ಇಂದು ದ್ವಿತೀಯ ಟಿ20; ಭಾರತ ತಂಡದಲ್ಲಿ ಬದಲಾವಣೆ ಇದೆಯೇ?
IND vs SA 2nd T20I: ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬೂಮ್ರಾ ಮತ್ತು ವರಣ್ ಚಕ್ರವರ್ತಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇವರಿಗೆ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಪಾಂಡ್ಯ ಬ್ಯಾಟಿಂಗ್‌ನಲ್ಲಿಯೂ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಬಾರಿಸಿದ್ದರು.
Gill, Sanju and Jitesh -
ಮುಲ್ಲನಪುರ, ಡಿ.11, ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಜೋಶ್‌ನಲ್ಲಿರುವ ಭಾರತ ತಂಡ ದ್ವಿತೀಯ ಟಿ20(IND vs SA 2nd T20I) ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು ಚಂಡೀಗಡ ಸಮೀಪದ ಮುಲ್ಲನಪುರದಲ್ಲಿ (ಪಂಜಾಬ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣ) ನಡೆಯಲಿರುವ ದಕ್ಷಿಣ ಆಫ್ರಿಕಾ(India vs South Africa) ವಿರುದ್ಧ ಸೆಣಸಾಟ ನಡೆಸಲಿದೆ. ಆದರೆ ಉಪನಾಯಕ ಶುಭಮನ್ ಗಿಲ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ವೈಫಲ್ಯ ತಂಡಕ್ಕೆ ಚಿಂತೆ ಉಂಟು ಮಾಡಿದೆ.
ಕಟಕ್‌ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಉಭಯ ಆಟಗಾರರು ವೈಫಲ್ಯ ಅನುಭವಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿಯೂ ಗಿಲ್ ಹೆಚ್ಚು ರನ್ ಗಳಿಸಿರಲಿಲ್ಲ. ಆಗಲೂ ಅವರ ಬಗ್ಗೆ ಚರ್ಚೆಗಳು ನಡೆದಿದ್ದವು. ಗಿಲ್ ಬದಲು ಸಂಜುಗೆ ಅವಕಾಶ ನೀಡಬೇಕು ಎಂಬ ಕೂಗು ಈಗಾಗಲೇ ಬಲವಾಗಿ ಕೇಳಿ ಬರುತ್ತಿದೆ. ಹೀಗಾಗಿ ಗಿಲ್ ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರಲೇ ಬೇಕಾದ ಅನಿವಾರ್ಯತೆ ಅವರ ಮುಂದಿದೆ.
ಸೂರ್ಯ ಅವರ ಬ್ಯಾಟಿಂಗ್ ಫಾರ್ಮ್ ಮೇಲೆ ಈಗ ಎಲ್ಲ ಕಣ್ಣುಗಳಿವೆ. ಅವರು ಕೂಡ ಒಂದು ವರ್ಷದಿಂದ ವೈಫಲ್ಯ ಅನುಭವಿಸುತ್ತಿದ್ದಾರೆ. ಇನ್ನೆರಡು ತಿಂಗಳು ಕಳೆದರೆ ಸೂರ್ಯ ಅವರು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಿದೆ. ಆದ್ದರಿಂದ ಅವರು ನಾಯಕತ್ವದ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ಸಾಮರ್ಥ್ಯ ಮೆರೆಯುವ ಅಗತ್ಯವಿದೆ.
ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬೂಮ್ರಾ ಮತ್ತು ವರಣ್ ಚಕ್ರವರ್ತಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇವರಿಗೆ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಪಾಂಡ್ಯ ಬ್ಯಾಟಿಂಗ್‌ನಲ್ಲಿಯೂ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಬಾರಿಸಿದ್ದರು.
ಇದನ್ನೂ ಓದಿ IND vs SA: ಭಾರತ ಟಿ20 ತಂಡದಲ್ಲಿ ಸಮಸ್ಯೆ ಹುಟ್ಟು ಹಾಕಿದ ಶುಭಮನ್ ಗಿಲ್!
ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಿಕೊಳ್ಳುವುದು ಅನುಮಾನ. ಐಡೆನ್ ಮರ್ಕರಂ, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್ ಹಾಗೂ ಕ್ವಿಂಟನ್ ಡಿ ಕಾಕ್ ಮೊದಲ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಅವರನ್ನು ಕಡೆಗಣಿಸುವಂತಿಲ್ಲ. ಅವರು ತಮ್ಮ ನೈಜ ಸಾಮರ್ಥ್ಯಕ್ಕೆ ಮರಳಿದರೆ ಭಾರತದ ಬೌಲರ್‌ಗಳಿಗೆ ಕಠಿಣ ಸವಾಲು ಎದುರಾಗುವುದು ಖಚಿತ.
ಸಂಭಾವ್ಯ ಆಡುವ ಬಳಗ
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿ.ಕೀ.), ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೀರಾ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ.
ಪಂದ್ಯ ಆರಂಭ: ರಾತ್ರಿ 7
ನೇರಪ್ರಸಾರ: ಜಿಯೊಸ್ಟಾರ್ ನೆಟ್‌ವರ್ಕ್