ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಮಹತ್ವದ ದಾಖಲೆ ಮೇಲೆ ಕಣ್ಣಿಟ್ಟಿರುವ ರೋಹಿತ್ ಶರ್ಮಾ!

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ರೋಹಿತ್ ಶರ್ಮಾ 98 ರನ್ ಗಳಿಸಿದರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಒಳಗೊಂಡ ಎಲೈಟ್ ಪಟ್ಟಿಗೆ ಸೇರಲಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಆಡಿರುವ 502 ಪಂದ್ಯಗಳಲ್ಲಿ 19902 ರನ್ ಗಳಿಸಿದ್ದು, 20000 ಸಾವಿರ ರನ್ ಸಮೀಪದಲ್ಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆ ಮೇಲೆ ಕಣ್ಣಿಟ್ಟಿರುವ ರೋಹಿತ್‌!

20000 ಅಂತಾರಾಷ್ಟ್ರೀಯ ರನ್‌ಗಳ ಸನಿಹದಲ್ಲಿ ರೋಹಿತ್‌ ಶರ್ಮಾ. -

Profile
Ramesh Kote Nov 22, 2025 8:03 PM

ನವದೆಹಲಿ: ನವೆಂಬರ್ 23 ರಂದು ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ (IND vs SA) ಭಾರತ ತಂಡ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಮೈದಾನಕ್ಕಿಳಿಯಲಿದ್ದಾರೆ. 2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದ ನಂತರ ಅವರು ಟಿ20ಐ ಮತ್ತು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಸದ್ಯ ಏಕದಿನ ಮಾದರಿಯಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ನಂತರ ರೋಹಿತ್‌ಗೆ ಮತ್ತೊಂದು ವಿರಾಮ ಸಿಗಲಿದ್ದು, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಪುನಃ ಕಾಣಿಸಿಕೊಳ್ಳಲಿದ್ದಾರೆ.

ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ ಮಹತ್ವದ ದಾಖಲೆ ನಿರ್ಮಿಸುವ ಸಾಧ್ಯತೆ ಇದೆ. ಈ ಏಕದಿನ ಸರಣಿಯಲ್ಲಿ 98 ರನ್ ಗಳಿಸಿದರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಒಳಗೊಂಡ ಎಲೈಟ್ ಪಟ್ಟಿಗೆ ಸೇರಲಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದಲ್ಲಿ 502 ಪಂದ್ಯಗಳನ್ನಾಡಿದ್ದು, 19902 ರನ್ ಗಳಿಸಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20000 ರನ್‌ಗಳನ್ನು ಪೂರ್ಣಗೊಳಿಸಲು ಅವರಿಗೆ ಕೇವಲ 98 ರನ್‌ಗಳ ಅಗತ್ಯವಿದೆ.

IND vs SA: ಭಾರತ ವಿರುದ್ದದ ಒಡಿಐ, ಟಿ20 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಮೂವರು ಭಾರತೀಯ ಆಟಗಾರರಾದ ಸಚಿನ್ ತೆಂಡೂಲ್ಕರ್‌ 34357 ರನ್ ಗಳಿಸಿದ್ದಾರೆ. ಬಳಿಕ ವಿರಾಟ್ ಕೊಹ್ಲಿ ಅವರು 553 ಪಂದ್ಯಗಳಲ್ಲಿ 27673 ರನ್ ಕಲೆ ಹಾಕಿದ್ದಾರೆ. ಇನ್ನು ರಾಹುಲ್ ದ್ರಾವಿಡ್, 509 ಪಂದ್ಯಗಳಲ್ಲಿ 24208 ರನ್ ಗಳಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಅವರು 98 ರನ್ ಗಳಿಸಿದರೆ 20000 ರನ್ ಗಳಿಸಿದ ನಾಲ್ಕನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ರೋಹಿತ್ ಶರ್ಮಾ ಅವರು 67 ಟೆಸ್ಟ್ ಪಂದ್ಯಗಳಲ್ಲಿ 4301 ರನ್ ಗಳಿಸಿದ್ದಾರೆ. ಅವರು ತಮ್ಮ ಟಿ20ಐ ವೃತ್ತಿಜೀವನದಲ್ಲಿ 4231 ರನ್‌ ಗಳಿಸಿದ್ದು, ಏಕದಿನ ಪಂದ್ಯಗಳಲ್ಲಿ 11370 ರನ್ ಗಳಿಸಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್ ನಂತರ ಅವರು ಏಕದಿನ ಕ್ರಿಕೆಟ್ ಸ್ವರೂಪಕ್ಕೂ ವಿದಾಯ ಹೇಳುವ ಸಾಧ್ಯತೆಯಿದೆ. ಅವರು ಏಕದಿನ ಪಂದ್ಯಗಳಲ್ಲಿ 33 ಶತಕಗಳು ಮತ್ತು 59 ಅರ್ಧಶತಕಗಳನ್ನು ಬಾರಿಸಿದ್ದಾರೆ.

IND vs SA: ದಕ್ಷಿಣ ಆಫ್ರಿಕಾ ಒಡಿಐ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ತಂಡ!

ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್ಸ್‌

ಸಚಿನ್‌ ತೆಂಡೂಲ್ಕರ್‌: 664 [ಪಂದ್ಯಗಳಿಂದ 34357 ರನ್‌ಗಳು

ವಿರಾಟ್‌ ಕೊಹ್ಲಿ: 553 ಪಂದ್ಯಗಳಿಂದ 27673* ರನ್‌ಗಳು

ರಾಹುಲ್‌ ದ್ರಾವಿಡ್‌: 509 ಪಂದ್ಯಗಳಿಂದ 24208 ರನ್‌ಗಳು

ರೋಹಿತ್‌ ಶರ್ಮಾ: 502 ಪಂದ್ಯಗಳಿಂದ 19902* ರನ್‌ಗಳು