ಚಂಡೀಗಢ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟಿ20ಐ ಪಂದ್ಯದಲ್ಲಿ (IND vs SA) 101 ರನ್‌ಗಳ ಭರ್ಜರಿ ಗೆಲುವು ಪಡೆದು ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ 1-0 ಮುನ್ನಡೆ ಪಡೆದಿರುವ ಭಾರತ ತಂಡ (India), ಇದೀಗ ಡಿಸೆಂಬರ್ 11 ರಂದು ಗುರುವಾರ ನಡೆಯುವ ಎರಡನೇ ಟಿ20ಐ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮತ್ತೊಂದು ಕಡೆ ಆರಂಭಿಕ ಪಂದ್ಯದಲ್ಲಿ ಸೋತಿದ್ದ ಹರಿಣ ಪಡೆ (South Africa), ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ. ಉಭಯ ತಂಡಗಳ ನಡುವಣ ಈ ಹೈವೋಲ್ಟೇಜ್ ಪಂದ್ಯ ಇಲ್ಲಿನ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಕಟಕ್‌ನ ಬಾರಬತಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿತ್ತು. ಆದರೆ, ಪವರ್‌ಪ್ಲೇನಲ್ಲಿ ಲುಂಗಿ ಎನ್ಗಿಡಿ ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿದೆ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತ್ತು.ಆದರೆ, ಕಳೆ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಸ್ಪೋಟಕ ಅರ್ಧಶತಕದ ಮೂಲಕ ಭಾರತ ತಂಡ 175 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು. ಬಳಿಕ ಗುರಿ ಹಿಂಬಾಲಿಸಿದ್ದ ದಕ್ಷಿಣ ಆಫ್ರಿಕಾ ತಂಡ ಕೇವಲ 74 ರನ್‌ಗಳಿಗೆ ಆಲ್‌ಔಟ್ ಆಗಿತ್ತು.
IND vs SA: ಹಾರ್ದಿಕ್ ಪಾಂಡ್ಯ ಸ್ಫೋಟಕ ಅರ್ಧಶತಕದ ಬಲದಿಂದ ಮೊದಲನೇ ಟಿ20ಐ ಗೆದ್ದ ಭಾರತ!
ಭಾರತದ ಪರ ಹಾರ್ದಿಕ್ ಪಾಂಡ್ಯ ಒಬ್ಬರನ್ನು ಬಿಟ್ಟರೆ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾಗಿದ್ದರು. ಶುಭಮನ್ ಗಿಲ್ ಅವರು ಕೇವಲ 4 ರನ್‌ಗೆ ಔಟ್ ಆದರು, ಆದರೆ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಅಕ್ಷರ್ ಪಟೇಲ್ ಅವರು ಬ್ಯಾಟಿಂಗ್‌ನಲ್ಲಿ ಉಪಯುಕ್ತ ಕಾಣಿಕೆ ನೀಡಿದ್ದರು.
ಬಳಿಕ ಗುರಿ ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಕ್ವಿಂಟನ್ ಡಿ ಕಾಕ್ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರನ್ನು ಅರ್ಷದೀಪ್ ಸಿಂಗ್ ಔಟ್ ಮಾಡಿದರು. ನಂತರ ಜಸ್‌ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಹಾಗೂ ಶಿವಂ ದುವೆ ಅವರು ಹರಿಣ ಪಡೆಯ ಬ್ಯಾಟರ್‌ಗಳನ್ನು ಬೇಟೆಯಾಡಿದ್ದರು. ಆ ಮೂಲಕ ದಕ್ಷಿಣ ಆಫ್ರಿಕಾ ತಂಡ ಕನಿಷ್ಠ 100 ರನ್‌ಗಳನ್ನು ಕಲೆ ಹಾಕಲು ಸಾಧ್ಯವಾಗಲಿಲ್ಲ. ಕೇವಲ 12.3 ಓವರ್‌ಗಳಿಗೆ ಕೇವಲ 74 ರನ್‌ಗಳಿಗೆ ಆಲ್‌ಔಟ್ ಆಯಿತು.
IND vs SA: ಸೂರ್ಯಕುಮಾರ್ ಯಾದವ್‌ರ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣ ತಿಳಿಸಿದ ರಾಬಿನ್ ಉತ್ತಪ್ಪ!
ಪಿಚ್ ರಿಪೋರ್ಟ್
ಇಲ್ಲಿನ ಮುಲ್ಲಾನ್‌ಪುರದ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಸಮತೋಲನದಿಂದ ಕೂಡಿದೆ. ಪಂದ್ಯದ ಆರಂಭದಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆರವು ನೀಡಲಿದೆ. ನಂತರ ಪಂದ್ಯ ಸಾಗುತ್ತಿದ್ದಂತೆ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡಲಿದೆ, ಅದರಲ್ಲಿಯೂ ವಿಶೇಷವಾಗಿ ಎರಡನೇ ಇನಿಂಗ್ಸ್‌ನಲ್ಲಿ. ಒಟ್ಟಾರೆಯಾಗಿ ಇಲ್ಲಿನ ಪಿಚ್ ಬೌಲರ್‌ಗಳಿಂತ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ.
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 32
ಭಾರತ ತಂಡದ ಗೆಲುವು: 19
ದಕ್ಷಿಣ ಆಪ್ರಿಕಾ ಗೆಲುವು: 12
ಫಲಿತಾಂಶವಿಲ್ಲ/ಟೈ: 01
IND vs SA: ಟಿ20ಐ ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರ್ಣಗೊಳಿಸಿದ ಜಸ್‌ಪ್ರೀತ್ ಬುಮ್ರಾ!
ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI
ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
ದಕ್ಷಿಣ ಆಫ್ರಿಕಾ ತಂಡದ ಸಂಭಾವ್ಯ ಪ್ಲೇಯಿಂಗ್ XI
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವಾನ್ ಫೆರೆರಾ, ಮಾರ್ಕೊ ಯೆನ್ಸನ್, ಕೇಶವ್ ಮಹಾರಾಜ್, ಲುಥೊ ಸಿಪಾಮ್ಲಾ, ಲುಂಗಿ ಎನ್ಗಿಡಿ, ಎನ್ರಿಕ್ ಕ್ಲಾಸೆನ್
IND vs SA: ʻನನ್ನ ಪ್ರದರ್ಶನ ಮುಖ್ಯವಲ್ಲ, ತಂಡ ಗೆಲ್ಲುವುದು ಮುಖ್ಯʼ-ಹಾರ್ದಿಕ್ ಪಾಂಡ್ಯ!
ಪಂದ್ಯದ ವಿವರ
ಭಾರತ VS ದಕ್ಷಿಣ ಆಫ್ರಿಕಾ
ಎರಡನೇ ಟಿ20ಐ ಪಂದ್ಯ
ದಿನಾಂಕ: ಡಿಸೆಂಬರ್ 11, 2025
ಸಮಯ: ಸಂಜೆ 07: 00
ಸ್ಥಳ: ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣ, ಮುಲ್ಲಾನ್‌ಪುರ
ಲೈವ್‌ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್