ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs WI 2nd ODI: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌ ವಿವರ!

India vs West Indies 2nd ODI Preview: ಭಾರತ ಹಾಗೂ ವೆಸ್ಟ್‌ ಇಂಡೀಸ್‌ ತಂಡಗಳು ಸೆಪ್ಟಂಬರ್‌ 30 ರಂದು ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುವ ಎರನಡೇ ಒಡಿಐ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಶುಭಮನ್‌ ಗಿಲ್‌ ನಾಯಕತ್ವದ ಟೀಮ್‌ ಇಂಡಿಯಾ ತನ್ನ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಎರಡನೇ ಏಕದಿನ ಪಂದ್ಯ.

ಗುವಾಹಟಿ: ಮೊದಲನೇ ಪಂದ್ಯದ ಗೆಲುವಿನ ವಿಶ್ವಾಸದಲ್ಲಿ ತೇಲುತ್ತಿರುವ ಭಾರತ ತಂಡ, ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಪ್ಟಂಬರ್‌ 30 ರಂದು ಬುಧವಾರ ನಡೆಯುವ ಎರಡನೇ ಏಕದಿನ ಪಂದ್ಯದಲ್ಲಿಯೂ (IND vs WI) ವಿಂಡೀಸ ತಂಡವನ್ನು ಮಣಿಸಿ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಆದರೆ, ಈಗಾಗಲೇ ಆರಂಭಿಕ ಪಂದ್ಯವನ್ನು ಸೋತಿರುವ ವಿಂಡೀಸ್‌, ಸರಣಿಯನ್ನು ಉಳಿಸಿಕೊಳ್ಳಬೇಕೆಂದರೆ, ಗುವಾಹಟಿಯಲ್ಲಿ ಗೆಲ್ಲಲೇಬೇಕಾದ ಒತ್ತಡದಕ್ಕೆ ಸಿಲುಕಿದೆ.

ಭಾರತ ತಂಡ ತಿರುವನಂತಪುರಂನಲ್ಲಿ ಬೌಲಿಂಗ್‌ಗಿಂತ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನವನ್ನು ತೋರಿತ್ತು. ಆದರೆ, ಬೌಲಿಂಗ್‌ನಲ್ಲಿ ಭಾರತ ತಂಡ ಸುಧಾರಿಸಿಕೊಳ್ಳಬೇಕಾಗಿದೆ. ವಿಶೇಷವಾಗಿ ವೇಗದ ಬೌಲಿಂಗ್‌ ವಿಭಾಗ. ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಹಾಗೂ ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ಮೊದಲನೇ ಪಂದ್ಯದಲ್ಲಿ ಪ್ರಸಿಧ್‌ ಕೃಷ್ಣ, ಗುರ್ನೂರ್‌ ಬ್ರಾರ್‌ ಹಾಗೂ ನಿತೀಶ್‌ ಕುಮಾರ್‌ ರೆಡ್ಡಿ ವೇಗದ ಬೌಲಿಂಗ್‌ ವಿಭಾಗದಲ್ಲಿ ಆಡಿದ್ದರು.

ಏಷ್ಯನ್ ಗೇಮ್ಸ್ ಕ್ರಿಕೆಟ್: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಶ್ರೀಲಂಕಾ ಎದುರಾಳಿ

ನಮನ್‌ ಧೀರ್‌ ಬದಲು ಮೊಹಮ್ಮದ್‌ ಸಿರಾಜ್‌

ಕಳೆದ ಪಂದ್ಯದಲ್ಲಿ ಹೆಚ್ಚುವರಿ ಬ್ಯಾಟಿಂಗ್‌ ಆಯ್ಕೆಯಾಗಿ ನಮನ್‌ ಧೀರ್‌ಗೆ ಪೇಯಿಂಗ್‌ XIನಲ್ಲಿ ಅವಕಾಶವನ್ನು ನೀಡಲಾಗಿತ್ತು. ಇದೀಗ ಎರಡನೇ ಪಂದ್ಯದಲ್ಲಿ ನಮನ್‌ ಧೀರ್‌ ಅವರನ್ನು ಕೂರಿಸಿ, ಅವರ ಸ್ಥಾನದಲ್ಲಿ ಮೊಹಮ್ಮದ್‌ ಸಿರಾಜ್‌ ಅವರನ್ನು ಹೆಚ್ಚುವರಿ ವೇಗದ ಬೌಲರ್‌ ಆಗಿ ಆಡಿಸಬಹುದು. ಇನ್ನು ಭಾರತ ತಂಡದ ಬ್ಯಾಟಿಂಗ್‌ ವಿಭಾಗ ಅತ್ಯಂತ ಬಲಿಶಾಲಿಯಾಗಿದೆ. ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ

ಒಗೊಂಡ ಅಗ್ರ ಕ್ರಮಾಂಕ ಅತ್ಯಂತ ಬಲಿಶಾಲಿಯಾಗಿದೆ. ಹಾಗಾಗಿ ಬ್ಯಾಟಿಂಗ್‌ ಬಗ್ಗೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಮೊದಲನೇ ಪಂದ್ಯದ ಚೇಸಿಂಗ್‌ನಲ್ಲಿ ವಿರಾಟ್‌ ಕೊಹ್ಲಿ 139 ರನ್‌ಗಳ ಉಪಯುಕ್ತ ಕೊಡುಗೆಯನ್ನು ನೀಡಿದರು. ನಾಯಕ ಗಿಲ್‌ ಕೂಡ ಭರ್ಜರಿ ಶತಕವನ್ನು ಬಾರಿಸಿದ್ದರು.

55ನೇ ಒಡಿಐ ಶತಕದೊಂದಿಗೆ ಸುನೀಲ್‌ ಗವಾಸ್ಕರ್‌ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿ

ಪಿಚ್‌ ರಿಪೋರ್ಟ್‌

ಗುವಾಹಟಿಯ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದ ಪಿಚ್‌ ಸಾಮಾನ್ಯವಾಗಿ ಏಕದಿನ ಪಂದ್ಯಗಳಲ್ಲಿ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿದೆ. ಈ ಮೈದಾನದಲ್ಲಿ ಈ ಹಿಂದೆ ಹಲವು ಹೈ-ಸ್ಕೋರಿಂಗ್ ಪಂದ್ಯಗಳು ನಡೆದಿವೆ. 2023ರಲ್ಲಿ ಶ್ರೀಲಂಕಾ ವಿರುದ್ಧ ಭಾರತ 373 ರನ್‌ಗಳ ಬೃಹತ್ ಮೊತ್ತ ದಾಖಲಿಸಿತ್ತು. ಇನ್ನು 2018ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 326 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತ್ತು. ಹೀಗಾಗಿ, ಈ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಬ್ಯಾಟರ್‌ಗಳು ದೊಡ್ಡ ಮೊತ್ತ ಗಳಿಸುವ ನಿರೀಕ್ಷೆಯಿದೆ.

ಉಭಯ ಸಂಭಾವ್ಯ ಪ್ಲೇಯಿಂಗ್‌ XI

ಭಾರತ: ಕೆ.ಎಲ್. ರಾಹುಲ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಪ್ರಸಿಧ್‌ ಕೃಷ್ಣ ಮತ್ತು ಗುರ್ನೂರ್ ಬ್ರಾರ್, ಮೊಹಮ್ಮದ್‌ ಸಿರಾಜ್‌

ವೆಸ್ಟ್‌ ಇಂಡೀಸ್‌: ಶೇಯ್ ಹೋಪ್ (ನಾಯಕ), ಅಮೀರ್ ಜಾಂಗೂ, ಜ್ಯುವೆಲ್ ಆಂಡ್ರ್ಯೂ, ಕೀಸಿ ಕಾರ್ಟಿ, ಜಾನ್ ಕ್ಯಾಂಪ್‌ಬೆಲ್, ಜಸ್ಟಿನ್ ಗ್ರೀವ್ಸ್, ಮ್ಯಾಥ್ಯೂ ಫೋರ್ಡ್, ರೋಸ್ಟನ್ ಚೇಸ್, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್ ಮತ್ತು ಗುಡಾಕೇಶ್ ಮೋಟಿ