ 51 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಇದರಲ್ಲಿ ಅವರು ತಮ್ಮ ಆರಂಭಿಕ ಎರಡು ಓವರ್‌ಗಳಲ್ಲಿ 40 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು ಮತ್ತು ಕೇವಲ ಒಂದು ವಿಕೆಟ್ ಪಡೆದಿದ್ದರು. ಆದಾಗ್ಯೂ, ಕೊನೆಯ ಎರಡು ಓವರ್‌ಗಳಲ್ಲಿ ಅವರು 11 ರನ್‌ಗಳನ್ನು ಬಿಟ್ಟುಕೊಟ್ಟು ನಾಲ್ಕು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಗಮನಾರ್ಹ ಕಮ್‌ಬ್ಯಾಕ್ ಮಾಡಿದರು.

ಸಂಜು ಸ್ಯಾಮ್ಸನ್‌ ಬದಲು ಇಶಾನ್‌ ಕಿಶನ್‌ ವಿಕೆಟ್‌ ಕೀಪಿಂಗ್‌ ನಿರ್ವಹಿಸಲು ಕಾರಣ ತಿಳಿಸಿದ ಸೂರ್ಯಕುಮಾರ್‌!

ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಅರ್ಷದೀಪ್‌ ಸಿಂಗ್‌

ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಐದು ವಿಕೆಟ್‌ಗಳನ್ನು ಪಡೆದರೂ ಅನಗತ್ಯ ದಾಖಲೆಯೊಂದನ್ನು ಹೆಗಲೇರಿಸಿಕೊಂಡಿದ್ದಾರೆ. ಅವರು ತಮ್ಮ ಐದು ವಿಕೆಟ್‌ಗಳಿಗೆ 51 ರನ್‌ಗಳನ್ನು ನೀಡಿದರು. ಇದು ಟಿ20ಐ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಐದು ವಿಕೆಟ್ ಸಾಧನೆಯಾಗಿದೆ. ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದರೂ ರನ್‌ಗಳನ್ನು ಬಿಟ್ಟುಕೊಡುವ ವಿಷಯದಲ್ಲಿ ಅವರು ದುಬಾರಿ ಎಂದು ಸಾಬೀತುಪಡಿಸಿದರು.

ಭಾರತ ತಂಡಕ್ಕೆ 46 ರನ್‌ ಜಯ

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು. ಇಶಾನ್ ಕಿಶನ್ 103 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಾಯಕ ಸೂರ್ಯಕುಮಾರ್ ಯಾದವ್ ಕೂಡ 30 ಎಸೆತಗಳಲ್ಲಿ 63 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 42 ಮತ್ತು ಅಭಿಷೇಕ್ ಶರ್ಮಾ 30 ರನ್ ಗಳಿಸಿದರು.

IND vs NZ: ಇಶಾನ್‌ ಕಿಶನ್‌ ಸ್ಪೋಟಕ ಶತಕ, ಕಿವೀಸ್‌ ಎದುರು ಐದನೇ ಪಂದ್ಯದಲ್ಲಿಯೂ ಭಾರತಕ್ಕೆ ಭರ್ಜರಿ ಜಯ!

ನ್ಯೂಜಿಲೆಂಡ್‌ 225ಕ್ಕೆ ಆಲ್‌ಔಟ್‌

ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯೂಜಿಲೆಂಡ್ ತಂಡ ಆಕ್ರಮಣಕಾರಿ ಆಟವನ್ನು ಆಡಿತು. ವಿಶೇಷವಾಗಿ ಫಿನ್ ಆಲೆನ್ 38 ಎಸೆತಗಳಲ್ಲಿ 80 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು. ಆದರೆ, ಅರ್ಷದೀಪ್‌ ಸಿಂಗ್‌ 5 ವಿಕೆಟ್ ಮತ್ತು ಅಕ್ಷರ್ ಪಟೇಲ್ ಅವರ 3 ವಿಕೆಟ್ ಪಡೆಯುವ ಮೂಲಕ ಪ್ರವಾಸಿಗರನ್ನು ಆಘಾತಕ್ಕೆ ಒಳಪಡಿಸಿದರು. ಅಂತಿಮವಾಗಿ ಕಿವೀಸ್‌ 225 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ಭಾರತ ತಂಡ 5 ಪಂದ್ಯಗಳ ಟಿ20ಐ ಸರಣಿಯನ್ನು 4-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು.