ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IND vs NZ: ನಾಲ್ಕನೇ ಟಿ20ಐ ಪಂದ್ಯದಲ್ಲಿ ಇಶಾನ್‌ ಕಿಶನ್‌ ಏಕೆ ಆಡುತ್ತಿಲ್ಲ? ಕಾರಣ ಇಲ್ಲಿದೆ!

Why Ishan Kishan not Playing in 4th T20I?: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಬುಧವಾರ ವಿಶಾಖಪಟ್ಟಣದಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಭಾರತ ತಂಡ, ಇಶಾನ್‌ ಕಿಶನ್‌ ಅವರನ್ನು ಕೈ ಬಿಟ್ಟು ವೇಗದ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ಆಡಿಸಿತು. ಇದಕ್ಕೆ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ.

ನಾಲ್ಕನೇ ಟಿ20ಐ ಪಂದ್ಯದಲ್ಲಿ ಇಶಾನ್‌ ಕಿಶನ್‌ ಏಕೆ ಆಡುತ್ತಿಲ್ಲ?

ನಾಲ್ಕನೇ ಟಿ20ಐ ಪಂದ್ಯದಲ್ಲಿ ಇಶಾನ್‌ ಕಿಶನ್‌ ಏಕೆ ಆಡುತ್ತಿಲ್ಲ? -

Profile
Ramesh Kote Jan 28, 2026 9:22 PM

ವಿಶಾಖಪಟ್ಟಣಂ: ಇಲ್ಲಿನ ಆಂಧ್ರ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ (IND vs NZ) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯಕ್ಕೆ ಭಾರತ ತಂಡ (India's Playing XI) ತನ್ನ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಂಡಿತು. ಇನ್‌ಫಾರ್ಮ್‌ ಬ್ಯಾಟರ್‌ ಇಶಾನ್‌ ಕಿಶನ್‌ (Ishan Kishan) ಅವರ ಬದಲು ಯುವ ವೇಗಿ ಅರ್ಷದೀಪ್‌ ಸಿಂಗ್‌ಗೆ ಅವಕಾಶವನ್ನು ನೀಡಲಾಯಿತು. ಆ ಮೂಲಕ ಕಳೆದ ಪಂದ್ಯಗಳಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಿದ್ದ ಇಶಾನ್‌ ಕಿಶನ್‌ ಅವರನ್ನು ಕೈ ಬಿಟ್ಟಿದ್ದರಿಂದ ಅಭಿಮಾನಿಗಳಿಗೆ ಅಚ್ಚರಿ ಉಂಟಾಯಿತು.

ಫೆಬ್ರವರಿ 7 ರಂದು ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ಐದು ಪಂದ್ಯಗಳ ಟಿ20ಐ ಸರಣಿಯೂ ಉಭಯ ತಂಡಗಳಿಗೆ ತುಂಬಾ ಮುಖ್ಯವಾಗಿದೆ. ಆದರೆ, ಆರಂಭಿಕ ಮೂರೂ ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ, ಟಿ20ಐ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಹಾಗಾಗಿ ಕೊನೆಯ ಎರಡು ಪಂದ್ಯಗಳಲ್ಲಿ ಭಾರತ ತಂಡ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಪ್ರಯೋಗ ನಡೆಸಲಿದೆ. ಅಲ್ಲದೆ ತನ್ನ ಬೆಂಚ್‌ ಸಾಮರ್ಥ್ಯವನ್ನು ಪರೀಕ್ಷಿಸಲಿದೆ.

IND vs NZ: ನಾಲ್ಕನೇ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

ನಾಲ್ಕನೇ ಟಿ20ಐ ಪಂದ್ಯದಲ್ಲಿ ಇಶಾನ್‌ ಕಿಶನ್‌ ಏಕೆ ಆಡುತ್ತಿಲ್ಲ?

ನಾಲ್ಕನೇ ಟಿ20ಐ ಪಂದ್ಯದ ಭಾರತ ತಂಡದ ಪ್ಲೇಯಿಂಗ್‌ XIನಿಂದ ಇಶಾನ್‌ ಕಿಶನ್‌ ಅವರನ್ನು ಕೈ ಬಿಡಲಾಗಿದೆ. ಇದರಿಂದ ಹಲವರಿಗೆ ಅಚ್ಚರಿ ಉಂಟಾಗಿದೆ. ಏಕೆಂದರೆ ಇಶಾನ್‌ ಕಿಶನ್‌ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಅಂದ ಹಾಗೆ ಇಶಾನ್‌ ಕಿಶನ್‌ ಅವರನ್ನು ಆಡಿಸದೇ ಇರಲು ಕಾರಣವೇನೆಂದು ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಟಾಸ್‌ ವೇಳೆ ಬಹಿರಂಗಪಡಿಸಿದ್ದಾರೆ. ಎಡಗೈ ಬ್ಯಾಟ್ಸ್‌ಮನ್‌ ಸಣ್ಣ ಪುಟ್ಟ ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ಕಾರಣದಿಂದ ಅವರನ್ನು ಕೈ ಬಿಡಲಾಗಿದೆ ಎಂದು ತಿಳಿಸಿದ್ದಾರೆ.



ಭಾರತ ತಂಡದ ಪರ ಆಡಿ ಇಶಾನ್‌ ಕಿಶನ್‌ ಹಲವು ವರ್ಷಗಳು ಕಳೆದಿದ್ದವು. ಅವರು ಇತ್ತೀಚೆಗೆ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ತೋರಿದ ಪ್ರದರ್ಶನದ ಆಧಾರದ ಮೇಲೆ 2026ರ ಐಸಿಸಿ ಟಿ20 ವಿಶ್ವಕಪ್‌ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್‌ ಸರಣಿಯಲ್ಲಿಯೂ ಅವರನ್ನು ಆಡಿಸಲಾಗುತ್ತಿದೆ. ಅದರಂತೆ ಎರಡನೇ ಟಿ20ಐ ಪಂದ್ಯದಲ್ಲಿ ಪ್ರಭಾವಶಾಲಿ ಅರ್ಧಶತಕವನ್ನು ಬಾರಿಸಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

T20 World Cup 2026: ಈ ಬಾರಿ ಟಿ20 ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ರಾಹುಲ್‌ ದ್ರಾವಿಡ್‌!

ನಾಲ್ಕನೇ ಟಿ20ಐ ಪಂದ್ಯಕ್ಕೆ ಭಾರತದ ಪ್ಲೇಯಿಂಗ್‌ xi

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್‌ದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್‌ ಬುಮ್ರಾ

ನಾಲ್ಕನೇ ಟಿ20ಐ ಪಂದ್ಯಕ್ಕೆ ನ್ಯೂಜಿಲೆಂಡ್‌ ಪ್ಲೇಯಿಂಗ್‌ xi

ಟಿಮ್ ಸೀಫರ್ಟ್(ವಿಕೆಟ್‌ ಕೀಪರ್‌), ಡೆವೋನ್ ಕಾನ್ವೇ, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಝಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ