IND vs WI 2nd Test: ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ, ದೊಡ್ಡ ಮೊತ್ತದತ್ತ ಭಾರತ ತಂಡ!
IND vs WI 2nd Test Day 2 Highlights: ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಭಾರತ, ಮೊದಲನೇ ದಿನದಾಟದ ಅಂತ್ಯಕ್ಕೆ 90 ಓವರ್‌ಗಳಿಗೆ 2 ವಿಕೆಟ್ ನಷ್ಟಕ್ಕೆ 318 ರನ್‌ಗಳನ್ನು ಗಳಿಸಿ ಉತ್ತಮ ಆರಂಭ ಪಡೆದಿದೆ.

ಎರಡನೇ ಟೆಸ್ಟ್ ಮೊದಲನೇ ದಿನ ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್ ಬ್ಯಾಟಿಂಗ್‌ನಲ್ಲಿ ಮಿಂಚಿದರು. -

ನವದೆಹಲಿ: ಯಶಸ್ವಿ ಜೈಸ್ವಾಲ್ (173 ರನ್) ಅವರ ಶತಕ ಹಾಗೂ ಸಾಯಿ ಸುದರ್ಶನ್ (87 ರನ್) ಅವರ ಅರ್ಧಶತಕದ ಬಲದಿಂದ ಭಾರತ ತಂಡ, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs WI) ಉತ್ತಮ ಆರಂಭ ಪಡೆದಿದೆ. ಶುಕ್ರವಾರ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಮೊದಲನೇ ದಿನದಾಟದ ಅಂತ್ಯಕ್ಕೆ ಪ್ರಥಮ ಇನಿಂಗ್ಸ್‌ನಲ್ಲಿ 90 ಓವರ್‌ಗಳಿಗೆ ಎರಡು ವಿಕೆಟ್‌ಗಳ ನಷ್ಟಕ್ಕೆ 318 ರನ್‌ಗಳನ್ನು ಕಲೆ ಹಾಕಿದೆ. ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಆರಂಭಿಕ ಯಶಸ್ವಿ ಜೈಸ್ವಾಲ್ (Yashasvi jaiswal), ತಮ್ಮ ವೃತ್ತಿ ಜೀವನದ ಏಳನೇ ಶತಕವನ್ನು ಬಾರಿಸಿ ಭಾರತ ತಂಡಕ್ಕೆ ಭರ್ಜರಿ ಆರಂಭವನ್ನು ತಂದುಕೊಟ್ಟರು.
ಭಾರತ ತಂಡದ ಪರ ಇನಿಂಗ್ಸ್ ಆಂಭಿಸಿದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಹೊಸ ಚೆಂಡಿನಲ್ಲಿ ಅತ್ಯುತ್ತಮ ಆಟವನ್ನು ಆಡಿದರು. ಈ ಇಬ್ಬರೂ ಮುರಿಯದ ಮೊದಲನೇ ವಿಕೆಟ್‌ಗೆ 58 ರನ್‌ಗಳನ್ನು ಕಲೆ ಹಾಕಿ ತಂಡಕ್ಕೆ ಉತ್ತಮ ಆರಂಭವನ್ನು ತಂದುಕೊಟ್ಟರು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೆಎಲ್ ರಾಹುಲ್, ಈ ಪಂದ್ಯದಲ್ಲಿಯೂ 54 ಎಸೆತಗಳಲ್ಲಿ 38 ರನ್ ಗಳಿಸಿ ಉತ್ತಮ ಆರಂಭವನ್ನು ಪಡೆದಿದ್ದರು. ಆದರೆ, ಜಾಮೆಲ್ ವಾರಿಕನ್ ಅವರಿಗೆ ವಿಕೆಟ್ ಒಪ್ಪಿಸಿ ನಿರಾಶೆಯೊಂದಿಗೆ ಪೆವಿಲಿಯನ್‌ಗೆ ತೆರಳಿದರು.
IND vs WI 2nd Test: ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ, ದೊಡ್ಡ ಮೊತ್ತದತ್ತ ಭಾರತ ತಂಡ!
ಚೊಚ್ಚಲ ಅರ್ಧಶತಕ ಬಾರಿಸಿದ ಸಾಯಿ ಸುದರ್ಶನ್
ಮೊದಲನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಸಾಯಿ ಸುದರ್ಶನ್ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಗಮನಾರ್ಹ ಪ್ರದರ್ಶನವನ್ನು ತೋರಿದರು. ಅವರು ಆಡಿದ 165 ಎಸೆತಗಳಲ್ಲಿ 12 ಮನಮೋಹಕ ಬೌಂಡರಿಗಳೊಂದಿಗೆ 87 ರನ್‌ಗಳನ್ನು ಗಳಿಸಿದರು. ಆ ಮೂಲಕ ಚೊಚ್ಚಲ ಶತಕವನ್ನು ಸಿಡಿಸುವ ಹಾದಿಯಲ್ಲಿದ್ದರು. ಆದರೆ, ಜಾಮೆಲ್ ವಾರಿಕನ್ ಅವರ ಎಸೆತವನ್ನು ಅರಿಯುವಲ್ಲಿ ವಿಫಲವಾಗಿ ಚೆಂಡನ್ನು ಪ್ಯಾಡ್ ಮೇಲೆ ಹಾಕಿಕೊಂಡರು. ಅಲ್ಲದೆ ಯಶಸ್ವಿ ಜೈಸ್ವಾಲ್ ಅವರ ಜೊತೆ ಎರಡನೇ ವಿಕೆಟ್‌ಗೆ 193 ರನ್‌ಗಳ ಜೊತೆಯಾಟವನ್ನು ಆಡಿದರು.
That will be Stumps on Day 1️⃣
— BCCI (@BCCI) October 10, 2025
1️⃣7️⃣3️⃣*for Yashasvi Jaiswal 🫡
8️⃣7️⃣ for Sai Sudharsan 👏
3️⃣1️⃣8️⃣/2️⃣ for #TeamIndia
Captain Shubman Gill and Yashasvi Jaiswal will resume proceedings on Day 2. 👍
Scorecard ▶ https://t.co/GYLslRzj4G#INDvWI | @IDFCFIRSTBank pic.twitter.com/mRdU9jXIy3
ಏಳನೇ ಶತಕವನ್ನು ಬಾರಿಸಿದ ಯಶಸ್ವಿ ಜೈಸ್ವಾಲ್
ಮೊದಲನೇ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾಗಿದ್ದ ಯಶಸ್ವಿ ಜೈಸ್ವಾಲ್, ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ ಯಶಸ್ವಿ ಜೈಸ್ವಾಲ್, ವಿಂಡೀಸ್ ಬೌಲರ್‌ಗಳನ್ನು ದೀರ್ಘಕಾಲ ಕಾಡಿದರು. ಯಾವುದೇ ತಪ್ಪು ಹೊಡೆತಗಳಿಗೆ ಕೈ ಹಾಕದ ಅವರು, ಬಹಳ ಅಚ್ಚುಕಟ್ಟಾಗಿ ಬ್ಯಾಟ್ ಮಾಡಿದರು. ಅವರು ಮೊದಲನೇ ದಿನದಾಟದ ಅಂತ್ಯಕ್ಕೆ 253 ಎಸೆತಗಳಲ್ಲಿ 22 ಬೌಂಡರಿಗಳೊಂದಿಗೆ ಅಜೇಯ 173 ರನ್‌ಗಳನ್ನು ಕಲೆ ಹಾಕಿ, ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇವರು ತಮ್ಮಏಳನೇ ಶತಕದ ಮೂಲಕ ಜೈಸ್ವಾಲ್ ಅವರು, 24 ವರ್ಷ ವಯಸ್ಸಿಗೂ ಮುನ್ನ ಏಳು ಟೆಸ್ಟ್ ಶತಕಗಳನ್ನು ಪೂರ್ಣಗೊಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿಗೆ ಸೇರ್ಪಡೆಯಾದರು. ಮತ್ತೊಂದು ತುದಿಯಲ್ಲಿ ನಾಯಕ ಶುಭಮನ್ ಗಿಲ್ (20* ರನ್) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
📸📸
— BCCI (@BCCI) October 10, 2025
A 💯 to remember 😍
Rate Yashasvi Jaiswal's innings so far 👇
Updates ▶ https://t.co/GYLslRyLf8#TeamIndia | #INDvWI | @IDFCFIRSTBank | @ybj_19 pic.twitter.com/3LY101kuna
ಮೊದಲನೇ ಟೆಸ್ಟ್ ಗೆದ್ದಿದ್ದ ಭಾರತ
ಇದಕ್ಕೂ ಮುನ್ನ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 142 ರನ್‌ಗಳಿಂದ ಗೆದ್ದು ಬೀಗಿತ್ತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿತ್ತು. ಅಂದಿನ ಪಂದ್ಯದಲ್ಲಿ ಭಾರತದ ಪರ ಕೆಎಲ್ ರಾಹುಲ್, ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ ಶತಕಗಳನ್ನು ಬಾರಿಸಿದ್ದರು. ಆಲ್‌ರೌಂಡರ್ ಪ್ರದರ್ಶನವನ್ನು ತೋರಿದ್ದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಎರಡನೇ ಪಂದ್ಯವನ್ನು ಭಾರತ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಎದುರು ನೋಡುತ್ತಿದೆ.