ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA: ರಿಷಭ್‌ ಪಂತ್‌ ಇನ್‌, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ!

ದಕ್ಷಿಣ ಆಫ್ರಿಕಾ ವಿರುದ್ದ ಮುಂಬರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌, ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಅವರು ಇತ್ತೀಚೆಗೆ ಭಾರತ ಎ ತಂಡದ ಕಾಣಿಸಿಕೊಂಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ.

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ (IND vs SA) ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು (BCCI) 15 ಸದಸ್ಯರ ಭಾರತ ತಂಡವನ್ನು (India's Test Squad) ಪ್ರಕಟಿಸಿದೆ. ಗಾಯದಿಂದ ದೀರ್ಘಾವಧಿ ಹೊರಗುಳಿದಿದ್ದ ಉಪ ನಾಯಕ ಹಾಗೂ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಸಂಪೂರ್ಣ ಗುಣುಮುಖರಾಗಿದ್ದಾರೆ. ಹಾಗಾಗಿ ಅವರು ಇದೀಗ ಭಾರತ ತಂಡಕ್ಕೆ ಮರಳಿದ್ದಾರೆ. ರಿಷಭ್‌ ಪಂತ್‌ ಇಂಗ್ಲೆಂಡ್‌ ಪ್ರವಾಸದಲ್ಲಿ ಪಾದದ ಗಾಯಕ್ಕೆ ತುತ್ತಾಗಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಭಾರತ ಎ ತಂಡದ ಪರ ದಕ್ಷಿಣ ಆಫ್ರಿಕಾ ಎ ವಿರುದ್ದ ಅರ್ಧಶತಕವನ್ನು ಬಾರಿಸಿದ್ದರು.

28ರ ಪ್ರಾಯದ ಆಟಗಾರ ಕಳೆದ ದಕ್ಷಿಣ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಅವರು ಈ ಪಂದ್ಯದಲ್ಲಿ 90 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ಭಾರತ ಎ ತಂಡದ ಗೆಲುವಿಗೆ ನೆರವು ನೀಡಿದ್ದರು. ಇದೀಗ ಭಾರತ ಟೆಸ್ಟ್‌ ತಂಡಕ್ಕೆ ಮರಳಿರುವುದು ನಾಯಕ ಶುಭಮನ್‌ ಗಿಲ್‌ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಗಿಲ್‌ಗೆ ಪಂತ್‌ ಉಪ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡು ಪಂದ್ಯಗಳಲ್ಲಿ ಪಂತ್‌ ಅನುಪಸ್ಥಿತಿಯಲ್ಲಿ ಧ್ರುವ್‌ ಜುರೆಲ್‌ ವಿಕೆಟ್‌ ಕೀಪರ್‌ ಪಾತ್ರವನ್ನು ನಿರ್ವಹಿಸಿದ್ದರು. ಇದೀಗ ಜುರೆಲ್‌ ಎರಡನೇ ಆಯ್ಕೆಯ ವಿಕೆಟ್‌ ಕೀಪರ್‌ ಆಗಿದ್ದಾರೆ.

IND vs AUS 4th T20: ಆಸ್ಟ್ರೇಲಿಯಾ ವಿರುದ್ಧದ 4ನೇ ಟಿ20ಗೆ ಭಾರತದ ಸಂಭಾವ್ಯ ಆಡುವ ಬಳಗ

ಕನ್ನಡಿಗ ಪ್ರಸಿಧ್‌ ಕೃಷ್ಣ ಅವರು ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದು, ಅವರ ಸ್ಥಾನಕ್ಕೆ ಅಕ್ಷರ್‌ ಪಟೇಲ್‌ ಬಂದಿದ್ದಾರೆ. ಅಕ್ಷರ್ ಪಟೇಲ್‌ ಕೊನೆಯ ಬಾರಿ ಟೆಸ್ಟ್ ಪಂದ್ಯವನ್ನು 2024ರಲ್ಲಿ ಆಡಿದ್ದರು. ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅವರಿಗೆ ಬ್ಯಾಕ್‌ಅಪ್‌ ಆಗಿ ತಂಡದಲ್ಲಿ ಸ್ಥಾನ ನೀಡುವ ನಿರೀಕ್ಷೆಯಿದೆ. ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡ ನಂತರ ಆಕಾಶ್ ದೀಪ್ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಪಾಕಿಸ್ತಾನದಲ್ಲಿ 1-1 ಡ್ರಾ ನಂತರ ದಕ್ಷಿಣ ಆಫ್ರಿಕಾ ಭಾರತಕ್ಕೆ ಆಗಮಿಸಲಿದ್ದು, ತೆಂಬಾ ಬವೂಮಾ ಆಗಮನದೊಂದಿಗೆ ಪ್ರವಾಸಿ ತಂಡ ಅತ್ಯಂತ ಶಕ್ತಿಯುತವಾಗಿ ಕಾಣಲಿದೆ.



ನವೆಂಬರ್‌ 14 ರಂದು ಮೊದಲನೇ ಟೆಸ್ಟ್‌

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಮೊದಲನೇ ಟೆಸ್ಟ್‌ ಪಂದ್ಯ ನವೆಂಬರ್‌ 14 ರಿಂದ 18ರವರೆಗೆ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಟೆಸ್ಟ್‌ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನವೆಂಬರ್‌ 22 ರಿಂದ 26ರ ವರೆಗೆ ಜರುಗಲಿದೆ. ಈ ಟೆಸ್ಟ್‌ ಸರಣಿಯ ಬಳಿಕ ಉಭಯ ತಂಡಗಳ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಟೆಸ್ಟ್‌ ಸರಣಿಗೆ ಭಾರತದ ತಂಡ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್‌ ಕೀಪರ್‌, ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್‌ ಕುಮಾರ್‌ ರೆಡ್ಡಿ, ಮೊಹಮ್ಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌, ಆಕಾಶ ದೀಪ್‌