ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS: ಭಾರತ ಒಡಿಐ ತಂಡದಿಂದ ಜಸ್‌ಪ್ರೀತ್‌ ಔಟ್‌? ಇದಕ್ಕೆ ಕಾರಣ ಇಲ್ಲಿದೆ!

ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಅಕ್ಟೋಬರ್‌ 4 ರಂದು ಪ್ರಕಟಿಸಿದೆ. ಆದರೆ, ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. ಆ ಮೂಲಕ ಬಿಸಿಸಿಐ ಆಯ್ಕೆದಾರರು ಅಚ್ಚರಿ ಮೂಡಿಸಿದ್ದಾರೆ. ಇದಕ್ಕೆ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ.

ಭಾರತ ಏಕದಿನ ತಂಡದಲ್ಲಿ ಜಸ್‌ಪ್ರೀತ್‌ ಬುಮ್ರಾ ಏಕಿಲ್ಲ?

ಭಾರತ ಏಕದಿನ ತಂಡದಲ್ಲಿ ಜಸ್‌ಪ್ರೀತ್‌ ಬುಮ್ರಾಗೆ ಸ್ಥಾನ ನೀಡದೇ ಇರಲು ಕಾರಣವೇನು? -

Profile Ramesh Kote Oct 4, 2025 7:23 PM

ನವದೆಹಲಿ: ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯ (IND vs AUS) ಭಾರತ ತಂಡವನ್ನು (India's ODI Squad) ಶನಿವಾರ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಈ ಸರಣಿಯ ನಿಮಿತ್ತ ಬಿಸಿಸಿಐ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಶುಭಮನ್‌ ಗಿಲ್‌ ಅವರಿಗೆ ಒಡಿಐ ತಂಡದ ನಾಯಕತ್ವವನ್ನು ನೀಡಲಾಗಿದೆ. ಆ ಮೂಲಕ ರೋಹಿತ್‌ ಶರ್ಮಾ ಅವರನ್ನು ನಾಯಕತ್ವದ ಜವಾಬ್ದಾರಿಯಿಂದ ಕೆಳಗೆ ಇಳಿಸಲಾಗಿದೆ. ಆ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಲಾಗಿದೆ. ಮತ್ತೊಂದೆಡೆ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ (Jasprit Bumrah) ಅವರನ್ನು ಒಡಿಐ ತಂಡವನ್ನು ಕೂಡ 50 ಓವರ್‌ಗಳ ತಂಡದಿಂದ ಕೈ ಬಿಡಲಾಗಿದೆ.

ಅಕ್ಟೋಬರ್‌ 19 ರಂದು ಮೊದಲನೇ ಏಕದಿನ ಪಂದ್ಯದ ಮೂಲಕ ಭಾರತ ತಂಡದ ಅಧಿಕೃತವಾಗಿ ಆಸ್ಟ್ರೇಲಿಯಾ ಪ್ರವಾಸ ಆರಂಭವಾಗಲಿದೆ. ಇದೀಗ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯನ್ನು ಆಡುತ್ತಿರುವ ಜಸ್‌ಪ್ರೀತ್‌ ಬುಮ್ರಾಗೂ ಏಕದಿನ ತಂಡದಲ್ಲಿ ಸ್ಥಾನ ನೀಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯ ತಂಡದಲ್ಲಿ ಸ್ಥಾನ ನೀಡಿ, ಒಡಿಐ ತಂಡದಿಂದ ಕೈ ಬಿಡಲಾಗಿದೆ. ಮುಂದಿನ ವರ್ಷ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಯ ಸಲುವಾಗಿ ಬುಮ್ರಾ ಅವರ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಸಲುವಾಗಿ ಅವರನ್ನು ಏಕದಿನ ತಂಡದಿಂದ ಹೊರಗೆ ಇಡಲಾಗಿದೆ. ಏಕೆಂದರೆ ಅವರು ಬುಮ್ರಾ ಭಾರತ ತಂಡದ ಮೂರೂ ಸ್ವರೂಪಕ್ಕೆ ಕೀ ವೇಗದ ಬೌಲರ್‌ ಹಾಗಾಗಿ ಅವರನ್ನು ಗಾಯಕ್ಕೆ ತುತ್ತಾಗದಂತೆ ತಡೆಯವುದು ಟೀಮ್‌ ಮ್ಯಾನೇಜ್‌ಮೆಂಟ್‌ನ ಯೋಜನೆಯಾಗಿದೆ.

IND vs AUS: ರೋಹಿತ್‌ ಶರ್ಮಾರನ್ನು ಭಾರತ ಒಡಿಐ ನಾಯಕತ್ವದಿಂದ ತೆಗೆದಿದ್ದೇಕೆ? ಕಾರಣ ಇಲ್ಲಿದೆ!

ಜಸ್‌ಪ್ರೀತ್‌ ಬುಮ್ರಾ ಜೊತೆಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ಕೂಡ ಆಸ್ಟ್ರೇಲಿಯಾ ವಿಮಾನದಿಂದ ದೂರ ಉಳಿಯುತ್ತಿದ್ದಾರೆ. ಕಳೆದ ಏಷ್ಯಾ ಕಪ್‌ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರು. ಇದರ ಪರಿಣಾಮ ಅವರು ಪಾಕಿಸ್ತಾನ ವಿರುದ್ದದ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಅವರ ಬದಲು ರಿಂಕು ಸಿಂಗ್‌ ಮ್ಯಾಚ್‌ ಫಿನಿಷರ್‌ ಆಗಿ ಆಡಿದ್ದರು. ಇದೀಗ ಹಾರ್ದಿಕ್‌ ಪಾಂಡ್ಯ ಸ್ಥಾನಕ್ಕೆ ಒಡಿಐ ತಂಡದಲ್ಲಿ ನಿತೀಶ್‌ ಕುಮಾರ್‌ ರೆಡ್ಡಿಗೆ ಅವಕಾಶವನ್ನು ನೀಡಲಾಗಿದೆ.

ಭಾರತ ಏಕದಿನ ತಂಡಕ್ಕೆ ಮರಳಿದ ವಿರಾಟ್‌ ಕೊಹ್ಲಿ-ರೋಹಿತ್‌ ಶರ್ಮಾ

ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮ ಅವರು ಟೆಸ್ಟ್‌ ಕಿಕೆಟ್‌ಗೆ ವಿದಾಯ ಹೇಳಿದ್ದರು. ಇದಕ್ಕೂ ಮುನ್ನ 2024ರ ಐಸಿಸಿ ಟಿ20 ವಿಶ್ವಕಪ್‌ ಬಳಿಕ ಈ ಇಬ್ಬರೂ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇವರು ಇದೀಗ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯನ್ನು ಆಡುವುದರ ಕಡೆಗೆ ಗಮನ ಕೊಟ್ಟಿದ್ದಾರೆ. ಆದರೆ, ಈ ಟೂರ್ನಿಗೆ ಇನ್ನೂ ಎರಡು ವರ್ಷಗಳು ಬಾಕಿ ಇವೆ. ಹಾಗಾಗಿ ಇವರಿಗೆ ಏಕದಿನ ವಿಶ್ವಕಪ್‌ ತಂಡದಲ್ಲಿ ಸ್ಥಾನ ನೀಡುವ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ.

IND vs AUS: ಆಸ್ಟ್ರೇಲಿಯಾ ವೈಟ್‌ಬಾಲ್‌ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಏಕದಿನ ತಂಡಕ್ಕೆ ಶುಭಮನ್‌ ಗಿಲ್‌ ನಾಯಕ!

ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಿದ ಬಳಿಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ವಿಶ್ವಕಪ್ ಭವಿಷ್ಯದ ಬಗ್ಗೆ ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಮಾತನಾಡಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಈ ಇಬ್ಬರೂ ಆಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಜಿತ್ ಅಗರ್ಕರ್ ಬಹಿರಂಗಪಡಿಸಿದ್ದಾರೆ. ಅವರ ಭವಿಷ್ಯದ ಬಗ್ಗೆ ಅನಿಶ್ಚಿತತೆ ಇದ್ದ ಕಾರಣ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ತೆಗೆದುಹಾಕಲಾಯಿತು, ಶುಭಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿ.ಕೀ), ಯಶಸ್ವಿ ಜೈಸ್ವಾಲ್‌