ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA: ಗಿಲ್‌-ರಾಹುಲ್‌ ಓಪನರ್ಸ್‌! ಟೆಸ್ಟ್‌ ಸರಣಿಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ವಿವರ

India's Strongest Playing Xi: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿತ್ತು. ಈ ಸರಣಿಯಲ್ಲಿ ಉಭಯ ತಂಡಗಳು ಎರಡು ಟೆಸ್ಟ್‌ ಪಂದ್ಯಗಳಲ್ಲಿ ಕಾದಾಟ ನಡಸಲಿವೆ. ಈ ಟೆಸ್ಟ್‌ ಸರಣಿಯ ನಿಮಿತ್ತ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್‌ XI ಅನ್ನು ಇಲ್ಲಿ ವಿವರಿಸಲಾಗಿದೆ.

ದಕ್ಷಿಣ ಆಫ್ರಿಕಾ ಎದುರು ಟೆಸ್ಟ್‌ ಸರಣಿಗೆ  ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ದಕ್ಷಿಣ ಆಫ್ರಿಕಾ ಟೆಸ್ಟ್‌ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್‌ XI -

Profile Ramesh Kote Nov 6, 2025 12:30 PM

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ (IND vs SA) 15 ಸದಸ್ಯರ ಭಾರತ ತಂಡವನ್ನು (India's Test Squad)ಬಿಸಿಸಿಐ ಬುಧವಾರ ಪ್ರಕಟಿಸಿತ್ತು. 2025-27ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಸಾಲಿನ (WTC 2025-27) ಟೆಸ್ಟ್‌ ಸರಣಿ ಇದಾಗಿದೆ. ದಕ್ಷಿಣ ಆಫ್ರಿಕಾ ತಂಡ ಕಳೆದ ಋತುವಿನಲ್ಲಿ ಚಾಂಪಿಯನ್‌ ಆಗಿತ್ತು. ಇದೀಗ ಹಾಲಿ ಚಾಂಪಿಯನ್ಸ್‌ ದಕ್ಷಿಣ ಆಫ್ರಿಕಾ ವಿರುದ್ಧ ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡಕ್ಕೆ ಕಠಿಣ ಸವಾಲು ಎದುರಾಗಲಿದೆ. ಏಕೆಂದರೆ ದಕ್ಷಿಣ ಆಫ್ರಿಕಾ ತಂಡದಲ್ಲಿಯೂ ಬಲಿಷ್ಠ ಸ್ಪಿನ್ನರ್‌ಗಳಿದ್ದಾರೆ. ಅಂದ ಹಾಗೆ ಭಾರತ ಟೆಸ್ಟ್‌ ತಂಡದಲ್ಲಿ ಕೆಲ ಬದಲಾವಣೆಗಳನ್ನು ನಾವು ನೋಡಬಹುದು, ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರನ್ನು ಕೈ ಬಿಡಲಾಗಿದ್ದು, ಆಕಾಶ್‌ ದೀಪ್‌ ಅವರನ್ನು ಕರೆಸಿಕೊಳ್ಳಲಾಗಿದೆ. ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯಿಲ್ಲಿದ್ದ ಎನ್‌ ಜಗದೀಶನ್‌ ಅವರ ಸ್ಥಾನಕ್ಕೆ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಬಂದಿದ್ದಾರೆ.

ಉಭಯ ತಂಡಗಳ ನಡುವಣ ಮೊದಲನೇ ಟೆಸ್ಟ್‌ ಪಂದ್ಯ ನವೆಂಬರ್‌ 14 ರಿಂದ 18ರ ವರೆಗೆ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಎರಡನೇ ಟೆಸ್ಟ್‌ ಪಂದ್ಯ ನವೆಂಬರ್‌ 22 ರಿಂದ 26ರವರೆಗೆ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ಪಂದ್ಯಗಳಲ್ಲಿ ಉಭಯ ತಂಡಗಳ ನಡುವಣ ಪೈಪೋಟಿ ಅತ್ಯಂತ ತೀವ್ರತೆಯಿಂದ ಕೂಡಿರುತ್ತದೆ. ಈ ಸರಣಿಗೆ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್‌ XI ಹೇಗಿರಲಿದೆ ಎಂದು ಇಲ್ಲಿ ವಿವರಿಸಲಾಗಿದೆ.

IND vs SA: ರಿಷಭ್‌ ಪಂತ್‌ ಇನ್‌, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ!

ದಕ್ಷಿಣ ಆಫ್ರಿಕಾ ಟೆಸ್ಟ್‌ ಸರಣಿಗೆ ಭಾರತ ತಂಡ: ಶುಭಮನ್‌ ಗಿಲ್‌ (ನಾಯಕ), ರಿಷಭ್‌ ಪಂತ್‌ (ಉಪ ನಾಯಕ, ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌, ಕೆಎಲ್‌ ರಾಹುಲ್‌, ಸಾಯಿ ಸುದರ್ಶನ್‌, ದೇವದತ್‌ ಪಡಿಕ್ಕಲ್‌, ಧ್ರುವ್‌ ಜುರೆಲ್‌, ರವೀಂದ್ರ ಜಡೇಜಾ, ವಾಷಿಂಗ್ಟನ್‌ ಸುಂದರ್‌, ಜಸ್‌ಪ್ರೀತ್‌ ಬುಮ್ರಾ, ಅಕ್ಷರ್‌ ಪಟೇಲ್‌, ನಿತೀಶ್‌ ಕುಮಾರ್‌ ರೆಡ್ಡಿ, ಮೊಹಮ್ಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌, ಆಕಾಶ್‌ ದೀಪ್‌

ದಕ್ಷಿಣ ಆಫ್ರಿಕಾ ಟೆಸ್ಟ್‌ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್‌ XI

ಕೆಎಲ್‌ ರಾಹುಲ್‌-ಯಶಸ್ವಿ ಜೈಸ್ವಾಲ್‌ ಓಪನರ್ಸ್‌

ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆರಂಭಿಕರಾಗಿ ಕೆಎಲ್‌ ರಾಹುಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಅವರು ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದರು. ಹಾಗಾಗಿ ಅವರು ಈ ಸರಣಿಯಲ್ಲಿಯೂ ಇನಿಂಗ್ಸ್‌ ಆರಂಭಿಸುವುದು ಬಹುತೇಕ ಖಚಿತ.

ಸಾಯಿ ಸುದರ್ಶನ್‌ ಎರಡನೇ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿದ್ದರು. ಶುಭಮನ್‌ ಗಿಲ್‌ ಹಾಗೂ ರವೀಂದ್ರ ಜಡೇಜಾ ಅವರು ಕೂಡ ಉತ್ತಮ ಪ್ರದರ್ಶನವನ್ನು ತೋರಿದ್ದರು. ವಿಕೆಟ್‌ ಕೀಪರ್‌ ಆಗಿ ರಿಷಭ್‌ ಪಂತ್‌ ಆಡಲಿದ್ದು, ಧ್ರುವ್‌ ಜುರೆಲ್‌ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ.

IND vs SA: ಭಾರತ ಟೆಸ್ಟ್‌ ತಂಡದಿಂದ ಔಟ್‌! ಮೊಹಮ್ಮದ್‌ ಶಮಿ ವೃತ್ತಿ ಜೀವನ ಅಂತ್ಯ?

ವಾಷಿಂಗ್ಟನ್‌ ಸುಂದರ್‌ ಅವರು ದೇಶ ಹಾಗೂ ವಿದೇಶಿ ಟೆಸ್ಟ್‌ ಸರಣಿಗಳಲ್ಲಿ ತಮ್ಮ ಸಾಮಥ್ಯವನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಅವರು ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆಯಬಹುದು. ನಿತೀಶ್‌ ಕುಮಾರ್‌ ರೆಡ್ಡಿ, ಧ್ರುವ್‌ ಜುರೆಲ್‌ ಹಾಗೂ ಅಕ್ಷರ್‌ ಪಟೇಲ್‌ ಅವರ ನಡುವೆ ಪೈಪೋಟಿ ನಡಯುತ್ತಿದೆ. ಇನ್ನು ಕನ್ನಡಿಗ ದೇವದತ್‌ ಪಡಿಕ್ಕಲ್‌ ಅವರು ಬ್ಯಾಕ್‌ ಅಪ್‌ ಓಪನರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಬೌಲಿಂಗ್‌ ವಿಭಾಗದಲ್ಲಿ ಮೂವರು

ಭಾರತ ತಂಡ ಇಬ್ಬರು ಪೂರ್ಣ ಪ್ರಮಾಣದ ವೇಗಿಗಳಾಗಿ ಜಸ್‌ಪ್ರೀತ್‌ ಬುಮ್ರಾ ಹಾಗೂ ಮೊಹಮ್ಮದ್‌ ಸಿರಾಜ್‌ ಆಡಲಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಟಿ20ಐ ಸರಣಿಯಲ್ಲಿ ಆಡುತ್ತಿರುವ ಜಸ್‌ಪ್ರೀತ್‌ ಬುಮ್ರಾಗೆ ವಿಶ್ರಾಂತಿ ನೀಡಿದರೆ, ಆಗ ಆಕಾಶ್‌ ದೀಪ್‌ ಅವರು ಸಿರಾಜ್‌ ಜೊತೆ ಬೌಲ್‌ ಮಾಡಬಹುದು. ಆದರೆ, ದಕ್ಷಿಣ ಆಫ್ರಿಕಾ ಬಲಿಷ್ಠ ತಂಡವಾಗಿದ್ದು, ಬುಮ್ರಾ ಕಣಕ್ಕೆ ಇಳಿಯಬಹುದು. ವಿಂಡೀಸ್‌ ವಿರುದ್ದ ಬೌಲಿಂಗ್‌ನಲ್ಲಿ ಗಮನ ಸೆಳೆದಿದ್ದ ಕುಲ್ದೀಪ್‌ ಯಾದವ್‌ ಅವರು ಮುಂದುವರಿಯಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI: ಯಶಸ್ವಿ ಜೈಸ್ವಾಲ್‌, ಕೆಎಲ್‌ ರಾಹುಲ್‌, ಶುಭಮನ್‌ ಗಿಲ್‌ (ನಾಯಕ), ಸಾಯಿ ಸುದರ್ಶನ್‌, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ, ನಿತೀಶ್‌ ಕುಮಾರ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌.