IND vs SA: ʻಭಾರತ ತಂಡ 201ಕ್ಕೆ ಆಲೌಟ್ʼ-ಬ್ಯಾಟ್ಸ್‌ಮನ್‌ಗಳ ಬಗ್ಗೆ ಬೇಸರ ಹೊರಹಾಕಿದ ರವಿಶಾಸ್ತ್ರಿ!
ಗುವಾಹಟಿಯಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿ ತೀವ್ರ ಹಿನ್ನಡೆ ಅನುಭವಿಸಿದೆ. ಈ ಹಿನ್ನೆಲೆ ಬೇಸರ ಹೊರಹಾಕಿರುವ ರವಿಶಾಸ್ತ್ರಿ ಈ ಪಿಚ್‌ನಲ್ಲಿ ಇದು ತೀರಾ ಸಾಮಾನ್ಯ ಬ್ಯಾಟಿಂಗ್ ಪ್ರದರ್ಶನ ಎಂದು ಕಿಡಿಕಾರಿದ್ದಾರೆ. ದಕ್ಷಿಣ ಆಫ್ರಿಕಾ ಪ್ರಥಮ ಇನಿಂಗ್ಸ್‌ನಲ್ಲಿ 489 ರನ್‌ಗಳನ್ನು ಕಲೆ ಹಾಕಿದರೆ, ಭಾರತ 201 ರನ್‌ಗಳಿಗೆ ಆಲ್‌ಔಟ್ ಆಯಿತು.
ಭಾರತದ ಬ್ಯಾಟಿಂಗ್ ಬಗ್ಗೆ ರವಿ ಶಾಸ್ತ್ರಿ ಕಿಡಿ. -
ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ (IND vs SA) ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿ ಸಂಕಷ್ಟಕ್ಕೆ ಸಿಲುಕಿದೆ. ದಕ್ಷಿಣ ಆಫ್ರಿಕಾ ತನ್ನ ಮೊದಲ ಇನಿಂಗ್ಸ್‌ನಲ್ಲಿ 489 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ ಬಳಿಕ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಭಾರತ ತಂಡದ ಬ್ಯಾಟರ್‌ಗಳ ಕಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು ಎನ್ನಲಾಗಿತ್ತು. ಆದರೆ ವಾಸ್ತವವಾಗಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರನ್ನು ಹೊರತುಪಡಿಸಿದರೆ ಉಳಿದೆಲ್ಲರೂ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಈ ಹಿನ್ನೆಲೆ ಟೀಮ್ ಇಂಡಿಯಾ ಮಾಜಿ ಹೆಡ್ ಕೋಚ್ ರವಿ ಶಾಸ್ತ್ರಿ (Ravi Shastri) ಭಾರತೀಯ ಬ್ಯಾಟರ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಂಡದ ಪ್ರದರ್ಶನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬ್ಯಾಟ್ ಮಾಡಲು ಪಿಚ್ ಅದ್ಬುತವಾಗಿತ್ತು. ಆದರೆ ಟೀಮ್ ಇಂಡಿಯಾ ಬ್ಯಾಟರ್‌ಗಳು ಸುಲಭವಾಗಿ ವಿಕೆಟ್ ಒಪ್ಪಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ, "ಇದು ಇನ್ನೂ ಉತ್ತಮ ಮೇಲ್ಮೈ. ಇದು 7 ವಿಕೆಟ್‌ಗೆ 142 ರನ್ ಗಳಿಸುವಷ್ಟು ಪಿಚ್ ಅಲ್ಲ. ಸಾಮಾನ್ಯವಾಗಿ ಬ್ಯಾಟಿಂಗ್ ಪಿಚ್. ಭಾರತ ಸ್ವಲ್ಪವೂ ಸಂತೋಷಪಡುವುದಿಲ್ಲ. ನೀವು ನಿಮ್ಮ ಕೈಗಳನ್ನು ಮೇಲಕ್ಕೆತ್ತಿ ಇದು ತುಂಬಾ ಸಾಮಾನ್ಯ ಬ್ಯಾಟಿಂಗ್ ಎಂದು ಹೇಳಬೇಕು," ಎಂದು ಬೇಸರ ಹೊರಹಾಕಿದ್ದಾರೆ.
IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!
ತವರಿನಲ್ಲಿ ಗೆಲ್ಲಬಹುದಾಗಿದ್ದ ಈ ಪಂದ್ಯದಲ್ಲಿ ಭಾರತದ ಬ್ಯಾಟರ್‌ಗಳು ನಿರಾಶದಾಯಕ ಪ್ರದರ್ಶನ ತೋರಿದ್ದಾರೆ. ಕೇಶವ್ ಮಹಾರಾಜ್ ಎಸೆದ ಎಸೆತವನ್ನು ಕೆ ಎಲ್ ರಾಹುಲ್ ಸ್ಲಿಪ್‌ನಲ್ಲಿದ್ದ ಫೀಲ್ಡರ್‌ಗೆ ಕ್ಯಾಚ್ ಕೊಟ್ಟು ಔಟಾದರು. ಇನ್ನೊಂದು ಬದಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಬಾರಿಸಿದರೂ, ಮಾರ್ಕೊ ಯೆನ್ಸನ್ ಬೌಲಿಂಗ್‌ನಲ್ಲಿ ಶಾರ್ಟ್ ಥರ್ಡ್ ಮ್ಯಾನ್‌ಗೆ ಕ್ಯಾಚ್ ಕೊಟ್ಟು ಔಟಾದರು. ಇನ್ನು ಮೊದಲ ಪಂದ್ಯದಲ್ಲಿ ಅವಕಾಶ ವಂಚಿತರಾಗಿ ಮರಳಿ ತಂಡದಲ್ಲಿ ಸ್ಥಾನ ಪಡೆದ ಸಾಯಿ ಸುದರ್ಶನ್ ಅವರ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ. ಬಳಿಕ ಧ್ರುವ್ ಜುರೆಲ್ ಕೂಡ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಕಡೆ ನಡೆದಾಗ ತಂಡ ಸಂಕಷ್ಟಕ್ಕೆ ಸಿಲುಕಿತು.
ನಂತರ ಬ್ಯಾಟ್ ಬೀಸಲು ಮೈದಾನಕ್ಕೆ ಬಂದ ರಿಷಭ್ ಪಂತ್ ಕೂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಪರಿಣಾಮವಾಗಿ ಭಾರತ ತಂಡ ಮೂರನೇ ದಿನದ ಊಟದ ವಿರಾಮದ ವೇಳೆಗೆ 7 ವಿಕೆಟ್‌ಗಳಿಗೆ 174 ರನ್ ಕಲೆಹಾಕಿ ತೀವ್ರ ಹಿನ್ನಡೆ ಅನುಭವಿಸಿತು. ಬಳಿಕ ವಾಷಿಂಗ್ಟನ್ ಸುಂದರ್ (48) ಮತ್ತು ಕುಲ್‌ದೀಪ್ ಯಾದವ್ ಕೆಲಹೊತ್ತು ಮೈದಾನದಲ್ಲಿ ಕಠಿಣ ಹೋರಾಟ ನಡೆಸಿ 141 ಎಸೆತಗಳಲ್ಲಿ 52 ರನ್‌ಗಳ ಜೊತೆಯಾಟವಾಡಿದರು. ಇನ್ನುಳಿದಂತೆ ರವೀಂದ್ರ ಜಡೇಜಾ, ನಿತೀಶ್ ರೆಡ್ಡಿ, ಜಸ್‌ಪ್ರೀತ್ ಬುಮ್ರಾ ಅವರು ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತ ತಂಡ 201 ರನ್‌ಗಳಿಗೆ ತನ್ನ ಮೊದಲ ಇನಿಂಗ್ಸ್ ಹೋರಾಟವನ್ನು ಕೊನೆಗೊಳಿಸಿತು.
IND vs SA: ಮಾರ್ಕೊ ಯೆನ್ಸನ್ ಮಾರಕ ದಾಳಿಗೆ ಭಾರತ 201ಕ್ಕೆ ಆಲ್‌ಔಟ್, ಆಫ್ರಿಕಾ ಹಿಡಿತದಲ್ಲಿ ಎರಡನೇ ಟೆಸ್ಟ್!
ಭಾರತೀಯ ಬ್ಯಾಟ್ಸ್‌ಮನ್‌ಗಳ ವಿರುದ್ಧ ಅಭಿನವ್ ಮುಕುಂದ್ ಕಿಡಿ
ಇನ್ನು ಈ ಬಗ್ಗೆ ಮಾತನಾಡಿರುವ ಭಾರತದ ಮಾಜಿ ಆರಂಭಿಕ ಆಟಗಾರ ಅಭಿನವ್ ಮುಕುಂದ್, "ಭಾರತೀಯ ಬ್ಯಾಟ್ಸ್‌ಮನ್‌ಗಳ ಬಗ್ಗೆ ಖಚಿತವಾದ ಪ್ರಶ್ನಾರ್ಥಕ ಚಿಹ್ನೆಗಳು. ಭಾರತ ಮುಂದಿನ ವರ್ಷ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡುವುದಿಲ್ಲ. ಮುಂಬರುವ ಟೆಸ್ಟ್ ಪಂದ್ಯಗಳಲ್ಲಿ ಏನು ಮಾಡಬೇಕೆಂದು ಮರುಪರಿಶೀಲಿಸಲು ಅವರಿಗೆ ಬಹಳ ಸಮಯವಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಪ್ರದರ್ಶನವು ಖಂಡಿತವಾಗಿಯೂ ನೋವುಂಟು ಮಾಡುತ್ತದೆ," ಎಂದು ಹೇಳಿದ್ದಾರೆ.