ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

28000 ರನ್‌ ಪೂರ್ಣಗೊಳಿಸಿ ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

Virat Kohli Scored 28000 Runs: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ, ನ್ಯೂಜಿಲೆಂಡ್‌ ವಿರುದ್ಧ ಮೊದಲನೇ ಏಕದಿನ ಪಂದ್ಯದಲ್ಲಿ 93 ರನ್‌ಗಳನ್ನು ಕಲೆ ಹಾಕಿದರು. ಆದರೆ, ಕೇವಲ 7 ರನ್‌ ಅಂತರದಲ್ಲಿ ಶತಕವನ್ನು ಕಳೆದುಕೊಂಡರು. ಆದರೂ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28000 ರನ್‌ಗಳನ್ನು ಪೂರ್ಣಗೊಳಿಸಿದ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಮುರಿದಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28000 ರನ್‌ ಗಳಿಸಿದ ಕೊಹ್ಲಿ. -

Profile
Ramesh Kote Jan 11, 2026 11:23 PM

ವಡೋದರ: ಭಾರತ ತಂಡದ ಮಾಜಿ ನಾಯಕ ಹಾಗೂ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಅನೇಕ ದಾಖಲೆಯನ್ನು ಬರೆದಿದ್ದಾರೆ. ಇದೀಗ ನ್ಯೂಜಿಲೆಂಡ್‌ ವಿರುದ್ಧ93 ರನ್‌ಗಳನ್ನು ಗಳಿಸುವ ಮೂಲಕ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಕಿವೀಸ್‌ ಸ್ಪಿನ್ನರ್‌ ಆದಿತ್ಯ ಅಶೋಕ್‌ ಅವರ ಎಸೆತದಲ್ಲಿ ವಿರಾಟ್‌ ಕೊಹ್ಲಿ ಈ ನೂತನ ಮೈಲುಗಲ್ಲು ತಲುಪಿದ್ದಾರೆ. ಅಂದ ಹಾಗೆ ವಿರಾಟ್‌ ಕೊಹ್ಲಿಯ ಅರ್ಧಶತಕದ ಬಲದಿಂದ ಭಾರತ ತಂಡ (India), ಮೊದಲನೇ ಏಕದಿನ ಪಂದ್ಯದಲ್ಲಿ (IND vs NZ) ನ್ಯೂಜಿಲೆಂಡ್‌ ವಿರುದ್ಧ 4 ವಿಕೆಟ್‌ ಗೆಲುವು ಸಾಧಿಸಿತು. ಆ ಮೂಲಕ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದ ಮೂರೂ ಸ್ವರೂಪದಲ್ಲಿ 28000 ರನ್‌ಗಳನ್ನು ಪೂರ್ಣಗೊಳಿಸಿದ್ದರೆ.ಆ ಮೂಲಕ ಮಾಸ್ಟರ್‌-ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹಾಗೂ ಶ್ರೀಲಂಕಾ ದಿಗ್ಗಜ ಕುಮಾರ ಸಂಗಕ್ಕಾರ ಅವರನ್ನು ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

IND vs NZ: ವಿರಾಟ್‌ ಕೊಹ್ಲಿ ಅರ್ಧಶತಕ, ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ ಜಯ!

ಸಚಿನ್‌ ದಾಖಲೆ ಮುರಿದ ಕೊಹ್ಲಿ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 28000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ವಿರಾಟ್‌ ಕೊಹ್ಲಿ ಬರೆದಿದ್ದಾರೆ. ಆ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ 624ನೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಇನಿಂಗ್ಸ್‌ನಲ್ಲಿ ಈ ದಾಖಲೆ ಬರೆದಿದ್ದರೆ, ಸಚಿನ್‌ ಈ ಸಾಧನೆ ಮಾಡಲು 644 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ. ಇನ್ನು ಕುಮಾರ ಸಂಗಕ್ಕಾರ 666ನೇ ಇನಿಂಗ್ಸ್‌ ಈ ಮೈಲುಗಲ್ಲು ತಲುಪಿದ್ದರು.



2023ರ ಫೆಬ್ರವರಿಯಲ್ಲಿ ಕೊಹ್ಲಿ 25,000 ರನ್‌ಗಳನ್ನು ತಲುಪಿದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ಆಗಿದ್ದರು. ಅವರು 549 ಇನಿಂಗ್ಸ್‌ಗಳಲ್ಲಿ ಈ ದಾಖಲೆಯನ್ನು ತಲುಪಿದ್ದರು, ಇದು ಸಚಿನ್ ತೆಂಡೂಲ್ಕರ್‌ಗಿಂತ 28 ಇನಿಂಗ್ಸ್‌ಗಳನ್ನು ಕಡಿಮೆ ತೆಗೆದುಕೊಂಡಿದ್ದರು. 2023ರ ಅಕ್ಟೋಬರ್‌ನಲ್ಲಿ ಕೊಹ್ಲಿ 26,000 ರನ್‌ಗಳನ್ನು ವೇಗವಾಗಿ ದಾಟಿದರು, ಮತ್ತೊಮ್ಮೆ ಸಚಿನ್ ಅವರನ್ನು 13 ಇನಿಂಗ್ಸ್‌ಗಳಿಂದ ಹಿಂದಿಕ್ಕಿದ್ದರು. ಒಂದು ವರ್ಷದ ನಂತರ 2024ರ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ 59ನೇ ಇನಿಂಗ್ಸ್‌ನಲ್ಲಿ 27,000 ರನ್‌ಗಳಿಗೆ ದಾಟಿದ್ದರು.

ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಕಿಂಗ್‌ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧ ಸತತ ಶತಕಗಳನ್ನು ಗಳಿಸಿದ್ದ ವಿರಾಟ್‌ ಕೊಹ್ಲಿ ಭಾರತ ತಂಡಕ್ಕೆ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಟ್ಟಿದ್ದರು. ನಂತರ ಕೊಹ್ಲಿ 2025ರ ಕ್ಯಾಲೆಂಡರ್ ವರ್ಷವನ್ನು 50 ಓವರ್‌ಗಳ ಸ್ವರೂಪದಲ್ಲಿ ಯಶಸ್ವಿಯಾಗಿ ಮುಗಿಸಿದರು. ನಂತರ ಅವರು ದೇಶಿ ಕ್ರಿಕೆಟ್‌ನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಆಡಿದ್ದರು. ಆಂಧ್ರ ಮತ್ತು ಗುಜರಾತ್ ವಿರುದ್ಧ ಕ್ರಮವಾಗಿ ಒಂದು ಶತಕ ಮತ್ತು ಅರ್ಧಶತಕ ಗಳಿಸಿದರು. ಆ ಮೂಲಕ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ 16 ರನ್‌ಗಳನ್ನು ಕಲೆ ಹಾಕಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 28000 ರನ್‌ ಗಳಿಸಿದ ಬ್ಯಾಟರ್ಸ್‌

624 ಇನಿಂಗ್ಸ್‌ಗಳು-ವಿರಾಟ್‌ ಕೊಹ್ಲಿ*

644 ಇನಿಂಗ್ಸ್‌ಗಳು – ಸಚಿನ್‌ ತೆಂಡೂಲ್ಕರ್‌

666 ಇನಿಂಗ್ಸ್‌ಗಳು–ಕುಮಾರ ಸಂಗಕ್ಕಾರ