IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಶುಭಮನ್ ಗಿಲ್ ಔಟ್?
Shubman Gill out for ODI Series: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಾಯಾಳು ಶುಭಮನ್ ಗಿಲ್ ಅಲಭ್ಯರಾಗಲಿದ್ದಾರೆಂದು ಹೇಳಲಾಗುತ್ತಿದೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ ವೇಳೆ ಗಿಲ್ ಕುತ್ತಿಗೆ ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಅವರು ಒಡಿಐ ಸರಣಿಗೆ ಅಲಭ್ಯರಾಗಿದ್ದಾರೆ.
ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಶುಭಮನ್ ಗಿಲ್ ಅನುಮಾನ. -
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು (IND vs SA) ಬಹುತೇಕ ಕಳೆದುಕೊಂಡಿರುವ ಭಾರತ ತಂಡದ ನಾಯಕ ಶುಭಮನ್ ಗಿಲ್ (Shubman Gill), ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿಯೂ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಕುತ್ತಿಗೆ ಗಾಯಕ್ಕೆ ತುತ್ತಾಗಿದ್ದ ಶುಭಮನ್ ಗಿಲ್, ನಂತರ ಪಂದ್ಯದಿಂದ ಹೊರ ನಡೆದಿದ್ದರು. ಇದಾದ ಬಳಿಕ ಭಾರತ ತಂಡ (India Test Squad) 10 ಆಟಗಾರರೊಂದಿಗೆ ಆಡಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 30 ರನ್‌ಗಳಿಂದ ಸೋಲು ಅನುಭವಿಸಿತ್ತು.
ಇದೀಗ ಇಂಡಿಯಾ ಟುಡೇ ವರದಿಯ ಪ್ರಕಾರ, ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೂ ಶುಭಮನ್ ಗಿಲ್ ಅಲಭ್ಯರಾಗಲಿದ್ದಾರೆಂದು ತಿಳಿದುಬಂದಿದೆ. ಆ ಮೂಲಕ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ಯಾಲೆಂಡರ್ ವರ್ಷದಲ್ಲಿ ಗಿಲ್ ಅವರನ್ನು ಆಡಿಸಿ ಅಪಾಯ ತೆಗೆದುಕೊಳ್ಳಲು ಟೀಮ್ ಮ್ಯಾನೇಜ್‌ಮೆಂಟ್‌ಗೆ ಇಷ್ಟವಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಒಡಿಐ ಸರಣಿಯಲ್ಲಿ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ಬಯಸುತ್ತಿದೆ.
ಒಂದು ವೇಳೆ ಶುಭಮನ್ ಗಿಲ್ ಅವರು ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ಪಡೆದರೆ, ಗುವಾಹಟಿ ಟೆಸ್ಟ್‌ನಲ್ಲಿ ರಿಷಭ್ ಪಂತ್ ತಂಡವನ್ನು ಮುನ್ನಡೆಸಲಿದ್ದಾರೆ. ಮೊದಲನೇ ಪಂದ್ಯದ ಸೋಲಿನ ಬಳಿಕ ಭಾರತ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 124 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಭಾರತ ತಂಡ 93 ರನ್‌ಗಳಿಗೆ ಆಲ್‌ಔಟ್ ಆಗಿತ್ತು.
IND vs SA: ಈಡನ್ ಗಾರ್ಡನ್ಸ್ ತಂತ್ರ ವಿಫಲ; ಗುವಾಹಟಿ ಟೆಸ್ಟ್‌ಗೆ ಸ್ಪಿನ್ ಪಿಚ್ ಇಲ್ಲ!
ಕೋಲ್ಕತ್ತಾ ಟೆಸ್ಟ್‌ನ 2ನೇ ದಿನದಾಟ ಮುಗಿದ ನಂತರ ಹೆಚ್ಚಿನ ಪರೀಕ್ಷೆಗಾಗಿ ಶುಭಮನ್ ಗಿಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸೈಮನ್ ಹಾರ್ಮರ್ ಅವರಿಗೆ ಬೌಂಡರಿ ಬಾರಿಸಿದ ಬಳಿಕ ಗಿಲ್ ಕುತ್ತಿಗೆಯ ಹಿಂಭಾಗವನ್ನು ಹಿಡಿದುಕೊಂಡರು. ತಕ್ಷಣ ತಂಡದ ಫಿಸಿಯೊ ಮೈದಾನಕ್ಕೆ ಬಂದರು ಪರಿಶೀಲಿಸಿದ್ದರು ಮತ್ತು ಕೇವಲ ಮೂರು ಎಸೆತಗಳನ್ನು ಎದುರಿಸಿದ ನಂತರ ಅವರು ಗಾಯಗೊಂಡು ನಿವೃತ್ತರಾದರು. ನಂತರ ಅವರು ಪಂದ್ಯದಲ್ಲಿ ಕಾಣಿಸಿಕೊಳ್ಳಲಿಲ್ಲ.
ಗುವಾಹಟಿಗೆ ಪ್ರಯಾಣ ಬೆಳೆಸಲಿರುವ ಶುಭಮನ್ ಗಿಲ್
ಎರಡನೇ ಪಂದ್ಯ ನಡೆಯುವ ಗುವಾಹಟಿಗೆ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರು ಪ್ರಯಾಣ ಬೆಳೆಸಲಿದ್ದಾರೆಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ. ಆದರೆ, ಪಂದ್ಯದ ದಿನ ಅವರ ಲಭ್ಯತೆ ಬಗ್ಗೆ ಬಿಸಿಸಿಐ ಸ್ಪಷ್ಟತೆ ನೀಡಬಹುದು.
IND vs SA: ಗಿಲ್‌ಗೆ ವಿಶ್ರಾಂತಿ ಸಾಧ್ಯತೆ; ಏಕದಿನ ಸರಣಿಗೆ ರಾಹುಲ್ ನಾಯಕ?
"ದಕ್ಷಿಣ ಆಫ್ರಿಕಾ ವಿರುದ್ಧದ ಕೋಲ್ಕತ್ತಾ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಕುತ್ತಿಗೆ ಗಾಯಕ್ಕೆ ತುತ್ತಾಗಿದ್ದರು ಹಾಗೂ ದಿನದ ಆಟ ಮುಗಿದ ನಂತರ ಅವರನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಅವರನ್ನು ವೀಕ್ಷಣೆಯಲ್ಲಿ ಇರಿಸಲಾಗಿತ್ತು ಮತ್ತು ಮರುದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು," ಎಂದು ಬಿಸಿಸಿಐ ತಿಳಿಸಿದೆ.
"ಗಿಲ್ ಒದಗಿಸಲಾದ ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಮತ್ತು ನವೆಂಬರ್ 19 ರಂದು ತಂಡದೊಂದಿಗೆ ಗುವಾಹಟಿಗೆ ಪ್ರಯಾಣಿಸಲಿದ್ದಾರೆ. ಅವರನ್ನು ಬಿಸಿಸಿಐ ವೈದ್ಯಕೀಯ ತಂಡ, ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ಎರಡನೇ ಟೆಸ್ಟ್‌ನಲ್ಲಿ ಅವರು ಭಾಗವಹಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ," ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.