ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA: ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡದ ಐದು ದೊಡ್ಡ ಸೋಲುಗಳ ವಿವರ!

India's Biggest Losses in Tests: ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ, ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ 408 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಆಘಾತ ಅನುಭವಿಸಿತು. ಅಂದ ಹಾಗೆ ಭಾರತ ತಂಡ ಅತಿ ಹೆಚ್ಚು ರನ್‌ಗಳ ಅಂತರದ ಸೋಲುಗಳನ್ನು ಇಲ್ಲಿ ವಿವರಿಸಿದ್ದಾರೆ.

ದಕ್ಷಿಣ ಆಫ್ರಿಕಾ ಎದುರು ಭಾರತ ತಂಡಕ್ಕೆ 408 ರನ್‌ ಸೋಲು.

ಗವಾಹಟಿ: ಬ್ಯಾಟಿಂಗ್‌ ವೈಫಲ್ಯದಿಂದಾಗಿ ಭಾರತ (India) ತಂಡ ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ ದಕ್ಷಿಣ ಆಫ್ರಿಕಾ ವಿರುದ್ಧ 408 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ (IND vs SA) ಆತಿಥೇಯ ಭಾರತ 0-2 ಅಂತರದಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿತು. ಇದರೊಂದಿಗೆ ನ್ಯೂಜಿಲೆಂಡ್‌ ವಿರುದ್ಧದ ಬಳಿಕ ತವರಿನಲ್ಲಿ ಭಾರತ ತಂಡಕ್ಕೆ ಎರಡನೇ ವೈಟ್‌ವಾಷ್‌ ಆಘಾತ ಇದಾಗಿದೆ. ಅಂದ ಹಾಗೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ತಂಡ, ನೀಡಿದ್ದ 549 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಟೀಮ್‌ ಇಂಡಿಯಾ, ಸೈಮನ್‌ ಹಾರ್ಮರ್‌ ಸ್ಪಿನ್‌ ಮೋಡಿಗೆ ನಲುಗಿ 140 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ದೊಡ್ಡ ಅಂತರದಲ್ಲಿ ಸೋಲು ಅನುಭವಿಸಿ ತವರು ಅಭಿಮಾನಿಗಳ ಎದುರು ಮುಖಭಂಗ ಅನುಭವಿಸಿತು.

ಗೌತಮ್‌ ಗಂಭೀರ್‌ ಅವರು ಭಾರತ ತಂಡಕ್ಕೆ ಹೆಡ್‌ ಕೋಚ್‌ ಆದ ಬಳಿಕ ಇದು ಮೂರನೇ ಟೆಸ್ಟ್‌ ಸರಣಿ ಸೋಲವಾಗಿದೆ. ಇದಕ್ಕೂ ಮುನ್ನ ಅಂದರೆ 2024ರಲ್ಲಿ ತವರಿನಲ್ಲಿ ನ್ಯೂಜಿಲೆಂಡ್‌ ವಿರುದ್ಧ 3-0 ಅಂತರದಲ್ಲಿ ಸೋಲು ಅನುಭವಿಸಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಯನ್ನು ಸೋತಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧವೂ ಸೋಲು ಅನುಭವಿಸುವ ಮೂಲಕ ಟೀಮ್‌ ಇಂಡಿಯಾ ಟೀಕೆಗಳಿಗೆ ಗುರಿಯಾಗಿದೆ. ಮತ್ತೊಂದು ಕಡೆಗೆ ಗೌತಮ್‌ ಗಂಭೀರ್‌ ಅವರ ಮೇಲೆಯೂ ಪ್ರಶ್ನೆಗಳು ಎದುರಾಗಿವೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವೈಟ್‌ವಾಶ್‌ ಮುಖಭಂಗ

ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಭಾರತ ತಂಡ, ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು. ಆ ಮೂಲಕ ಭರವಸೆ ಮೂಡಿಸಿತ್ತು. ಆದರೆ, ಇದೀಗ ಕಳೆದ ಎರಡು ವರ್ಷಗಳಿಂದ ತವರಿನಲ್ಲಿ ಮೂರು ಟೆಸ್ಟ್‌ ಸರಣಿಗಳನ್ನು ಸೋತಿರುವುದರಿಂದ ಗೌತಮ್‌ ಗಂಭೀರ್‌ ಅವರ ಹೆಡ್‌ ಕೋಚ್‌ ಹುದ್ದೆಗೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಈ ಟೆಸ್ಟ್‌ ಸರಣಿಯ ಸೋಲಿನ ಮೂಲಕ ಭಾರತ ತಂಡ, ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಐದನೇ ಸ್ಥಾನಕ್ಕೆ ಕುಸಿದಿದೆ. ಭಾರತ ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನಲ್ಲಿ ಇದುವರೆಗೂ ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು 4ರಲ್ಲಿ ಮಾತ್ರ. ಹಾಗಾಗಿ ಗೆಲುವಿನ ಸರಾಸರಿ 48.15ರನ್ನು ಇಳಿದಿದೆ.



ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡದ ದೊಡ್ಡ ಅಂತರದ (ರನ್‌ಗಳಿಂದ) ಸೋಲುಗಳ ವಿವರ

  • ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 408 ರನ್‌ಗಳ ಸೋಲು
  • ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ 342 ರನ್‌ಗಳ ಸೋಲು
  • ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ 341 ರನ್‌ಗಳ ಸೋಲು
  • ಕೋಲ್ಕತಾದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 336 ರನ್‌ಗಳ ಸೋಲು
  • ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ 333 ರನ್‌ಗಳ ಸೋಲು