ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs WI: ಎರಡನೇ ಒಡಿಐಗೆ ಭಾರತದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಸೂಚಿಸಿದ ಆಕಾಶ್‌ ಚೋಪ್ರಾ!

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಸಲಹೆ ನೀಡಿದ್ದಾರೆ. ಗುವಾಹಟಿ ಪಿಚ್‌ನಲ್ಲಿ ಇಬ್ಬನಿ ಬರುವ ಹಿನ್ನೆಲೆಯಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಮೊಹಮ್ಮದ್‌ ಸಿರಾಜ್‌ಗೆ ಅವಕಾಶ ನೀಡಬೇಕೆಂದು ಚೋಪ್ರಾ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಆಗ್ರಹಿಸಿದ್ದಾರೆ.

ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಸೂಚಿಸಿದ ಆಕಾಶ್‌ ಚೋಪ್ರಾ.

ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ (IND vs WI) ಎರಡನೇ ಪಂದ್ಯ ಬುಧವಾರ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಭಾರತ, 1-0 ಮುನ್ನಡೆ ಹೊಂದಿದ್ದು, ಎರಡನೇ ಪಂದ್ಯ ಗೆದ್ದರೆ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ವಶಪಡಿಸಿಕೊಳ್ಳಲಿದೆ. ಮೊದಲನೇ ಪಂದ್ಯದ ಗೆಲುವಿನ ಹೊರತಾಗಿಯೂ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ (Aakash chopra) ಒಂದು ಮಹತ್ವದ ಬದಲಾವಣೆಯನ್ನು ಸೂಚಿಸಿದ್ದಾರೆ.

ಬುಧವಾರ ನಡೆಯುವ ಎರಡನೇ ಪಂದ್ಯದ ಪ್ಲೇಯಿಂಗ್ ಇಲೆವೆನ್ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಬರ್ಸಪರ ಅಂಗಣದ ಕಂಡೀಷನ್ಸ್‌ನಲ್ಲಿ ಇಬ್ಬನಿ ಕಾಣಿಸಿಕೊಂಡರೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಅವರ ಪ್ರಕಾರ, ನಮನ ಧೀರ್ ಬದಲಿಗೆ ಸಿರಾಜ್ ಆಡಿದರೆ ಭಾರತದ ಬೌಲಿಂಗ್ ದಾಳಿ ಹೆಚ್ಚು ಪರಿಣಾಮಕಾರಿಯಾಗಬಹುದು.

IND vs WI 2nd ODI: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌ ವಿವರ!

ಮೊದಲ ಏಕದಿನ ಪಂದ್ಯದಲ್ಲಿ ನಮನ ಧೀರ್‌ಗೆ ಬ್ಯಾಟ್‌ ಮಾಡುವ ಅವಕಾಶ ಸಿಗಲಿಲ್ಲ. ಬೌಲಿಂಗ್‌ನಲ್ಲಿ ಅವರು ಐದು ಓವರ್‌ಗಳಲ್ಲಿ 33 ರನ್ ನೀಡಿದ್ದರು. ಅವರು ಮುಖ್ಯವಾಗಿ ಆರನೇ ಬೌಲಿಂಗ್ ಆಯ್ಕೆಯಾಗಿ ತಂಡದಲ್ಲಿದ್ದರು. ಮತ್ತೊಂದೆಡೆ, ಸಿರಾಜ್ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ನಿತೀಶ್ ಕುಮಾರ್ ರೆಡ್ಡಿ ಮೂರನೇ ವೇಗದ ಬೌಲರ್ ಆಗಿ ಕಣಕ್ಕಿಳಿದಿದ್ದರು.

ನಮನ್‌ ಧೀರ್‌ ಬದಲು ಸಿರಾಜ್‌ಗೆ ಸ್ಥಾನ ನೀಡಿ

“ಟಾಸ್ ನಿಮ್ಮ ಕೈಯಲ್ಲಿಲ್ಲದ ಪರಿಸ್ಥಿತಿಯಲ್ಲಿ ಪಂದ್ಯ ನಡೆಯಲಿದ್ದು, ಇಬ್ಬನಿ ಬೀಳುವ ಸಾಧ್ಯತೆಯೂ ಇದೆ. ಹೀಗಿರುವಾಗ ಮೊಹಮ್ಮದ್ ಸಿರಾಜ್ ಅವರನ್ನು ಏಕೆ ಆಡಿಸಬಾರದು? ನಮನ್‌ ಧೀರ್ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಅವರು ಉತ್ತಮವಾಗಿ ಬ್ಯಾಟ್‌ ಮಾಡುತ್ತಾರೆ. ಆದರೆ ಅವರು ಇನ್ನೂ ಪಾರ್ಟ್‌ಟೈಮ್‌ ಬೌಲರ್. ವಿಕೆಟ್ ಪಡೆಯುವ ಸಾಮರ್ಥ್ಯದ ಪ್ರಮುಖ ಬೌಲರ್ ಅಲ್ಲ. ಚೆಂಡು ಒದ್ದೆಯಾದರೆ ಅವರ ಬೌಲಿಂಗ್ ಇನ್ನಷ್ಟು ಕಷ್ಟವಾಗುತ್ತದೆ. ಹೀಗಾಗಿ ಇಂತಹ ಪರಿಸ್ಥಿತಿಯಲ್ಲಿ ಪೂರ್ಣ ಪ್ರಮಾಣದ ಬೌಲರ್‌ಗಳಿಗೆ ಆದ್ಯತೆ ನೀಡಬೇಕು,” ಎಂದು ಆಕಾಶ್ ಚೋಪ್ರಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಭಾರತ ಪರ ಒಂದು ಬದಲಾವಣೆ ಸಾಧ್ಯತೆ

“ಪ್ರಸ್ತುತ ಫಾರ್ಮ್ ಸಮಸ್ಯೆಯಲ್ಲ. ಹೀಗಾಗಿ ಬ್ಯಾಟಿಂಗ್ ಡೆಪ್ತ್‌ ಬಗ್ಗೆಯೂ ಹೆಚ್ಚು ಚಿಂತಿಸಬೇಕಾಗಿಲ್ಲ. ನಮನ್‌ ಧೀರ್ ಉತ್ತಮ ಆಟಗಾರರಾದರೂ, ಇಬ್ಬನಿ ಬೀಳುವ ಸಾಧ್ಯತೆಯನ್ನು ಗಮನಿಸಿದರೆ ಮುಂದಿನ ಪಂದ್ಯಕ್ಕೆ ಅವರು ಸೂಕ್ತ ಆಯ್ಕೆಯಲ್ಲ. ಅಲ್ಲದೆ, 2027ರ ಏಕದಿನ ವಿಶ್ವಕಪ್‌ ಟೂರ್ನಿಗಾಗಿ ಕೂಡ ಅವರನ್ನು ಪ್ರಮುಖ ಆಯ್ಕೆಯಾಗಿ ಪರಿಗಣಿಸಲಾಗುತ್ತಿಲ್ಲ,” ಎಂದು ಅವರು ತಿಳಿಸಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ನಮನ್‌ ಧೀರ್‌ಗೆ ಬ್ಯಾಟ್‌ ಮಾಡುವ ಅವಕಾಶ ಸಿಗಲಿಲ್ಲ. ಬೌಲಿಂಗ್‌ನಲ್ಲಿ ಅವರು ಐದು ಓವರ್‌ಗಳಲ್ಲಿ 33 ರನ್ ನೀಡಿ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಇನ್ನು ಮೊಹಮ್ಮದ್ ಸಿರಾಜ್‌ಗೆ ಆಡುವ ಬಳಗದಲ್ಲಿ ಸ್ಥಾನ ಸಿಗಲಿಲ್ಲ. ನಿತೀಶ್ ಕುಮಾರ್ ರೆಡ್ಡಿ ಮೂರನೇ ವೇಗದ ಬೌಲರ್ ಆಗಿ ತಂಡದಲ್ಲಿ ಕಾಣಿಸಿಕೊಂಡರು. ಪ್ರಸಿಧ್ ಕೃಷ್ಣ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದರೆ, ಅವರೊಂದಿಗೆ ಗುರ್ನೂರ್‌ ಬ್ರಾರ್ ವೇಗದ ಬೌಲಿಂಗ್ ಜವಾಬ್ದಾರಿ ನಿಭಾಯಿಸಿದರು. ಭಾರತ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ

ಮೊದಲ ಪಂದ್ಯದಲ್ಲಿ ಭಾರತದ ಗೆಲುವಿಗೆ ವಿರಾಟ್ ಕೊಹ್ಲಿ ಮತ್ತು ನಾಯಕ ಶುಭಮನ್ ಗಿಲ್ ಶತಕಗಳ ಮೂಲಕ ಪ್ರಮುಖ ಕೊಡುಗೆ ನೀಡಿದ್ದರು. ವೆಸ್ಟ್ ಇಂಡೀಸ್ 295/7 ರನ್ ಗಳಿಸಿದ ಬಳಿಕ ಭಾರತ 41.4 ಓವರ್‌ಗಳಲ್ಲಿ 300/2 ರನ್ ಗಳಿಸಿ 8 ವಿಕೆಟ್‌ಗಳ ಜಯ ದಾಖಲಿಸಿತು. ಕೊಹ್ಲಿ 139 ರನ್‌ಗಳ ಅಜೇಯ ಇನಿಂಗ್ಸ್ ಆಡಿದರೆ, ಗಿಲ್ 110 ರನ್ ಗಳಿಸಿದರು. ಕುಲ್ದೀಪ್ ಯಾದವ್ 4/40 ಬೌಲಿಂಗ್ ಪ್ರದರ್ಶನದೊಂದಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.