ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ (IND vs WI) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ (Shubman Gill) ಪ್ರಮುಖ ಆಕರ್ಷಣೆಯಾಗಿದೆ. ಇದಕ್ಕೆ ಬಲವಾದ ಸಾಕ್ಷಿ ಪಂದ್ಯದ ಎರಡನೇ ದಿನ ಲಭಿಸಿದೆ. ಶುಭಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಅವರು ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ಯುವತಿಯೊಬ್ಬಳು ʻಐ ಲವ್ ಯೂ ಶುಭಮನ್ʼ ಎಂದು ಬರೆದಿರುವ ಫಲಕವನ್ನು ಹಿಡಿದು ನಿಂತಿದ್ದಳು. ಇದಕ್ಕೆ ಸಂಬಂಧಿಸಿದ ವಿಡಿಯೊ ಹಾಗೂ ಫೋಟೋಗಳು ವೈರಲ್ ಆಗಿವೆ.
ಕ್ಯಾಮೆರಾಮ್ಯಾನ್ ಯುವತಿಯನ್ನು ಸೆರೆ ಹಿಡಿಯುತ್ತಿದ್ದಂತೆ ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳು ಜೋರಾಗಿ ಕೂಗಿದರು. ಇದಾದ ಕೆಲವೇ ನಿಮಿಷಗಳಲ್ಲಿ ಈ ಯುವತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾಳೆ. ಈ ಬಗ್ಗೆ ಅಭಿಮಾನಿಗಳು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಬಳಿಕ ಭಾರತ ತಂಡದಲ್ಲಿ ಶುಭಮನ್ ಗಿಲ್. ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ ಎಂಬುದಕ್ಕೆಇದೇ ಅತ್ಯುತ್ತಮ ಉದಾಹರಣೆಯಾಗಿದೆ.
IND vs WI: ಶುಭಮನ್ ಗಿಲ್ 10ನೇ ಶತಕ, 518 ರನ್‌ಗಳಿಗೆ ಡಿಕ್ಲೆರ್ ಮಾಡಿಕೊಂಡ ಭಾರತ!
10ನೇ ಟೆಸ್ಟ್ ಶತಕ ಬಾರಿಸಿದ ಶುಭಮನ್ ಗಿಲ್
ಪಂದ್ಯದ ಎರಡನೇ ದಿನ ಶುಭಮನ್ ಗಿಲ್ ತಮ್ಮ ಬ್ಯಾಟಿಂಗ್‌ನಲ್ಲಿ ಮಿಂಚಿದರು. ಅವರು ತಮ್ಮ ಟೆಸ್ಟ್ ವೃತ್ತಿ ಜೀವನದ 10ನೇ ಶತಕವನ್ನು ಬಾರಿಸಿದ್ದರು. ಆ ಮೂಲಕ ಭಾರತ ಟೆಸ್ಟ್ ತಂಡದ ನಾಯಕನಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆಯ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ ಹಾಗೂ ಎಂಎಸ್ ಧೋನಿ ಅವರನ್ನು ಸರಿದೂಗಿಸಿದ್ದಾರೆ. ಗಿಲ್ ನಾಯಕನಾಗಿ ಐದನೇ ಟೆಸ್ಟ್ ಶತಕವನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ ಅವರು 4ನೇ ಶತಕವನ್ನು ಬಾರಿಸಿದ್ದಾರೆ.
ಕ್ಯಾಲೆಂಡರ್ ವರ್ಷದಲ್ಲಿ ಭಾರತ ತಂಡದ ನಾಯಕನಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಗಿಲ್ ಸರಿದೂಗಿಸಿದ್ದಾರೆ. 2017 ಮತ್ತು 2018ರಲ್ಲಿ ಎರಡು ಬಾರಿ ಐದು ಶತಕಗಳನ್ನು ಗಳಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗಿಲ್ 196 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 16 ಬೌಂಡರಿಗಳೊಂದಿಗೆ ಅಜೇಯ 129 ರನ್‌ಗಳನ್ನು ಗಳಿಸಿದರು. ಆ ಮೂಲಕ ಭಾರತ ಪ್ರಥಮ ಇನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್‌ಗಳನ್ನು ಗಳಿಸಿದ ಬಳಿಕ ಡಿಕ್ಲೆರ್ ಮಾಡಿಕೊಂಡಿತು.
IND vs WI: ರನ್‌ಔಟ್ ಆದ ಬೆನ್ನಲ್ಲೆ ಶುಭಮನ್ ಗಿಲ್ ವಿರುದ್ದ ಯಶಸ್ವಿ ಜೈಸ್ವಾಲ್ ಕಿಡಿ! ವಿಡಿಯೊ
ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಸನಿಹದಲ್ಲಿ ಭಾರತ
ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 142 ರನ್‌ಗಳಿಂದ ಗೆಲುವು ಪಡೆದಿತ್ತು ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿದೆ. ಇದೀಗ ಡೆಲ್ಲಿ ಟೆಸ್ಟ್ ಗೆದ್ದು ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ.