ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs PAK: ಏಷ್ಯಾ ಕಪ್‌ ಫೈನಲ್‌ನಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ರ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪಾಕ್‌ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ 2025ರ ಏಷ್ಯಾ ಕಪ್‌ ಫೈನಲ್‌ ಪಂದ್ಯ. -

Profile Ramesh Kote Sep 28, 2025 7:43 PM

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (IND vs PAK) ತಂಡಗಳು 2025ರ ಏಷ್ಯಾ ಕಪ್‌ (Asia Cup 2025 Final) ಟೂರ್ನಿಯ ಫೈನಲ್‌ನಲ್ಲಿ ಕಾದಾಟ ನಡೆಸುತ್ತಿವೆ. ಈ ಪದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಎದುರಾಳಿ ಪಾಕ್ ಮೊದಲು ಬ್ಯಾಟ್ ಮಾಡಲಿದೆ. ಈಗಾಗಲೇ ಉಭಯ ತಂಡಗಳು ಟೂರ್ನಿಯಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದು, ಟೀಮ್ ಇಂಡಿಯಾ ಕ್ರಮವಾಗಿ 7 ಮತ್ತು 6 ವಿಕೆಟ್‌ಗಳಿಂದ ಪಾಕ್ ತಂಡವನ್ನು ಮಣಿಸಿತ್ತು. ಪಾಕಿಸ್ತಾನವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಲು ಭಾರತ ಎದುರು ನೋಡುತ್ತಿದೆ.

ಭಾರತ ತಂಡದ ಪ್ಲೇಯಿಂಗ್‌ XI ನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ಏಷ್ಯಾ ಕಪ್‌ ಫೈನಲ್‌ನಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮ್ಯಾಚ್‌ ಫಿನಿಷರ್‌ ರಿಂಕು ಸಿಂಗ್‌ಗೆ ಅವಕಾಶವನ್ನು ನೀಡಲಾಗಿದೆ. ಕಳೆದ ಪಂದ್ಯವನ್ನು ಆಡಿದ್ದ ಅರ್ಷದೀಪ್‌ ಸಿಂಗ್‌ ಹಾಗೂ ಹರ್ಷಿತ್‌ ರಾಣಾ ಅವರ ಸ್ಥಾನಕ್ಕೆ ಜಸ್‌ಪ್ರೀತ್‌ ಬುಮ್ರಾ ಮತ್ತು ಶಿವಂ ದುಬೆ ಪ್ಲೇಯಿಂಗ್‌ XIಗೆ ಮರಳಿದ್ದಾರೆ. ಇನ್ನು ಎದುರಾಳಿ ಪಾಕಿಸ್ತಾನ ತಂಡದ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಪಾಕಿಸ್ತಾನ ಉಳಿಸಿಕೊಂಡಿದೆ.

IND vs PAK: ʻಪಾಕಿಸ್ತಾನ ಅಪಾಯಕಾರಿ ತಂಡʼ-ಭಾರತಕ್ಕೆ ಎಚ್ಚರಿಕೆ ನೀಡಿದ ಮಾಂಟಿ ಪನೇಸರ್‌!

ಭಾರತ ಹಾಗೂ ಪಾಕಿಸ್ತಾನ ತಂಡಗಳು ಈ ಟೂರ್ನಿಯಲ್ಲಿ ಈಗಾಗಲೇ ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಭಾರತ ತಂಡ ಸೋಲಿಸಿತ್ತು. ಲೀಗ್‌ ಹಂತದ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಗೆದ್ದಿದ್ದ ಭಾರತ, ನಂತರ ಸೂಪರ್‌-4ರ ಹಂತದ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು.



ಉಭಯ ತಂಡಗಳ ಪ್ಲೇಯಿಂಗ್‌ XI

ಭಾರತ: ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್‌ (ನಾಯಕ), ತಿಲಕ್‌ ವರ್ಮಾ, ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌), ಶಿವಂ ದುಬೆ, ರಿಂಕು ಸಿಂಗ್‌, ಅಕ್ಷರ್‌ ಪಟೇಲ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ವರುಣ್‌ ಚಕ್ರವರ್ತಿ

ಪಾಕಿಸ್ತಾನ: ಸಾಹಿಬ್‌ಝಾದ ಫರ್ಹಾನ್‌, ಫಖರ್‌ ಝಮಾನ್‌, ಸೈಮ್‌ ಆಯುಬ್‌, ಸಲ್ಮಾನ್‌ ಆಘಾ (ನಾಯಕ), ಹುಸೇನ್‌ ತಲತ್‌, ಮೊಹಮ್ಮದ್‌ ಹ್ಯಾರಿಸ್‌ (ವಿಕೆಟ್‌ ಕೀಪರ್‌), ಮೊಹಮ್ಮದ್‌ ನವಾಝ್‌, ಫಹೀಮ್‌ ಅಶ್ರಫ್‌, ಶಾಹೀನ್‌ ಅಫ್ರಿದಿ, ಹ್ಯಾರಿಸ್‌ ರೌಫ್‌, ಅಬ್ರಾರ್‌ ಅಹ್ಮದ್‌



ತಂಡಗಳ ವಿವರ

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್‌ಪ್ರೀತ್‌ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್

ಪಾಕಿಸ್ತಾನ್: ಸಲ್ಮಾನ್ ಅಲಿ ಆಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್‌, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಆಯೂಬ್ ಮತ್ತು ಸುಫಿಯಾನ್ ಮುಖಿಮ್