IND vs SA: ತವರಿನಲ್ಲಿ ಮತ್ತೊಂದು ಟೆಸ್ಟ್ ಸರಣಿ ವೈಟ್‌ವಾಷ್ ಭೀತಿಯಲ್ಲಿ ಭಾರತ ತಂಡ!
IND vs SA 2nd Test Day 4 Highlights: ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಭಾರತ ತಂಡ ಹೀನಾಯ ಸೋಲಿನ ಭೀತಿಯಲ್ಲಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 549 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ನಾಲ್ಕನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 27 ರನ್ ಗಳಿಸಿದೆ. ಐದನೇ ದಿನವಾದ ಬುಧವಾರ ಭಾರತಕ್ಕೆ ಗೆಲ್ಲಲು 522 ರನ್‌ಗಳ ಅಗತ್ಯವಿದೆ.
ದಕ್ಷಿಣ ಆಫ್ರಿಕಾ ಎದುರು ಸೋಲಿನ ಭೀತಿಯಲ್ಲಿ ಭಾರತ. -
ಗುವಾಹಟಿ: ದಕ್ಷಿಣ ಆಫ್ರಿಕಾ ಎದುರು ಎರಡನೇ ಟೆಸ್ಟ್ ಪಂದ್ಯದಲ್ಲಿಯೂ (IND vs SA) ಭಾರತ ತಂಡ ಹೀನಾಯ ಸೋಲಿನ ಭೀತಿಗೆ ಒಳಗಾಗಿದೆ. ಈಗಾಗಲೇ ಮೊದಲನೇ ಟೆಸ್ಟ್ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ (India), ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಸೋತು, ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವೈಟ್‌ವಾಷ್ ಆಘಾತ ಅನುಭವಿಸುವ ಆತಂಕಕ್ಕೆ ಸಿಲುಕಿದೆ. ದಕ್ಷಿಣ ಆಫ್ರಿಕಾ (South Africa) ನೀಡಿದ್ದ 549 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ನಾಲ್ಕನೇ ದಿನದಾಟದ ಅಂತ್ಯಕ್ಕೆ 15.5 ಓವರ್‌ಗಳಿಗೆ ಎರಡು ವಿಕೆಟ್ ನಷ್ಟಕ್ಕೆ 27 ರನ್ ಗಳಿಸಿದೆ. ಐದನೇ ದಿನವಾದ ಸೋಮವಾರ ಆತಿಥೇಯರಿಗೆ ಗೆಲ್ಲಲು ಇನ್ನೂ 522 ರನ್‌ಗಳ ಅಗತ್ಯವಿದೆ. ಆದರೆ, ಮಾರ್ಕೊ ಯೆನ್ಸನ್ ಹಾಗೂ ಸೈಮನ್ ಹಾರ್ಮರ್ ಒಳಗೊಂಡ ಪ್ರವಾಸಿ ತಂಡದ ಬೌಲಿಂಗ್ ಪಡೆ ಬಲಿಷ್ಠವಾಗಿರುವ ಕಾರಣ ಭಾರತ ತಂಡ ಐದನೇ ದಿನಪೂರ್ತಿ ಬ್ಯಾಟಿಂಗ್ ನಡೆಸುವುದು ಅನುಮಾನ.
ಮಂಗಳವಾರ ಬೆಳಿಗ್ಗೆ ವಿಕೆಟ್ ನಷ್ಟವಿಲ್ಲದೆ 26 ರನ್‌ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ತಂಡ, ಟ್ರಿಸ್ಟನ್ ಸ್ಟಬ್ಸ್ ಅವರ ಬ್ಯಾಟಿಂಗ್ ಬಲದಿಂದ 78.3 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 260 ರನ್‌ಗಳನ್ನು ಕಲೆ ಹಾಕಿ ಡಿಕ್ಲೆರ್ ಮಾಡಿಕೊಂಡಿತು. ಆ ಮೂಲಕ ಪ್ರಥಮ ಇನಿಂಗ್ಸ್‌ನ 314 ರನ್‌ಗಳ ಮುನ್ನಡೆಯೊಂದಿಗೆ ಒಟ್ಟು 549 ರನ್‌ಗಳ ಕಠಿಣ ಗುರಿಯನ್ನು ಭಾರತಕ್ಕೆ ನೀಡಿತು. ದ್ವಿತೀಯ ಇನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಟ್ರಿಸ್ಟನ್ ಸ್ಟಬ್ಸ್ ಅವರು 180 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 9 ಬೌಂಡರಿಗಳೊಂದಿಗೆ 94 ರನ್ ಗಳಿಸಿದರು. ಆದರೆ, ಶತಕದಂಚಿನಲ್ಲಿ ರವೀಂದ್ರೆ ಜಡೇಜಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು.
IND vs SA: ʻಭಾರತ ತಂಡ 201ಕ್ಕೆ ಆಲೌಟ್ʼ-ಬ್ಯಾಟ್ಸ್‌ಮನ್‌ಗಳ ಬಗ್ಗೆ ಬೇಸರ ಹೊರಹಾಕಿದ ರವಿಶಾಸ್ತ್ರಿ!
ಟೋನಿ ಡಿ ಜಾರ್ಜಿ ಅವರು ಕೂಡ ಕೆಲಕಾಲ ಭಾರತದ ಬೌಲರ್‌ಗಳನ್ನು ದಂಡಿಸಿದರು. ಇವರು ಆಡಿದ 68 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 49 ರನ್‌ಗಳ ಕೊಡುಗೆಯನ್ನು ತಂಡಕ್ಕೆ ನೀಡಿದರು. ಇವರ ಜೊತೆಗೆ ಮತ್ತೊಂದು ತುದಿಯಲ್ಲಿ ಸಾಥ್ ನೀಡಿದ್ದ ವಿಯಾನ್ ಮುಲ್ಡರ್ 69 ಎಸೆತಗಳಲ್ಲಿ ಅಜೇಯ 35 ರನ್‌ಗಳನ್ನು ಕಲೆ ಹಾಕಿದ್ದರು. ಇದಕ್ಕೂ ಮುನ್ನ ಓಪನಿಂಗ್ ಬ್ಯಾಟ್ಸ್‌ಮನ್‌ಗಳಾದ ರಯಾನ್ ರಿಕೆಲ್ಟನ್ ಹಾಗೂ ಏಡೆನ್ ಮಾರ್ಕ್ರಮ್ ಕ್ರಮವಾಗಿ 35 ರನ್ ಹಾಗೂ 29 ರನ್‌ಗಳನ್ನು ಗಳಿಸಿದರು. ಭಾರತದ ಪರ ದ್ವಿತೀಯ ಇನಿಂಗ್ಸ್‌ನಲ್ಲಿ ಸ್ಪಿನ್ ಮೋಡಿ ಮಾಡಿದ ರವೀಂದ್ರ ಜಡೇಜಾ 4 ವಿಕೆಟ್ ಕಬಳಿಸಿದರು.
Stumps on Day 4⃣
— BCCI (@BCCI) November 25, 2025
See you tomorrow for Day 5️⃣ action.
Scorecard ▶️ https://t.co/Hu11cnrocG#TeamIndia | #INDvSA | @IDFCFIRSTBank pic.twitter.com/MXqtMGMhay
ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ
ಬೃಹತ್ ಮೊತ್ತದ ಗುರಿ ಹಿಂಬಾಲಿಸಿದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಜೋಡಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. 20 ಎಸೆತಗಳಲ್ಲಿ 13 ರನ್ ಗಳಿಸಿದ ಬಳಿಕ ಯಶಸ್ವಿ ಜಸ್ವಾಲ್, ಮಾರ್ಕೊ ಯೆನ್ಸನ್‌ಗೆ ವಿಕೆಟ್ ಒಪ್ಪಿಸಿದರೆ, ಕನ್ನಡಿಗ ರಾಹುಲ್ 6 ರನ್ ಗಳಿಸಿ ಸೈಮನ್ ಹಾರ್ಮರ್‌ಗೆ ಕ್ಲೀನ್ ಬೌಲ್ಡ್ ಆದರು. ಅಂತಿಮವಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 15.5 ಓವರ್‌ಗಳಿಗೆ ಎರಡು ವಿಕೆಟ್ ನಷ್ಟಕ್ಕೆ 27 ರನ್ ಗಳಿಸಿದೆ. ಆ ಮೂಲಕ ಟೀಮ್ ಇಂಡಿಯಾಗೆ ಗೆಲ್ಲಲು ಇನ್ನೂ 522 ರನ್‌ಗಳ ಅಗತ್ಯವಿದೆ. ಕ್ರೀಸ್‌ನಲ್ಲಿ ಸಾಯಿ ಸುದರ್ಶನ್ ಹಾಗೂ ನೈಟ್‌ವಾಷ್‌ಮನ್ ಆಗಿ ಕುಲ್ದೀಪ್ ಯಾದವ್ ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
IND VS SA: ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸಾಯಿ ಸುದರ್ಶನ್, ಧ್ರುವ್ ಜುರೆಲ್ ವಿರುದ್ಧ ಫ್ಯಾನ್ಸ್ ಕಿಡಿ!
489 ರನ್ ಕಲೆ ಹಾಕಿದ್ದ ದಕ್ಷಿಣ ಆಫ್ರಿಕಾ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 489 ರನ್‌ಗಳನ್ನು ಕಲೆ ಹಾಕಿತ್ತು. ಆದರೆ, ಭಾರತ ಪ್ರಥಮ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ 201 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಆ ಮೂಲಕ ಭಾರತ ಪ್ರಥಮ ಇನಿಂಗ್ಸ್‌ನಲ್ಲಿ 314 ರನ್‌ಗಳ ಭಾರಿ ಹಿನ್ನಡೆ ಅನುಭವಿಸಿದ್ದು, ತುಂಬಾ ಕಠಿಣವಾಯಿತು.