IND vs WI: ವಿಂಡೀಸ್ ಬ್ಯಾಟಿಂಗ್ ವೈಫಲ್ಯ, ಇನಿಂಗ್ಸ್ ಅಂತರದಲ್ಲಿ ಮೊದಲನೇ ಟೆಸ್ಟ್ ಗೆದ್ದ ಭಾರತ!
IND vs WI 1st Test Highlights: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಭಾರತ ತಂಡ, ಎದುರಾಳಿ ವೆಸ್ಟ್ ಇಂಡೀಸ್ ವಿರುದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್‌ಗಳಿಂದ ಗೆದ್ದು ಬೀಗಿತು. ಎರಡೂ ಇನಿಂಗ್ಸ್‌ಗಳಲ್ಲಿನ ಬ್ಯಾಟಿಂಗ್ ಕುಸಿತದಿಂದಾಗಿ ಪ್ರವಾಸಿ ವಿಂಡೀಸ್ ಹೀನಾಯ ಸೋಲು ಅನುಭವಿಸಿತು.

ವೆಸ್ಟ್ ಇಂಡೀಸ್ ವಿರುದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಇನಿಂಗ್ಸ್ ಹಾಗೂ 140 ರನ್‌ಗಳ ಜಯ. -

ಅಹಮದಾಬಾದ್: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅಧಿಕಾರಯುತ ಪ್ರದರ್ಶನವನ್ನು ತೋರಿದ ಭಾರತ ತಂಡ, ಮೊದಲನೇ ಟೆಸ್ಟ್ ಪಂದ್ಯದಲ್ಲಿ (IND vs WI 1st Test Highlights) ವೆಸ್ಟ್ ಇಂಡೀಸ್ ವಿರುದ್ಧ ಇನಿಂಗ್ಸ್ ಹಾಗೂ 140 ರನ್‌ಗಳ ದೊಡ್ಡ ಗೆಲುವು ಪಡೆದುಕೊಂಡಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ (Shubman Gill) ನಾಯಕತ್ವದ ಟೀಮ್ ಇಂಡಿಯಾ 1-0 ಅಂತರದಲ್ಲಿ ಮುನ್ನಡೆ ಪಡೆದಿದೆ. ಇನ್ನೂ ಎರಡೂ ಇನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ವೆಸ್ಟ್ ಇಂಡೀಸ್, ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಅತ್ಯಂತ ಹೀನಾಯ ಸೋಲು ಅನುಭವಿಸಬೇಕಾಯಿತು.
ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಶನಿವಾರ ಬೆಳಿಗ್ಗೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 448 ರನ್‌ಗಳಿಗೆ ಡಿಕ್ಲೆರ್ ಮಾಡಿಕೊಂಡಿತು. ಹಾಗಾಗಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ, 276 ರನ್‌ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಅನ್ನು ಆರಂಭಿಸಿತು. ಆದರೆ, ಪ್ರಥಮ ಇನಿಂಗ್ಸ್‌ನಂತೆಯೇ ದ್ವಿತೀಯ ಇನಿಂಗ್ಸ್‌ನಲ್ಲಿಯೂ ವಿಂಡೀಸ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ರವೀಂದ್ರ ಜಡೇಜಾ (54 ಕ್ಕೆ 4) ಹಾಗೂ ಮೊಹಮ್ಮದ್ ಸಿರಾಜ್ (31 ಕ್ಕೆ 3) ಅವರ ಪರಿಣಾಮಕಾರಿ ಬೌಲಿಂಗ್ ದಾಳಿಗೆ ನಲುಗಿದ ವಿಂಡೀಸ್, 45.1 ಓವರ್‌ಗಳಿಗೆ ಕೇವಲ 146 ರನ್‌ಗಳಿಗೆ ಆಲ್‌ಔಟ್ ಆಯಿತು.
IND vs WI: ವಿಂಡೀಸ್ ಎದುರು ಟೆಸ್ಟ್ ಶತಕ ಸಿಡಿಸಿದ ಭಾರತೀಯ ವಿಕೆಟ್‌ಕೀಪರ್‌ಗಳ ವಿವರ!
ವೆಸ್ಟ್ ಇಂಡೀಸ್ ತಂಡದ ಪರ ಎಲಿಕ್ ಅಥನಾಝೆ (38), ಜಸ್ಟಿನ್ ಗ್ರೀವ್ಸ್ (25) ಹಾಗೂ ಜೇಡನ್ ಸೀಲ್ಸ್ (22) ಅವರು ಕೊಂಚ ಪ್ರತಿರೋಧ ತೋರಿದ್ದು ಬಿಟ್ಟರೆ, ಇನ್ನುಳಿದ ವಿಂಡೀಸ್‌ನ ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲರಾದರು. ಭಾರತ ತಂಡದ ಪರ ಪ್ರಥಮ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ರವೀಂದ್ರ ಜಡೇಜಾ, ದ್ವಿತೀಯ ಇನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿ 4 ವಿಕೆಟ್‌ಗಳನ್ನು ಕಿತ್ತರು. ಆ ಮೂಲಕ ಭಾರತದ ಗೆಲುವಿಗೆ ನೆರವು ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪ್ರಥಮ ಇನಿಂಗ್ಸ್‌ನಲ್ಲಿ 4 ವಿಕೆಟ್ ಕಿತ್ತಿದ್ದ ಮೊಹಮ್ಮದ್ ಸಿರಾಜ್, ದ್ವಿತೀಯ ಇನಿಂಗ್ಸ್‌ನಲ್ಲಿಯೂ 3 ವಿಕೆಟ್‌ಗಳನ್ನು ಕಬಳಿಸಿದರು.
Commanding performance from #TeamIndia 👏
— BCCI (@BCCI) October 4, 2025
A stellar all-round show to win the first #INDvWI test by an innings and 1️⃣4️⃣0️⃣ runs to take a 1️⃣-0️⃣ lead 🔥
Scorecard ▶ https://t.co/MNXdZceTab@IDFCFIRSTBank pic.twitter.com/YrHg0L8SQF
448 ರನ್‌ಗಳಿಗೆ ಡಿಕ್ಲೆರ್ ಮಾಡಿಕೊಂಡಿದ್ದ ಭಾರತ
ಇದಕ್ಕೂ ಮುನ್ನ ಭಾರತ ತಂಡ ತನ್ನ ಪ್ರಥಮ ಇನಿಂಗ್ಸ್‌ನಲ್ಲಿ 128 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 448 ರನ್‌ಗಳನ್ನು ಕಲೆ ಹಾಕಿ ಡಿಕ್ಲೆರ್ ಮಾಡಿಕೊಂಡಿತ್ತು. ಆ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ ದೊಡ್ಡ ಮುನ್ನಡೆಯನ್ನು ಪಡೆದಿತ್ತು. ಭಾರತದ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ಕೆಎಲ್ ರಾಹುಲ್ (100 ರನ್), ಧ್ರುವ್ ಜುರೆಲ್ (125 ರನ್) ಹಾಗೂ ರವೀಂದ್ರ ಜಡೇಜಾ (104) ಶತಕಗಳನ್ನು ಬಾರಿಸಿದ್ದರು. ವಿಂಡೀಸ್ ಪರ ರಾಸ್ಟನ್ ಚೇಸ್ ಎರಡು ವಿಕೆಟ್ ಕಿತ್ತಿದ್ದರು.
𝙒𝙖𝙧𝙧𝙞𝙤𝙧'𝙨 𝙀𝙛𝙛𝙤𝙧𝙩 ⚔
— BCCI (@BCCI) October 4, 2025
1️⃣0️⃣4️⃣* runs with the bat 👏
4️⃣/5️⃣4️⃣ with the ball in the second innings 👌
Ravindra Jadeja is the Player of the Match for his superb show in the first #INDvWI Test 🥇
Scorecard ▶ https://t.co/MNXdZceTab#TeamIndia | @IDFCFIRSTBank pic.twitter.com/xImlHNlKJk
162 ರನ್‌ಗಳಿಗೆ ಆಲ್‌ಔಟ್ ಆಗಿದ್ದ ವಿಂಡೀಸ್
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್‌ನಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲವಾಗಿತ್ತು. ಮೊಹಮ್ಮದ್ ಸಿರಾಜ್ (40ಕ್ಕೆ 4) ಹಾಗೂ ಜಸ್‌ಪ್ರೀತ್ ಬುಮ್ರಾ (43ಕ್ಕೆ 3) ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿದ್ದ ವಿಂಡೀಸ್ ಪ್ರಥಮ ಇನಿಂಗ್ಸ್‌ನಲ್ಲಿ 44.1 ಓವರ್‌ಗಳಿಗೆ 162 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ವಿಂಡೀಸ್ ಪರ ಜಸ್ಟಿನ್ ಗ್ರೀವ್ಸ್ 32 ರನ್ ಗಳಿಸಿ ಪ್ರವಾಸಿಗರ ಪರ ವೈಯಕ್ತಿಕ ಗರಿಷ್ಠ ಸ್ಕೋರರ್ ಆಗಿದ್ದರು.