IND vs PAK: ಕುಲ್ದೀಪ್ ಯಾದವ್ ಸ್ಪಿನ್ ಮೋಡಿ, 146 ರನ್‌ಗಳಿಗೆ ಪಾಕಿಸ್ತಾನ ಆಲ್‌ಔಟ್!
2025ರ ಏಷ್ಯಾ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ ನಡಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿ ಪಾಕಿಸ್ತಾನ 19.1 ಓವರ್‌ಗಳಿಗೆ 146 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಭಾರತ ತಂಡಕ್ಕೆ 147 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.

ಪಾಕಿಸ್ತಾನ ತಂಡ ಕೇವಲ 146 ರನ್‌ಗಳಿಗೆ ಆಲ್‌ಔಟ್. -

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (IND vs PAK) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಪಾಕಿಸ್ತಾನ ತಂಡ, ಆರಂಭದಲ್ಲಿ ಉತ್ತಮವಾಗಿ ರನ್ ಕಲೆ ಹಾಕಿದ ಹೊರತಾಗಿಯೂ, ಕುಲ್ದೀಪ್ ಯಾದವ್ (Kuldeep Yadav) ಸ್ಪಿನ್ ಮೋಡಿಗೆ ನಲುಗಿ 146 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಭಾರತ ತಂಡಕ್ಕೆ 147 ರನ್‌ಗಳ ಸಾಧಾರಣ ಗುರಿಯನ್ನು ನೀಡುವಲ್ಲಿ ಶಕ್ತವಾಯಿತು.
ಪಾಕಿಸ್ತಾನ ತಂಡದ ಪರ ಇನಿಂಗ್ಸ್ ಆರಂಭಿಸಿದ ಸಾಹಿಬ್‌ಝಾದ ಫರ್ಹಾನ್ ಹಾಗೂ ಫಖರ್ ಝಮಾನ್ ಜೋಡಿ ಪವರ್‌ಪ್ಲೇನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿತು. ಇವರು ಮುರಿಯದ ಮೊದಲನೇ ವಿಕೆಟ್‌ಗೆ 84 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಪಾಕ್‌ಗೆ ಭರ್ಜರಿ ಆರಂಭವನ್ನು ನೀಡಿತ್ತು. ಸ್ಪೋಟಕ ಬ್ಯಾಟ್ ಮಾಡಿದ್ದ ಸಾಹಿಬ್‌ಝಾದ ಫರ್ಹಾನ್ ಭಾರತದ ಬೌಲರ್‌ಗಳಿಗೆ ಬೆವರಿಳಿಸಿದ್ದರು. ಅವರು ಆಡಿದ್ದ 38 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 57 ರನ್‌ಗಳನ್ನು ಸಿಡಿಸಿದರು ಹಾಗೂ 10ನೇ ಓವರ್‌ನಲ್ಲಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದ್ದರು.
IND vs PAK: ಏಷ್ಯಾ ಕಪ್ ಫೈನಲ್‌ನಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ!
ಮೂರನೇ ಕ್ರಮಾಂಕದಲ್ಲಿ ಆಡಿದ್ದ ಸೈಯಮ್ ಆಯುಬ್ 14 ರನ್ ಗಳಿಸಿದ ಕುಲ್ದೀಪ್ ಯಾದವ್‌ಗೆ ಶರಣಾದರು. ನಂತರ ಮೊಹಮ್ಮದ್ ಹ್ಯಾರಿಸ್ ಶೂನ್ಯಕ್ಕೆ ಔಟ್ ಆದರು. ಒಂದು ತುದಿಯಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ್ದ ಫಖರ್ ಝಮಾನ್ ಅವರು 35 ಎಸೆತಗಳಲ್ಲಿ 46 ರನ್‌ಗಳನ್ನು ಬಾರಿಸಿ ಅರ್ಧಶತಕದಂಚಿನಲ್ಲಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದರು. ನಂತರ ಸ್ಪಿನ್ ಮೋಡಿ ಮಾಡಿದ ಕುಲ್ದೀಪ್ ಯಾದವ್, ಸಲ್ಮಾನ್ ಆಘಾ ಸೇರಿದಂತೆ ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದರು. ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳನ್ನು ಬಿಟ್ಟರೆ ಇನ್ನುಳಿದ ಯಾವುದೇ ಬ್ಯಾಟ್ಸ್‌ಮನ್ ವೈಯಕ್ತಿಕ ಎರಡಂಕಿಯನ್ನು ಕಲೆ ಹಾಕುವಲ್ಲಿ ವಿಫಲರಾದರು.
An excellent bowling performance 👌
— BCCI (@BCCI) September 28, 2025
4️⃣ wickets for Kuldeep Yadav
2️⃣ wickets each for Jasprit Bumrah, Axar Patel and Varun Chakaravarthy#TeamIndia need 147 to win 🎯
Updates ▶️ https://t.co/0VXKuKPkE2#AsiaCup2025 | #Final pic.twitter.com/CNRcsGriwR
4 ವಿಕೆಟ್ ಸಾಧನೆ ಮಾಡಿದ ಕುಲ್ದೀಪ್ ಯಾದವ್
ಸ್ಪಿನ್ ಮೋಡಿ ಮಾಡಿದ ಕುಲ್ದೀಪ್ ಯಾದವ್ ತನ್ನ ಪಾಲಿನ 4 ಓವರ್‌ಗಳಲ್ಲಿ 30 ರನ್ ನೀಡಿ 4 ವಿಕೆಟ್ ಸಾಧನೆ ಮಾಡಿದರು. ಆ ಮೂಲಕ ಪಾಕಿಸ್ತಾನವನ್ನು 150ರ ಒಳಗೆ ಕಡಿವಾಣ ಹಾಕುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದರು. ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.