Asia Cup: ಒಮಾನ್ ವಿರುದ್ದ ಅರ್ಧಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್!
Sanju Samson Creates history in T20s: ಒಮಾನ್ ವಿರುದ್ದ 2025ರ ಏಷ್ಯಾ ಕಪ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅರ್ಧಶತಕವನ್ನು ಬಾರಿಸಿದರು. ಆ ಮೂಲಕ ಭಾರತ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ಒಮಾನ್ ವಿರುದ್ಧ ಅರ್ಧಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್. -

ನವದೆಹಲಿ: ಯುಎಇ ಮತ್ತು ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್‌ಗೆ ಅವಕಾಶ ಕಳೆದುಕೊಂಡಿದ್ದ ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson), ಒಮಾನ್ (Oman) ವಿರುದ್ಧ ನಿರ್ಣಾಯಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಅವರು ಅರ್ಧಶತಕವನ್ನು ಸಿಡಿಸುವ ಮೂಲಕ ಭಾರತ ತಂಡದ (India) 21 ರನ್‌ಗಳ ಗೆಲುವಿಗೆ ನೆರವು ನೀಡಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಆ ಮೂಲಕ ಮೂರನೇ ಕ್ರಮಾಂಕದಲ್ಲಿ ಸಿಕ್ಕಿದ್ದ ಅವಕಾಶವನ್ನು ಸಂಜು ಸ್ಯಾಮ್ಸನ್ ಸದುಪಯೋಗಪಡಿಸಿಕೊಂಡಿದ್ದಾರೆ. ಅಂದ ಹಾಗೆ ಭಾರತ ತಂಡ ಆರಂಭಿಕ ಎರಡು ಪಂದ್ಯಗಳನ್ನು ಗೆದ್ದಿದ್ದರ ಫಲವಾಗಿ ಸೂಪರ್-4ಕ್ಕೆ ಅರ್ಹತೆ ಪಡೆದಿತ್ತು. ಹಾಗಾಗಿ ಒಮಾನ್ ವಿರುದ್ದದ ಪಂದ್ಯದ ಫಲಿತಾಂಶ ಭಾರತದ ಹಾದಿಗೆ ಯಾವುದೇ ಪರಿಣಾಮ ಬೀರಲಿಲ್ಲ.
ಶೇಖ್ ಜಾಯೇದ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದಿದ್ದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಪರ ಇನಿಂಗ್ಸ್ ಆರಭಿಸಿದ ಶುಭಮನ್ ಗಿಲ್ ಬಹುಬೇಗ ಕ್ಲೀನ್ ಬೌಲ್ಡ್ ಆದರು. ಆದರೆ, ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಕ್ರೀಸ್‌ಗೆ ಬಂದ ಸಂಜು ಸ್ಯಾಮ್ಸನ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಅವರು ಆಡಿದ 45 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಬೌಂಡರಿಗಳೊಂದಿಗೆ 56 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಭಾರತ ತಂಡ 188 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು. ಬಳಿಕ ಗುರಿ ಹಿಂಬಾಲಿಸಿದ ಒಮಾನ್ ಕೂಡ ಕಠಿಣ ಹೋರಾಟ ನಡೆಸಿತ್ತು. ಆಮಿರ್ ಕಲೀಮ್ ಹಾಗೂ ಹಮದ್ ಮಿರ್ಜಾ ಅವರ ಅರ್ಧಶತಕಗಳ ಬಲದಿಂದ ಒಮಾನ್ ತಂಡ 167 ರನ್‌ಗಳನ್ನು ಕಲೆ ಹಾಕಿತು. ಆದರೆ, ಕೇವಲ 21 ರನ್‌ಗಳಿಂದ ಸೋಲು ಒಪ್ಪಿಕೊಂಡಿತು.
Asia Cup 2025: ಶ್ರೀಲಂಕಾ ವಿರುದ್ಧ ಸತತ 5 ಸಿಕ್ಸರ್ ಬಾರಿಸಿದ ಮೊಹಮ್ಮದ್ ನಬಿ! ವಿಡಿಯೊ
ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್
ಏಷ್ಯಾ ಕಪ್ ಟೂರ್ನಿಗೂ ಮುನ್ನ ಸಂಜು ಸ್ಯಾಮ್ಸನ್‌ಗೆ ಭಾರತ ತಂಡದ ಪ್ಲೇಯಿಂಗ್ xiನಲ್ಲಿ ಅವಕಾಶ ಸಿಗುವುದು ಅನುಮಾನ ಎಂದೇ ಹೇಳಲಾಗಿತ್ತು. ಏಕೆಂದರೆ ಶುಭಮನ್ ಗಿಲ್ ಅವರು ತಂಡಕ್ಕೆ ಉಪ ನಾಯಕನಾಗಿ ಬಂದಿದ್ದರಿಂದ ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಲು ಅವಕಾಶವನ್ನು ಪಡೆದುಕೊಂಡಿದ್ದರು. ಆದರೆ, ಸಂಜು ಸ್ಯಾಮ್ಸನ್‌ಗೆ ಆರಂಭಿಕ ಎರಡು ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನೀಡಲಾಗಿತ್ತು. ಆದರೆ, ಒಮಾನ್ ವಿರುದ್ದ ಮೂರನೇ ಕ್ರಮಾಂಕದಲ್ಲಿ ಬಡ್ತಿ ನೀಡಲಾಯಿತು. ಅದರಂತೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಂಜು ಸ್ಯಾಮ್ಸನ್, ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ತೋರಿದ್ದಾರೆ.
For his brisk half-century to power #TeamIndia to 188/8, Sanju Samson bagged the Player of the Match award as India won the match by 21 runs. 👍👍
— BCCI (@BCCI) September 19, 2025
Scorecard ▶️ https://t.co/XAsd5MHdx4#INDvOMA | #AsiaCup2025 | @IamSanjuSamson pic.twitter.com/6qp6n10ILs
ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ಮೂರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತದ ಮೊದಲ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಸಂಜು ಸ್ಯಾಮ್ಸನ್ ಬರೆದಿದ್ದಾರೆ. ಅಲ್ಲದೆ ಟಿ20 ಏಷ್ಯಾ ಕಪ್ ಟೂರ್ನಿಯಲ್ಲಿ ಅರ್ಧಶತಕ ಬಾರಿಸಿದ ಭಾರತ ತಂಡದ ಮೊದಲ ವಿಕೆಟ್ ಕೀಪರ್ ಎಂಬ ಸಾಧನೆಗೂ ಕೂಡ ಸಂಜು ಸ್ಯಾಮ್ಸನ್ ಭಾಜನರಾಗಿದ್ದಾರೆ.
IND vs OMA: ಬಲಿಷ್ಠ ಭಾರತದ ವಿರುದ್ದ ಸೋತರೂ ಗೌರವ ಸಂಪಾದಿಸಿದ ಕ್ರಿಕೆಟ್ ಶಿಶು ಒಮಾನ್!
ಮುಂದಿನ ಎದುರಾಳಿ ಪಾಕಿಸ್ತಾನ
ಭಾರತ ತಂಡ ಲೀಗ್‌ನಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆದಿದೆ. ಇದೀಗ ಸೂಪರ್-4ಕ್ಕೆ ಪ್ರವೇಶ ಮಾಡಿದೆ. ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಕಾದಾಟ ನಡೆಸಲು ಸಜ್ಜಾಗುತ್ತಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-4ರ ಹಂತವನ್ನು ಆರಂಭಿಸಲಿದೆ. ಈ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ಗೆ ಮೂರನೇ ಕ್ರಮಾಂಕದಲ್ಲಿ ಸ್ಥಾನ ನೀಡುವ ಬಗ್ಗೆ ಕುತೂಹಲವಿದೆ.