ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs NZ: ʻಚಾಂಪಿಯನ್ಸ್‌ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಭಾರತʼ-ಸೌರವ್‌ ಗಂಗೂಲಿ!

Sourav Ganguly backs India in Final of CT 2025: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ದುಬೈ ಇಂಟರ್‌ನ್ಯಾನಷಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್‌ನಲ್ಲಿ ಕಾದಾಟ ನಡೆಸುತ್ತಿವೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಭಾರತ ಎಂದು ಮಾಜಿ ನಾಯಕ ಸೌರವ್‌ ಗಂಗೂಲಿ ಭವಿಷ್ಯ ನುಡಿದಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಭಾರತ ಎಂದ ಸೌರವ್‌ ಗಂಗೂಲಿ!

ಭಾರತ ತಂಡವನ್ನು ಬೆಂಬಲಿಸಿದ ಸೌರವ್‌ ಗಂಗೂಲಿ

Profile Ramesh Kote Mar 9, 2025 3:31 PM

ದುಬೈ: ಪ್ರಸ್ತುತ ನಡೆಯುತ್ತಿರುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಭಾರತ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಟೀಮ್‌ ಇಂಡಿಯಾ ಮಾಜಿ ನಾಯಕ ಸೌರವ್‌ ಗಂಗೂಲಿ ಭವಿಷ್ಯ ನುಡಿದಿದ್ದಾರೆ. ಇಲ್ಲಿನ ದುಬೈ ಇಂಟರ್‌ನ್ಯಾಷನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್‌ ಹಣಾಹಣಿಯಲ್ಲಿ ಎರಡೂ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡ ಭಾರತವಾದರೂ ಕಿವೀಸ್‌ ತಂಡವನ್ನು ಮಣಿಸುವುದು ಅಷ್ಟೊಂದು ಸುಲಭವಲ್ಲ. ಅಂದ ಹಾಗೆ ಲೀಗ್‌ ಹಂತದ ಪಂದ್ಯದಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ, ಎದುರಾಳಿ ನ್ಯೂಜಿಲೆಂಡ್‌ ತಂಡವನ್ನು ಮಣಿಸಿತ್ತು. ಇದೀಗ ಅದೇ ಲಯವನ್ನು ಫೈನಲ್‌ನಲ್ಲಿ ಮುಂದುವರಿಸಲು ಎದುರು ನೋಡುತ್ತಿದೆ.

ಇಂಡಿಯಾ ಟುಡೇ ಜೊತೆ ಮಾತನಾಡಿದ ಸೌರವ್‌ ಗಂಗೂಲಿ, ಭಾನುವಾರ ನಡೆಯುವ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು ಮಣಿಸಿ ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಭಾರತ ಹಾಗೂ ಕಿವೀಸ್‌ ನಡುವಣ ಐಸಿಸಿ ಟೂರ್ನಿಗಳ ನಾಕ್‌ಔಟ್‌ ಪಂದ್ಯಗಳಲ್ಲಿ ನ್ಯೂಜಿಲೆಂಡ್‌ ತಂಡ ಪ್ರಾಬಲ್ಯ ಸಾಧಿಸಿದೆ. ಆದರೂ ವಿರಾಟ್‌ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಉತ್ತಮ ಫಾರ್ಮ್‌ನಲ್ಲಿರುವ ಕಾರಣ ಟೀಮ್‌ ಇಂಡಿಯಾ ಫೈನಲ್‌ನಲ್ಲಿ ಗೆಲುವು ಪಡೆಯಲಿದೆ ಎಂದು ದಾದಾ ಅಂದಾಜಿಸಿದ್ದಾರೆ.

IND vs NZ Final: ಟಾಸ್‌ ಸೋತು ಬೌಲಿಂಗ್‌ ಆಹ್ವಾನ ಪಡೆದ ಭಾರತ

"ಭಾರತ ಗೆಲ್ಲುವ ನೆಚ್ಚಿನ ತಂಡ. ಭಾರತ ತಂಡ ಉತ್ತಮ ಫಾರ್ಮ್‌ನಲ್ಲಿದೆ. ತಂಡದಲ್ಲಿರುವ ಪ್ರತಿಯೊಬ್ಬರೂ ಅತ್ಯುತ್ತಮ ಲಯದಲ್ಲಿದ್ದಾರೆ. ವಿರಾಟ್‌ ಕೊಹ್ಲಿ ಇದ್ದಾರೆ, ಶುಭಮನ್‌ ಗಿಲ್‌ ಇದ್ದಾರೆ, ಶ್ರೇಯಸ್‌ ಅಯ್ಯರ್‌, ರೋಹಿತ್‌ ಶರ್ಮಾ ಹಾಗೂ ಕೆಎಲ್‌ ರಾಹುಲ್‌ ಕೂಡ ಇದ್ದಾರೆ. ಭಾರತ ತಂಡದ ಪ್ರತಿಯೊಬ್ಬರೂ ಅಗ್ರ ಸ್ಥಾನದಲ್ಲಿದ್ದಾರೆ. ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವಣ ಫೈನಲ್‌ ಒಳ್ಳೆಯ ಪಂದ್ಯವಾಗಿದೆ. ಟೀಮ್‌ ಇಂಡಿಯಾದ ಬೌಲಿಂಗ್‌ ಲೈನ್‌ ಅಪ್‌ ಚೆನ್ನಾಗಿತ್ತಿದೆ. ಯಾರಾದರೂ ಗೆಲ್ಲಬಹುದು ಅಥವಾ ಯಾರಾದರೂ ಸೋಲಬಹುದು," ಎಂದು ಸೌರವ್‌ ಗಂಗೂಲಿ ತಿಳಿಸಿದ್ದಾರೆ.

IND vs NZ: ಕುಮಾರ ಸಂಗಕ್ಕಾರ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್‌ ಕೊಹ್ಲಿ!

ರೋಹಿತ್‌ ಶರ್ಮಾ ಭವಿಷ್ಯದ ಬಗ್ಗೆ ದಾದಾ ಹೇಳಿದ್ದೇನು?

ಐಸಿಸಿ ಎಲ್ಲಾ ಟೂರ್ನಿಗಳ ಫೈನಲ್‌ಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್‌ ಶರ್ಮಾ ಬರೆದಿದ್ದಾರೆ.

ಆದರೆ, ಅವರು ಇತ್ತೀಚೆಗೆ ತಮ್ಮ ಬ್ಯಾಟಿಂಗ್‌ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಇಂಗ್ಲೆಂಡ್‌ ವಿರುದ್ಧ ಕಳೆದ ಏಕದಿನ ಸರಣಿಯಲ್ಲಿ ಶತಕ ಸಿಡಿಸಿದ್ದ ರೋಹಿತ್‌ ಶರ್ಮಾ ಅದೇ ಲಯವನ್ನು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಮುಂದುವರಿಸುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ವಿದಾಯ ಹೇಳಬಹುದೆಂಬ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಸೌರವ್‌ ಗಂಗೂಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.



ರೋಹಿತ್‌ ಶರ್ಮಾ ಅವರ ನಿವೃತ್ತಿಯನ್ನು ನಿರಾಕರಿಸಿದ ಸೌರವ್‌ ಗಂಗೂಲಿ, ಅವರು 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯವರೆಗೂ ಆಡಬೇಕೆಂದು ಆಗ್ರಹಿಸಿದ್ದಾರೆ. "ರೋಹಿತ್‌ ಶರ್ಮಾ ನಿವೃತ್ತಿಯ ಬಗ್ಗೆ ಏಕೆ ಮಾತನಾಡಬೇಕು? ಇದೀಗ ಈ ಬಗ್ಗೆ ಪ್ರಶ್ನೆ ಏಕೆ? ಕಳೆದ ಕೆಲವೇ ತಿಂಗಳುಗಳಲ್ಲಿ ಅವರು ವಿಶ್ವಕಪ್‌ ಗೆದ್ದಿದ್ದಾರೆ. ಸೆಲೆಕ್ಟರ್‌ಗಳು ಏನನ್ನೂ ಯೋಚಿಸುತ್ತಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ರೋಹಿತ್‌ ಶರ್ಮಾ ಉತ್ತಮವಾಗಿ ಆಡುತ್ತಿದ್ದಾರೆ. ನ್ಯೂಜಿಲೆಂಡ್‌ ತಂಡಕ್ಕಿಂತ ಭಾರತ ಉತ್ತಮವಾಗಿದೆ. 2023ರ ಏಕದಿನ ವಿಶ್ವಕಪ್‌ ಫೈನಲ್‌ ಆಡಿದ್ದ ಭಾರತ, 2025ರ ಟಿ20 ವಿಶ್ವಕಪ್‌ ಗೆದ್ದಿತ್ತು ಹಾಗೂ ಇದೀಗ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಸೋಲಿಲ್ಲದೆ ಫೈನಲ್‌ಗೆ ಪ್ರವೇಶ ಮಾಡಿದೆ. ಅದೇ ಪ್ಲೇಯಿಂಗ್‌ XI ಇದೀಗ ಫೈನಲ್‌ನಲ್ಲಿ ಆಡುತ್ತಿದೆ" ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ತಿಳಿಸಿದ್ದಾರೆ.