ತಿರುವನಂತಪುರಂ: ನ್ಯೂಜಿಲೆಂಡ್ ವಿರುದ್ಧ ಐದನೇ ಹಾಗೂ ಟಿ20ಐ ಸರಣಿಯ (IND vs NZ) ಕೊನೆಯ ಪಂದ್ಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar yadav) ಸ್ಪೋಟಕ ಅರ್ಧಶತಕವನ್ನು ಬಾರಿಸಿದರು. ಈ ಇನಿಂಗ್ಸ್ ಮೂಲಕ ಅವರು ತಮ್ಮ ಟಿ20ಐ ವೃತ್ತಿ ಜೀವನದಲ್ಲಿ ದೊಡ್ಡ ದಾಖಲೆಯನ್ನು ಬರೆಯುವ ಮೂಲಕ 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯ ನಿಮಿತ್ತ ಎದುರಾಳಿ ತಂಡಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಜನವರಿ 31 ರಂದು ಇಲ್ಲಿನ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಐದನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಆಡಿದ ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 63 ರನ್‌ಗಳನ್ನು ಬಾರಿಸಿದರು.
ಈ ಸ್ಪೋಟಕ ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 3000 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ಯುಎಇ ಬ್ಯಾಟರ್ ಮುಹಮ್ಮದ್ ವಸೀಮ್ ಅವರ ದಾಖಲೆಯನ್ನು ಮುರಿದರು. ಇವರು 1,947 ಎಸೆತಗಳಲ್ಲಿ ಈ ಮೈಲುಗಲ್ಲು ತಲುಪಿದ್ದಾರೆ. ಇವರು 2025ರ ಏಷ್ಯಾ ಕಪ್ ಟೂರ್ನಿಯ ಸಂದರ್ಭದಲ್ಲಿ ಈ ದಾಖಲೆಯನ್ನು ಬರೆದಿದ್ದರು. ಇದೀಗ ಸೂರ್ಯ ಯುಇಎ ಬ್ಯಾಟರ್ ಅನ್ನು ಹಿಂದಿಕ್ಕಿದ್ದಾರೆ.
IND vs NZ: ಟಿ20ಐ ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿದ ಇಶಾನ್ ಕಿಶನ್!
ಲಾಕಿ ಫರ್ಗ್ಯೂಸನ್ ಅವರ ಫ್ರೀ ಹಿಟ್ ಎಸೆತದಲ್ಲಿ ಫುಲ್ ಟಾಸ್ ಹಾಕಿದ್ದರು, ಇದನ್ನು ಸದುಪಯೋಗಪಡಿಸಿಕೊಂಡ ಸೂರ್ಯಕುಮಾರ್ ಯಾದವ್ ಥರ್ಡ್ ಮ್ಯಾನ್ ಕಡೆಗೆ ಬೌಂಡರಿ ಬಾರಿಸಿದರು. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ 3000 ರನ್‌ಗಳನ್ನು ಪೂರ್ಣಗೊಳಿಸಿದರು. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಳಿಕ ಈ ಸಾಧನೆ ಮಾಡಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.
ಟಿ20ಐ ಕ್ರಿಕೆಟ್‌ನಲ್ಲಿ ವೇಗವಾಗಿ 3000 ರನ್ ಗಳಿಸಿದ ಬ್ಯಾಟರ್ಸ್
1822 - ಸೂರ್ಯುಕುಮಾರ್ ಯಾದವ್ (ಭಾರತ)
1947 - ಮುಹಮ್ಮದ್ ವಸೀಮ್ (ಯುಎಇ)
2068 -ಜೋಸ್ ಬಟ್ಲರ್ (ಇಂಗ್ಲೆಂಡ್)
2077 -ಆರೋನ್ ಫಿಂಚ್ (ಆಸ್ಟ್ರೇಲಿಯಾ)
2113 - ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)
271 ರನ್ ಕಲೆ ಹಾಕಿದ ಭಾರತ
ಸೂರ್ಯಕುಮಾರ್ ಯಾದವ್ ಅರ್ಧಶತಕ ಹಾಗೂ ಇಶಾನ್ ಕಿಶನ್ ಅವರ ಚೊಚ್ಚಲ ಶತಕದ ಬಲದಿಂದ ಭಾರತ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 271 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ 272 ರನ್‌ಗಳನ್ನು ಬೃಹತ್ ಮೊತ್ತದ ಗುರಿಯನ್ನು ನೀಡಿತು. ಇಶಾನ್ ಕಿಶನ್ 43 ಎಸೆತಗಳಲ್ಲಿ 103 ರನ್‌ಗಳನ್ನು ಗಳಿಸಿದರೆ, ಹಾರ್ದಿಕ್ ಪಾಂಡ್ಯ 47 ರನ್‌ಗಳನ್ನು ಬಾರಿಸಿದ್ದರು.