ತಿರುವನಂತಪುರಂ: ನ್ಯೂಜಿಲೆಂಡ್ ವಿರುದ್ಧದ ಐದನೇ ಹಾಗೂ ಟಿ20ಐ ಸರಣಿಯ (IND vs NZ) ಕೊನೆಯ ಪಂದ್ಯದಲ್ಲಿ ಭಾರತ ತಂಡ, 46 ರನ್‌ಗಳಿಂದ ಗೆದ್ದು ಸರಣಿಯನ್ನು 4-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಅಂದ ಹಾಗೆ ಈ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ತಮ್ಮ ಸ್ಪೋಟಕ ಶತಕವನ್ನು ಬಾರಿಸಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅಂದ ಹಾಗೆ ಈ ಪಂದ್ಯದಲ್ಲಿ ಮತ್ತೊಂದು ವಿಶೇಷ ಘಟನೆ ನಡೆದಿತ್ತು. ಎರಡನೇ ಇನಿಂಗ್ಸ್‌ನಲ್ಲಿ ಸಂಜು ಸ್ಯಾಮ್ಸನ್ ಬದಲು ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಕಾರ್ಯನಿರ್ವಹಿಸಿದ್ದರು. ಆ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಸ್ಪಷ್ಟನೆಯನ್ನು ನೀಡಿದ್ದಾರೆ.
ಶನಿವಾರ ಇಲ್ಲಿನ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಐದನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡದ ಪರ ಸಂಜು ಸ್ಯಾಮ್ಸನ್ ಮತ್ತೊಮ್ಮೆ ವಿಫಲರಾದರು. ಅಭಿಷೇಕ್ ಶರ್ಮಾ 30 ರನ್‌ಗಳಿಸಿ ಔಟ್ ಆದರು. ಆ ಮೂಲಕ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಇಶಾನ್ ಕಿಶನ್, ಸ್ಪೋಟಕ ಬ್ಯಾಟ್ ಮಾಡಿದ್ದರು. ಅವರು ಕೇವಲ 42 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಅವರು 43 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 6 ಬೌಂಡರಿಗಳ ಮೂಲಕ 103 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಭಾರತ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 271 ರನ್‌ಗಳನ್ನು ಕಲೆ ಹಾಕಿದ್ದರು.
IND vs NZ: ಇಶಾನ್ ಕಿಶನ್ ಸ್ಪೋಟಕ ಶತಕ, ಕಿವೀಸ್ ಎದುರು ಐದನೇ ಪಂದ್ಯದಲ್ಲಿಯೂ ಭಾರತಕ್ಕೆ ಭರ್ಜರಿ ಜಯ!
ಬಳಿಕ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ ತಂಡ, ಫಿನ್ ಆಲೆನ್ ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಅರ್ಷದೀಪ್ ಸಿಂಗ್ ಪರಿಣಾಮಕಾರಿ ಬೌಲಿಂಗ್ ದಾಳಿಗೆ ನಲುಗಿತು. ಆ ಮೂಲಕ 19.4 ಓವರ್‌ಗಳಿಗೆ 225 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ 46 ರನ್‌ಗಳಿಂದ ಸೋಲು ಒಪ್ಪಿಕೊಂಡಿತು. ದ್ವಿತೀಯ ಇನಿಂಗ್ಸ್‌ನಲ್ಲಿ ಸಂಜು ಸ್ಯಾಮ್ಸನ್ ಬದಲು ಇಶಾನ್ ಕಿಶನ್ ಕೀಪಿಂಗ್ ಗ್ಲೌಸ್ ಧರಿಸಿ ಬಂದರು. ಆ ಮೂಲಕ ಎಲ್ಲರಿಗೂ ಎಚ್ಚರಿಕೆ ಮೂಡಿಸಿದರು ಹಾಗೂ 20 ಓವರ್‌ಗಳ ವರೆಗೆ ವಿಕೆಟ್ ಕೀಪಿಂಗ್ ನಿರ್ವಹಿಸಿದರು.
ಇಶಾನ್ ಕಿಶನ್‌ಗೆ ವಿಕೆಟ್ ಕೀಪಿಂಗ್ ನೀಡಲು ಕಾರಣ ತಿಳಿಸಿದ ಸೂರ್ಯ
ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಿದ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಟಿ20 ವಿಶ್ವಕಪ್ ಟೂರ್ನಿಯ ನಿಮಿತ್ತ ಐದು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ಗೆ ಮೂರು ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ನೀಡಿದರೆ, ಇನ್ನುಳಿದ ಎರಡು ಪಂದ್ಯಗಳಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲು ಮೊದಲೇ ನಿರ್ಧರಿಸಲಾಗಿತ್ತು ಎಂದು ಸೂರ್ಯಕುಮಾರ್ ಯಾದವ್ ಸ್ಪಷ್ಟನೆ ನೀಡಿದ್ದಾರೆ.
IND vz NZ: ಸ್ಪೋಟಕ ಅರ್ಧಶತಕದ ಮೂಲಕ ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್!
"ತಿಲಕ್ ವರ್ಮಾ ಅಲಭ್ಯರಾಗಿರುವ ಕಾರಣ, ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಇಬ್ಬರೂ ವಿಕೆಟ್ ಕೀಪರ್‌ಗಳು ಆಡಿದ್ದಾರೆ. ಈ ಸರಣಿಯ ಆರಂಭಕ್ಕೂ ಮುನ್ನ ಈ ಬಗ್ಗೆ ನಿರ್ಧರಿಸಲಾಗಿದೆ. ಮೂರು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ಗೆ ಹಾಗೂ ಇನ್ನುಳಿದ ಎರಡು ಪಂದ್ಯಗಳಲ್ಲಿ ಇಶಾನ್ ಕಿಶನ್‌ಗೆ ವಿಕೆಟ್ ಕೀಪರ್ ಜವಾಬ್ದಾರಿ ನೀಡುವುದಾಗಿ ತೀರ್ಮಾನಿಸಲಾಗಿತ್ತು,"ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
"ನಿಸ್ಸಂಶಯವಾಗಿ ಇಶಾನ್ ಕಿಶನ್ ಸಣ್ಣ ಗಾಯದಿಂದ ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಿದ್ದರು, ಆದರೆ, ಐದನೇ ಪಂದ್ಯದಲ್ಲಿ ಆಡಲು ಅವರಿಗೆ ಅವಕಾಶ ಸಿಕ್ಕಿತ್ತು. ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ನೀವು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ," ಎಂದು ಭಾರತ ತಂಡದ ನಾಯಕ ತಿಳಿಸಿದ್ದಾರೆ.