ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shreyas Iyes: ನ್ಯೂಜಿಲೆಂಡ್‌ ಏಕದಿನ ಸರಣಿಯ ಭಾರತ ತಂಡಕ್ಕೆ ಸ್ಟಾರ್‌ ಬ್ಯಾಟ್ಸ್‌ಮನ್‌ ಎಂಟ್ರಿ!

India vs New Zealand: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿಯಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರು ಆಡಲಿದ್ದಾರೆ. ಇವರ ಜೊತೆಗೆ ಮತ್ತೊಬ್ಬ ಸ್ಟಾರ್‌ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಈ ಸರಣಿಯಲ್ಲಿ ಆಡಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಸಿಸಿಐ ಮೂಲಗಳು ಮಾಹಿತಿಯನ್ನು ನೀಡಿವೆ.

ನ್ಯೂಜಿಲೆಂಡ್‌ ಏಕದಿನ ಸರಣಿಗೆ ಶ್ರೇಯಸ್‌ ಅಯ್ಯರ್‌?

ನವದೆಹಲಿ: ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ (IND vs NZ) ಆರಂಭಕ್ಕೂ 17 ದಿನಗಳಿಗೂ ಮುನ್ನ ಭಾರತ (India) ತಂಡಕ್ಕೆ ಆನೆ ಬಲಬಂದಂತಾಗಿದೆ. ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಗಾಯಕ್ಕೆ ತುತ್ತಾಗಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ (Shreyas Iyer) ಸಂಪೂರ್ಣ ಗುಣಮುಖರಾಗಿದ್ದು, ಬೆಂಗಳೂರಿನಲ್ಲಿರುವ ಬಿಸಿಸಿಐ ಆಫ್‌ ಎಕ್ಸ್‌ಲೆನ್ಸ್‌ ಮೈದಾನದಲ್ಲಿ ಬ್ಯಾಟಿಂಗ್‌ ಅಭ್ಯಾಸವನ್ನು ಆರಂಭಿಸಿದ್ದಾರೆ. ಆ ಮೂಲಕ ಕಿವೀಸ್‌ ಎದುರಿನ ಏಕದಿನ ಸರಣಿಗೂ ಮುನ್ನ ಬಲಗೈ ಬ್ಯಾಟ್ಸ್‌ಮನ್‌ ಸಜ್ಜಾಗುತ್ತಿದ್ದಾರೆಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಲುವಾಗಿ ಶ್ರೇಯಸ್‌ ಅಯ್ಯರ್‌ ಅವರು ನೆಟ್ಸ್‌ನಲ್ಲಿ ಸುಮಾರು ಒಂದು ಗಂಟೆ ಯಾವುದೇ ಅಡೆತಡೆ ಇಲ್ಲದೆ ಬ್ಯಾಟಿಂಗ್‌ ಅಭ್ಯಾಸವನ್ನು ನಡೆಸಿದ್ದಾರೆಂದು ವರದಿಯಾಗಿದೆ. ಅಂದ ಹಾಗೆ ಶ್ರೇಯಸ್‌ ಅಯ್ಯರ್‌ ಅವರು ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಆಡಿದ್ದರು. ಈ ವೇಳೆ ಫೀಲ್ಡಿಂಗ್‌ನಲ್ಲಿ ಗಾಯಕ್ಕೆ ತುತ್ತಾಗಿದ್ದರು. ಇದರ ಪರಿಣಾಮವಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಹಾಗೂ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ಆಡಿರಲಿಲ್ಲ. ಇದೀಗ ನಡೆಯುತ್ತಿರುವ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯಲ್ಲಿಯೂ ಅವರು ಆಡುತ್ತಿಲ್ಲ.

IND vs SA: ಹಾರ್ದಿಕ್‌ ಪಾಂಡ್ಯ ಅಬ್ಬರ, 5ನೇ ಪಂದ್ಯ ಗೆದ್ದು ಟಿ20ಐ ಸರಣಿ ಮುಡಿಗೇರಿಸಿಕೊಂಡ ಭಾರತ!

ಇದೀಗ ಫಿಟ್ನೆಸ್‌ ಹಾಗೂ ಬ್ಯಾಟಿಂಗ್‌ ಅಭ್ಯಾಸ ನಡೆಸುತ್ತಿರುವ ಶ್ರೇಯಸ್‌ ಅಯ್ಯರ್‌ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಆದರೆ, ಇದರ ಬಗ್ಗೆ ಇನ್ನೂ ಯಾವುದೇ ಖಚಿತವಿಲ್ಲ.

ಈ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿದ ಬಿಸಿಸಿಐ ಅಧಿಕಾರಿ, "ಶ್ರೇಯಸ್‌ ಅಯ್ಯರ್‌ ಅವರು ಆಸ್ಟ್ರೇಲಿಯಾದಲ್ಲಿ ಅನಿರೀಕ್ಷಿತವಾಗಿ ಗಾಯಕ್ಕೆ ತುತ್ತಾಗಿದ್ದರು ಹಾಗೂ ಇದರ ಪರಿಣಾಮ ಅವರು ಸಾಕಷ್ಟು ಕ್ರಿಕೆಟ್‌ ಅನ್ನು ಕಳೆದುಕೊಂಡಿದ್ದಾರೆ. ಇದೀಗ ಶುಭ ಸಂಕೇತ ಅಂದರೆ, ಮುಂಬೈನಲ್ಲಿ ಶ್ರೇಯಸ್‌ ಅಯ್ಯರ್‌ ಅವರು ಯಾವುದೇ ತೊಂದರೆ ಇಲ್ಲದೆ ಬ್ಯಾಟಿಂಗ್‌ ನಡೆಸುತ್ತಿದ್ದಾರೆ," ಎಂದು ಹೇಳಿದ್ದಾರೆ.

ಬಲಗೈ ಬ್ಯಾಟ್ಸ್‌ಮನ್‌ ಆರು ದಿನಗಳ ಕಾಲ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ನಲ್ಲಿ ಸಮಯ ಕಳೆಯಲಿದ್ದಾರೆ. ಆ ಮೂಲಕ ಅವರು ಇಲ್ಲಿ ತಮ್ಮ ಕಮ್‌ಬ್ಯಾಕ್‌ ಬಗ್ಗೆ ಸ್ಪಷ್ಟತೆ ಸಿಗಲಿದೆ. ಅಯ್ಯರ್‌ ಈಗಾಗಲೇ ಜಿಮ್‌ನಲ್ಲಿ ನಿಯಮಿತವಾಗಿ ಫಿಟ್‌ನೆಸ್‌ ಮಾಡುತ್ತಿದ್ದಾರೆ ಹಾಗೂ ಅವರ ಸ್ಕ್ಯಾನ್‌ಗೆ ಸಂಬಂಧಿಸಿದ ಎಲ್ಲಾ ವರದಿಗಳಲ್ಲಿ ಯಾವುದೇ ಸಮಸ್ಯೆ ಇರುವ ರೀತಿ ಕಾಣುತ್ತಿಲ್ಲ.

2025ರ ವರ್ಷದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತದ ಟಾಪ್‌ 5 ಬ್ಯಾಟ್ಸ್‌ಮನ್‌ಗಳು!

"ಅವರು ಈಗಾಗಲೇ ಜಿಮ್‌ನಲ್ಲಿ ನಿಯಮಿತ ತರಬೇತಿಗೆ ಮರಳಿದ್ದಾರೆ. ಆದ್ದರಿಂದ, ಈ ಸಮಯದಲ್ಲಿ ಯಾವುದೇ ಎಚ್ಚರಿಕೆ ನೀಡಲಾಗುವುದಿಲ್ಲ, ಆದರೆ ಎಲ್ಲವೂ ಸಿಒಇ ಮೌಲ್ಯಮಾಪನವನ್ನು ಅವಲಂಬಿಸಿರುತ್ತದೆ. ಅವರು ನಾಲ್ಕರಿಂದ ಆರು ದಿನಗಳವರೆಗೆ ಅಲ್ಲಿಯೇ ಇರುತ್ತಾರೆ," ಎಂದು ಅಧಿಕಾರಿ ಹೇಳಿದ್ದಾರೆ.

ಭಾರತ ತಂಡದ ಮುಂದಿನ ಏಕದಿನ ಸರಣಿಯು ಜನವರಿ 11 ರಂದು ನ್ಯೂಜಿಲೆಂಡ್ ವಿರುದ್ಧ ಆರಂಭವಾಗಲಿದ್ದು, ಜನವರಿ 2 ಅಥವಾ 3 ರಂದು ಭಾರತ ಏಕದಿನ ತಂಡವನ್ನು ಘೋಷಿಸುವ ಸಾಧ್ಯತೆಯಿದೆ. ಅಯ್ಯರ್ ಭಾಗವಹಿಸುವಿಕೆ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಇಲ್ಲ. ಆದರೆ ಸರಣಿಗೆ ಮರಳುವ ಸಾಧ್ಯತೆಯನ್ನು ಇನ್ನೂ ತಳ್ಳಿಹಾಕಲಾಗುವುದಿಲ್ಲ.