ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA 3rd T20I: ಭಾರತದ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌, ಮುಖಾಮುಖಿ ದಾಖಲೆ ವಿವರ!

IND vs SA 3rd T20I Match Preview: ಎರಡು ಪಂದ್ಯಗಳ ಅಂತ್ಯಕ್ಕೆ ಟಿ20ಐ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಭಾನುವಾರ ಧರ್ಮಶಾಲಾದಲ್ಲಿ ನಡೆಯುವ ಮೂರನೇ ಟಿ20ಐ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌ ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಮೂರನೇ ಪಂದ್ಯಕ್ಕೆ ಭಾರತ-ದಕ್ಷಿಣ ಆಫ್ರಿಕಾ ಸಜ್ಜು.

ಧರ್ಮಶಾಲಾ: ಆರಂಭಿಕ ಎರಡು ಪಂದ್ಯಗಳ ಅಂತ್ಯಕ್ಕೆ ಟಿ20ಐ (IND vs SA) ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಭಾನುವಾರ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಟಿ20ಐ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಕಳೆದ ಪಂದ್ಯದಲ್ಲಿ 51 ರನ್‌ಗಳಿಂದ ಸೋಲು ಅನುಭವಿಸಿದ್ದ ಟೀಮ್‌ ಇಂಡಿಯಾ (India), ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಪಡೆಯಲು ಎದುರು ನೋಡುತ್ತಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ (South Africa) ತಂಡದ ಯೋಜನೆ ಕೂಡ ಇದಾಗಿದೆ.

ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ, ಮೊದಲನೇ ಟಿ20ಐ ಪಂದ್ಯದಲ್ಲಿ ಆಲ್‌ರೌಂಡ್‌ ಪ್ರದರ್ಶನವನ್ನು ತೋರುವ ಮೂಲಕ 101 ರನ್‌ಗಳಿಂದ ಭರ್ಜರಿ ಗೆಲುವು ಪಡೆದಿತ್ತು. ಭಾರತ ತಂಡದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ತಮ್ಮ ಅರ್ಧಶತಕ ಹಾಗೂ ಬೌಲಿಂಗ್‌ ಒಂದು ವಿಕೆಟ್‌ ಸೇರಿ ತಮ್ಮ ಆಲ್‌ರೌಂಡ್‌ ಪ್ರದರ್ಶನದ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

IND vs SA: ಗಿಲ್‌ ಔಟ್‌, ಸಂಜು ಇನ್?‌ ಮೂರನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

ಇನ್ನು ಎರಡನೇ ಪಂದ್ಯದಲ್ಲಿ ಅದೇ ಲಯವನ್ನು ಮುಂದುವರಿಸುವಲ್ಲಿ ಭಾರತ ವಿಫಲವಾಗಿತ್ತು. ಕ್ವಿಂಟನ್‌ ಡಿ ಕಾಕ್‌ ಅವರ ಸ್ಫೋಟಕ ಅರ್ಧಶತಕದ ಮೂಲಕ ತಂಡದ ಮೊತ್ತವನ್ನು 213 ರನ್‌ಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನಂತರ ಬೌಲಿಂಗ್‌ನಲ್ಲಿ ಒಟ್ನಿಲ್‌ ಬಾರ್ಟಮನ್‌ ಅವರು ಮಾರಕ ದಾಳಿ ನಡೆಸಿ ನಾಲ್ಕು ವಿಕೆಟ್‌ ಸಾಧನೆ ಮಾಡುವ ಮೂಲಕ ಭಾರತ ತಂಡದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಿದ್ದರು. ಅಂತಿಮವಾಗಿ ಹರಿಣ ಪಡೆ 51 ರನ್‌ಗಳಿಂದ ಎರಡನೇ ಪಂದ್ಯವನ್ನು ಗೆದ್ದಿತ್ತು.

ಸದ್ಯ ಎರಡೂ ತಂಡಗಳು ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿವೆ. ಇನ್ನುಳಿದ ಮೂರು ಪಂದ್ಯಗಳಲ್ಲಿ ಯಾವ ತಂಡ ಎರಡು ಪಂದ್ಯಗಳನ್ನು ಗೆಲ್ಲುತ್ತದೆ, ಆ ತಂಡ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಹಾಗಾಗಿ ಇನ್ನುಳಿದ ಪಂದ್ಯಗಳಲ್ಲಿ ಎರಡೂ ತಂಡಗಳಿಂದ ಭಾರಿ ಪೈಪೋಟಿಯನ್ನು ನಿರೀಕ್ಷೆ ಮಾಡಬಹುದು.

IND vs SA: ಕ್ವಿಂಟನ್‌ ಡಿ ಕಾಕ್‌ ಅಬ್ಬರ, ಭಾರತ ತಂಡಕ್ಕೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ!

ಪಂದ್ಯದ ವಿವರ

ಭಾರತ vs ದಕ್ಷಿಣ ಆಫ್ರಿಕಾ

ಮೂರನೇ ಟಿ20ಐ ಪಂದ್ಯ

ದಿನಾಂಕ: ಡಿಸೆಂಬರ್‌ 14, 2025

ಸಮಯ: ಸಂಜೆ 07: 00

ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣ, ಧರ್ಮಶಾಲಾ

ಲೈವ್‌ ಸ್ಟ್ರೀಮಿಂಗ್‌: ಜಿಯೊ ಹಾಟ್‌ಸ್ಟಾರ್‌

ಧರ್ಮಶಾಲಾ ಪಿಚ್‌ ರಿಪೋರ್ಟ್‌

ಮೂರನೇ ಟಿ20ಐ ಪಂದ್ಯ ನಡೆಯುವ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದ ಪಿಚ್‌ನಲ್ಲಿ ಚೆಂಡು ವೇಗವಾಗಿ ಸಾಗುವುದರಿಂದ ವೇಗಿಗಳು ಇಲ್ಲಿ ಪ್ರಾಬಲ್ಯ ಸಾಧಿಸಲಿದ್ದಾರೆ. ಬ್ಯಾಟ್ಸ್‌ಮನ್‌ಗಳು ಮಧ್ಯಮ ಓವರ್‌ಗಳಲ್ಲಿ ಮಿಂಚಲಿದ್ದಾರೆ. ಆದರೆ, ಈ ಪಂದ್ಯದಲ್ಲಿ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸಲಿದೆ. ಟಾಸ್‌ ಗೆದ್ದ ತಂಡದ ನಾಯಕ ಚೇಸಿಂಗ್‌ ಆಯ್ಕೆ ಮಾಡಿಕೊಳ್ಳಲಿದ್ದಾರೆ.

IND vs SA: ರೋಹಿತ್‌ ಶರ್ಮಾರ ವಿಶೇಷ ದಾಖಲೆ ಮುರಿದ ಸೂರ್ಯಕುಮಾರ್‌ ಯಾದವ್!

ಮುಖಾಮುಖಿ ದಾಖಲೆ

ಒಟ್ಟು ಆಡಿದ ಪಂದ್ಯಗಳು: 33

ಭಾರತ ತಂಡದ ಗೆಲುವು: 19

ದಕ್ಷಿಣ ಆಫ್ರಿಕಾ ತಂಡದ ಗೆಲುವು: 13

ಟೈ/ಫಲಿತಾಂಶವಿಲ್ಲ: 01

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI

ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್‌ (ನಾಯಕ), ತಿಲಕ್‌ ವರ್ಮಾ, ಅಕ್ಷರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಜಿತೇಶ್‌ ಶರ್ಮಾ (ವಿಕೆಟ್‌ ಕೀಪರ್‌), ಜಸ್‌ಪ್ರೀತ್‌ ಬುಮ್ರಾ, ವರುಣ್‌ ಚಕ್ರವರ್ತಿ, ಅರ್ಷದೀಪ್‌ ಸಿಂಗ್‌

ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್‌ XI

ರೀಝಾ ಹೆಂಡ್ರಿಕ್ಸ್‌, ಕ್ವಿಂಟನ್‌ ಡಿ ಕಾಕ್‌ (ವಿಕೆಟ್‌ ಕೀಪರ್‌), ಏಡೆನ್‌ ಮಾರ್ಕ್ರಮ್‌ (ನಾಯಕ), ಡೆವಾಲ್ಡ್‌ ಬ್ರೆವಿಸ್‌, ಡೇವಿಡ್‌ ಮಿಲ್ಲರ್‌, ಡೊನೊವಾನ್‌ ಫೆರೆರಾ, ಜಾರ್ಜ್‌ ಲಿಂಡೆ, ಮಾರ್ಕೊ ಯೆನ್ಸನ್‌, ಲುಥೊ ಸಿಪಾಮ್ಲಾ, ಲುಂಗಿ ಎನ್ಗಿಡಿ, ಒಟ್ನಿಲ್‌ ಬಾರ್ಟಮನ್‌