IND vs SA: ದಕ್ಷಿಣ ಆಫ್ರಿಕಾ ಒಡಿಐ ಸರಣಿಗೆ ಅಭ್ಯಾಸ ಶುರು ಮಾಡಿದ ರೋಹಿತ್ ಶರ್ಮಾ!
ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರೆಣಿಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಮತ್ತು ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಸಲುವಾಗಿ ರೋಹಿತ್ ಶರ್ಮಾ ಶನಿವಾರ ಮುಂಬೈ ರಣಜಿ ತಂಡದ ಜೊತೆ ಅಭ್ಯಾಸ ನಡೆಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಅಭ್ಯಾಸವನ್ನು ಆರಂಭಿಸಿದ್ದಾರೆ. -
ನವದೆಹಲಿ: ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ(Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ಅಕ್ಟೋಬರ್ 25 ರಿಂದ ಮೈದಾನದಿಂದ ದೂರವಿದ್ದಾರೆ. ಇಬ್ಬರು ಮಾಜಿ ನಾಯಕರು ಕೊನೆಯ ಬಾರಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದರು ಮತ್ತು ಅಂದಿನಿಂದ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅವರು ಪ್ರಸ್ತುತ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ ಮತ್ತು ರಣಜಿ ಟ್ರೋಫಿ ಟೂರ್ನಿಯಲಿಯೂ ಆಡುತ್ತಿಲ್ಲ. ಈ ಇಬ್ಬರು ದಂತಕಥೆಗಳು ಮೈದಾನಕ್ಕೆ ಮರಳುವುದನ್ನು ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ (IND vs SA) ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಕಾಣಿಸಿಕೊಳ್ಳಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಏಕದಿನ ಸರಣಿಗೆ ತಯಾರಿ ನಡೆಸಲು ರೋಹಿತ್ ಶರ್ಮಾ ಮುಂಬೈನ ಎಂಸಿಎ-ಬಿಕೆಸಿ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದರು. ಅವರು ಸುಮಾರು ಮೂವತ್ತು ನಿಮಿಷಗಳ ಕಾಲ ಲಘು ತರಬೇತಿ ಮತ್ತು ಓಟದಲ್ಲಿ ತೊಡಗಿದ್ದರು. ಆದರೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ನಡೆಸಲಿಲ್ಲ. ಈ ಸಮಯದಲ್ಲಿ ಅವರು ಕೆಲ ಮುಂಬೈ ಕ್ರಿಕೆಟಿಗರೊಂದಿಗೆ ಸಂವಹನ ನಡೆಸಿದರು ಮತ್ತು ಅವರ ಹಳೆಯ ಸ್ನೇಹಿತರಾದ ಧವಲ್ ಕುಲಕರ್ಣಿ ಮತ್ತು ಅತುಲ್ ರಾನಡೆ ಅವರನ್ನು ಭೇಟಿಯಾದರು. ಈಗ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಆಡುವ ಮತ್ತು 2027ರ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ಆಡುವ ಆಶಯ ಹೊಂದಿರುವ ರೋಹಿತ್ ಶರ್ಮಾ, ಈ ಅಭ್ಯಾಸದ ಮೂಲಕ ತಮ್ಮ ಫಾರ್ಮ್ ಅನ್ನು ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ವಿರಾಟ್ ಕೊಹ್ಲಿ ಅವರ ಸಿದ್ಧತೆಗಳ ಬಗ್ಗೆ ಇನ್ನೂ ಯಾವುದೇ ಸುದ್ದಿ ಹೊರಬಿದ್ದಿಲ್ಲ.
IND vs SA: ಗಿಲ್-ರಾಹುಲ್ ಓಪನರ್ಸ್! ಟೆಸ್ಟ್ ಸರಣಿಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI ವಿವರ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಈ ಇಬ್ಬರು ದಂತಕಥೆಯ ಆಟಗಾರರು ಟೀಮ್ ಇಂಡಿಯಾ ಪರ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡ ನವೆಂಬರ್ 14 ರಿಂದ ಡಿಸೆಂಬರ್ 19 ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳು ನಡೆಯಲಿವೆ. ದಕ್ಷಿಣ ಆಫ್ರಿಕಾ ತಂಡದ ಭಾರತದ ಪ್ರವಾಸ, ಟೆಸ್ಟ್ ಪಂದ್ಯಗಳೊಂದಿಗೆ ಪ್ರಾರಂಭವಾಗಿ ಟಿ20 ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಮೂರು ಏಕದಿನ ಪಂದ್ಯಗಳು ನವೆಂಬರ್ 30, ಡಿಸೆಂಬರ್ 3 ಮತ್ತು ಡಿಸೆಂಬರ್ 6 ರಂದು ನಡೆಯಲಿವೆ. ವಿರಾಟ್ ಮತ್ತು ರೋಹಿತ್ ದಕ್ಷಿಣ ಆಫ್ರಿಕಾ ಒಡಿಐ ಸರಣಿಯ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಆಡಲಿದ್ದಾರೆ.
IND vs SA: ರಿಷಭ್ ಪಂತ್ ಇನ್, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ!
ಇದಲ್ಲದೆ, ವಿರಾಟ್ ಮತ್ತು ರೋಹಿತ್ 2026ರ ಆರಂಭದಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಈ ಸರಣಿಯು 2026ರ ಟಿ 20 ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯಲಿದೆ. ಈ ಮೂರು ಏಕದಿನ ಪಂದ್ಯಗಳು ಜನವರಿ 11, ಜನವರಿ 14 ಮತ್ತು ಜನವರಿ 18 ರಂದು ನಡೆಯಲಿವೆ.
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಮಿಶ್ರವಾಗಿತ್ತು. ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಅವರು ಸತತ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಆದಾಗ್ಯೂ, ಅವರು ಮೂರನೇ ಏಕದಿನ ಪಂದ್ಯದಲ್ಲಿ ಪುಟಿದೆದ್ದರು ಮತ್ತು 237 ರನ್‌ಗಳ ಗುರಿಯನ್ನು ಬೆನ್ನಟ್ಟುವಾಗ ಅಜೇಯ 74 ರನ್ ಗಳಿಸಿದರು. ರೋಹಿತ್ ಶರ್ಮಾ ಕೂಡ ಉತ್ತಮ ಪ್ರದರ್ಶನ ನೀಡಿದರು, ಮೂರು ಪಂದ್ಯಗಳ ಸರಣಿಯಲ್ಲಿ ಒಟ್ಟು 202 ರನ್ ಗಳಿಸಿದರು. ಸರಣಿಯಲ್ಲಿ 150 ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಅವರು. ಮೂರನೇ ಏಕದಿನ ಪಂದ್ಯದಲ್ಲಿ ಅವರು 125 ಎಸೆತಗಳಲ್ಲಿ 121 ರನ್‌ಗಳ ಅಜೇಯ ಶತಕ ಗಳಿಸಿದರು.