IND vs SA: 5 ವಿಕೆಟ್ ಸಾಧನೆ ಮಾಡಿ ವಿಶೇಷ ದಾಖಲೆ ಬರೆದ ಜಸ್‌ಪ್ರೀತ್ ಬುಮ್ರಾ!
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ ಆರಂಭಿಕ ದಿನ ಮಾರಕ ಬೌಲಿಂಗ್ ದಾಳಿ ನಡೆಸಿದ ಭಾರತ ತಂಡದ ವೇಗಿ ಜಸ್‌ಪ್ರೀತ್ ಬುಮ್ರಾ ಐದು ವಿಕೆಟ್ ಸಾಧನೆ ಮಾಡಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 159 ರನ್‌ಗಳಿಗೆ ಆಲ್‌ಔಟ್ ಮಾಡಲು ಭಾರತಕ್ಕೆ ನೆರವು ನೀಡಿದ್ದರು. ಇದರೊಂದಿಗೆ ಬುಮ್ರಾ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
5 ವಿಕೆಟ್ ಸಾಧನೆ ಮಾಡಿ ವಿಶೇಷ ದಾಖಲೆ ಬರೆದ ಜಸ್‌ಪ್ರೀತ್ ಬುಮ್ರಾ. -
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ (IND vs SA) ಆರಂಭಿಕ ದಿನ ಮಾರಕ ಬೌಲಿಂಗ್ ದಾಳಿ ನಡೆಸಿದ್ದ ಭಾರತ ತಂಡದ ವೇಗಿ ಜಸ್‌ಪ್ರೀತ್ ಬುಮ್ರಾ (Jasprit Bumrah) ಐದು ವಿಕೆಟ್ ಸಾಧನೆ ಮಾಡಿದರು. ಆ ಮೂಲಕ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಜಸ್‌ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಯ ನಲುಗಿದ ದಕ್ಷಿಣ ಆಫ್ರಿಕಾ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 159 ರನ್‌ಗಳಿಗೆ ಆಲ್‌ಔಟ್ ಆಯಿತು. ಜಸ್‌ಪ್ರೀತ್ ಬುಮ್ರಾ ಬೌಲ್ ಮಾಡಿದ 14 ಓವರ್‌ಗಳಿಗೆ ಕೇವಲ 27 ರನ್ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು.
ಮಾರಕ ಬೌಲಿಂಗ್ ದಾಳಿ ನಡೆಸಿದ ಜಸ್‌ಪ್ರೀತ್ ಬುಮ್ರಾ 5 ವಿಕೆಟ್ ಕಿತ್ತಿದ್ದರು. ಆ ಮೂಲಕ ಭಾರತದಲ್ಲಿ ಟೆಸ್ಟ್ ಪಂದ್ಯದ ಮೊದಲನೇ ದಿನ 5 ವಿಕೆಟ್ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ಮಾಜಿ ವೇಗಿ ಡೇಲ್ ಸ್ಟೇನ್ 2008ರಲ್ಲಿ ಈ ದಾಖಲೆ ಬರೆದಿದ್ದರು. ಭಾರತದ ಪರ ಜಸ್‌ಪ್ರೀತ್ ಬುಮ್ರಾ ಅವರದು 18ನೇ ಬಾರಿ ಐದು ವಿಕೆಟ್ ಸಾಧನೆ ಮಾಡಿದಂತಾಗಿದೆ. ಆ ಮೂಲಕ ಈ ಸಾಧಕರ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ಹಿಂದಿಕ್ಕಿದ್ದಾರೆ.
IND vs SA: ಜಸ್‌ಪ್ರೀತ್ ಬುಮ್ರಾ ಮಾರಕ ದಾಳಿಗೆ ಹರಿಣ ಪಡೆ ತತ್ತರ, ಮೊದಲನೇ ದಿನ ಭಾರತಕ್ಕೆ ಮುನ್ನಡೆ!
ಭಾರತ ಪರ ಅತಿ ಹೆಚ್ಚು ಬಾರಿ ಐದು ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಬುಮ್ರಾ ಅಲಂಕರಿಸಿದ್ದಾರೆ. ಆ ಮೂಲಕ ಭಗವತ್ ಚಂದ್ರಶೇಖರ್ ಅವರನ್ನು ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ಪರ ಆರಂಭಿಕರಾದ ರಯಾನ್ ರಿಕೆಲ್ಟನ್ ಹಾಗೂ ಏಡೆನ್ ಮಾರ್ಕ್ರಮ್ ಜೋಡಿಯನ್ನು ಮೊದಲನೇ ಸೆಷನ್‌ನಲ್ಲಿ ಬುಮ್ರಾ ಬೇರ್ಪಡಿಸಿದ್ದರು. ಈ ಜೋಡಿ ಮೊದಲನೇ ವಿಕೆಟ್‌ಗೆ 57 ರನ್‌ಗಳ ಜೊತೆಯಾಟವನ್ನು ಆಡಿದ್ದರು.
ರಯಾನ್ ರಿಕೆಲ್ಟನ್ ಅವರನ್ನು ಜಸ್‌ಪ್ರೀತ್ ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದ್ದರು ಹಾಗೂ ಕ್ರೀಸ್‌ನಲ್ಲಿ ನೆಲೆ ಕಂಡುಕೊಂಡಿದ್ದ ಏಡೆನ್ ಮಾರ್ಕ್ರಮ್ ಅವರನ್ನು (48 ಎಸೆತಗಳಲ್ಲಿ 31) ಅವರನ್ನು ಔಟ್ ಮಾಡಿದರು. ಆ ಮೂಲಕ ಭಾರತ ತಂಡದ ಕಮ್‌ಬ್ಯಾಕ್‌ಗೆ ಜಸ್‌ಪ್ರೀತ್ ಬುಮ್ರಾ ನೆರವು ನೀಡಿದ್ದರು.
IND vs SA: ಮೊದಲನೇ ಟೆಸ್ಟ್‌ನಲ್ಲಿ ಕಗಿಸೊ ರಬಾಡ ಆಡದೇ ಇರಲು ಕಾರಣ ತಿಳಿಸಿದ ತೆಂಬಾ ಬವೂಮಾ!
ಎರಡನೇ ಸೆಷನ್‌ನಲ್ಲಿ ಬೌಲ್ ಮಾಡಲು ಬಂದ ಬುಮ್ರಾ ಟೋನಿ ಡಿ ಜಾರ್ಜಿ ಅವರನ್ನು ಔಟ್ ಮಾಡಿದರು. ಆ ಮೂಲಕ ದಕ್ಷಿಣ ಆಫ್ರಿಕಾ ತಂಡ 120 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ತಡವಾಗಿ ಟೈಲೆಂಡರ್‌ಗಳಾದ ಸೈಮನ್ ಹಾರ್ಮರ್ ಹಾಗೂ ಕೇಶವ್ ಮಹಾರಾಜ್ ಅವರನ್ನು ಔಟ್ ಮಾಡಿದರು. ನಂತರ ಪ್ರಥಮ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಮೊದಲನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 37 ರನ್‌ಗಳನ್ನು ಕಲೆ ಹಾಕಿದೆ. ಆ ಮೂಲಕ ಇನ್ನೂ 122 ರನ್‌ಗಳ ಹಿನ್ನಡೆಯಲ್ಲಿದೆ. ಕೆಎಲ್ ರಾಹುಲ್(13*) ಹಾಗೂ ವಾಷಿಂಗ್ಟನ್ ಸುಂದರ್ (6*) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.