ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

INDA vs SAA: ಅರ್ಧಶತಕ ಬಾರಿಸಿ ಚೇತೇಶ್ವರ್‌ ಪೂಜಾರ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್‌!

ದಕ್ಷಿಣ ಆಫ್ರಿಕಾ ಎ ವಿರುದ್ಧ ಭಾರತ ಎ ತಂಡದ ಋತುರಾಜ್‌ ಗಾಯಕ್ವಾಡ್‌ ಅರ್ಧ ಶತಕವನ್ನು ಬಾರಿಸಿದ್ದಾರೆ. ಭಾನುವಾರ ನಡೆದಿದ್ದ ಅನುಧಿಕೃತ ಎರಡನೇ ಏಕದಿನ ಪಂದ್ಯದಲ್ಲಿಅವರು ಈ ಇನಿಂಗ್ಸ್‌ ಆಡಿದ್ದು, ಆ ಮೂಲಕ ಲಿಸ್ಟ್‌ ಎ ಪಂದ್ಯದಲ್ಲಿ ಅತ್ಯುತ್ತಮ ಸರಾಸರಿಯನ್ನು ಹೊಂದಿದ ಎಂಬ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಆ ಮೂಲಕ ಚೇತೇಶ್ವರ್‌ ಪೂಜಾರ ಅವರ ದಾಖಲೆಯನ್ನು ಮುರಿದಿದ್ದಾರೆ.

ದಕ್ಷಿಣ ಆಫ್ರಿಕಾ ಎ ವಿರುದ್ಧ ಅರ್ಧಶತಕ ಬಾರಿಸಿ ವಿಶೇಷ ದಾಖಲೆ ಬರೆದ ಋತುರಾಜ್‌ ಗಾಯಕ್ವಾಡ್‌.

ನವದೆಹಲಿ: ದಕ್ಷಿಣ ಆಫ್ರಿಕಾ ಎ ವಿರುದ್ಧ ಎರನಡೇ ಅನಧಿಕೃತ ಏಕದಿನ ಪಂದ್ಯದಲ್ಲಿ (INDA vs SAA) ಅದ್ಭುತ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಭಾರತ ಎ ತಂಡದ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಅರ್ಧಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ನಡೆದಿದ್ದ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದ ಭಾರತದ ಉಪ ನಾಯಕ 83 ಎಸೆತಗಳಲ್ಲಿ ಅಜೇಯ 68 ರನ್‌ಗಳನ್ನು ಗಳಿಸಿದರು. ಆ ಮೂಲಕ 27.5 ಓವರ್‌ಗಳಿಗೆ 133 ರನ್‌ಗಳ ಗುರಿಯನ್ನು ಭಾರತ ಚೇಸ್‌ ಮಾಡಿತ್ತು.

ಇವರು ಅರ್ಧಶತಕದ ಜೊತೆಗೆ ಅಭಿಷೇಕ್‌ ಶರ್ಮಾ ಜೊತೆಗೆ ಮೊದಲನೇ ವಿಕೆಟ್‌ಗೆ 53 ರನ್‌ಗಳನ್ನು ಕಲೆ ಹಾಕಿದ್ದರು. ಎಡಗೈ ಬ್ಯಾಟ್ಸ್‌ಮನ್‌ 22 ಎಸೆತಗಳಲ್ಲಿ 32 ರನ್‌ಗಳನ್ನು ಕಲೆ ಹಾಕಿದ್ದರು. ನಂತರ ಎರಡನೇ ವಿಕೆಟ್‌ಗೆ ಋತುರಾಜ್‌ ಗಾಯಕ್ವಾಡ್‌ ಹಾಗೂ ತಿಲಕ್‌ ವರ್ಮಾ ಅವರು ಎರಡನೇ ವಿಕೆಟ್‌ಗೆ 82 ರನ್‌ಗಳನ್ನು ಸೇರಿಸಿದ್ದರು. ಆ ಮೂಲಕ ಭಾರತ ತಂಡದ ಗೆಲುವಿಗೆ ನೆರವು ನೀಡಿದ್ದರು. ಇದಕ್ಕೂ ಮುನ್ನ ಮೊದಲನೇ ಅನಧಿಕೃತ ಪಂದ್ಯದಲ್ಲಿ ಗಾಯಕ್ವಾಡ್‌ ಅದ್ಭುತ ಶತಕವನ್ನು ಬಾರಿಸಿದ್ದರು. ಬಲಗೈ ಬ್ಯಾಟ್ಸ್‌ಮನ್‌ 117 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಭಾರತ ಎ ತಂಡ 290 ರನ್‌ಗಳನ್ನು ಚೇಸ್‌ ಮಾಡಿತ್ತು. ಈ ಎರಡೂ ಪಂದ್ಯಗಳಲ್ಲಿ ಗಾಯಕ್ವಾಡ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

IND vs SA:ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಶುಭಮನ್‌ ಗಿಲ್‌ ಎರಡನೇ ಟೆಸ್ಟ್‌ಗೆ ಅನುಮಾನ!

ಇತಿಹಾಸ ಸೃಷ್ಟಿಸಿದ ಋತುರಾಜ್‌ ಗಾಯಕ್ವಾಡ್‌

ಈ ಅರ್ಧಶರಕದ ಮೂಲಕ ಲಿಸ್ಟ್‌ ಎ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಸರಾಸರಿಯಲ್ಲಿ ರನ್‌ ಗಳಿಸಿದ ಭಾರತದ ಏಕೈಕ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಋತುರಾಜ್‌ ಗಾಯಕ್ವಾಡ್‌ ಬರೆದಿದ್ದಾರೆ. ಆ ಮೂಲಕ ಹಿರಿಯ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ ಅವರು 56.93ರ ಸರಾಸರಿಯನ್ನು ಹೊಂದಿದ್ದರು. ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಬಳಿಕ ಋತುರಾಜ್‌ ಗಾಯಕ್ವಾಡ್‌ ಅವರ ಸರಾಸರಿಯಲ್ಲಿ ಏರಿಕೆಯಾಗಿದೆ. ಅವರು ಇದೀಗ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ 57.80ರ ಸರಾಸರಿಯನ್ನು ಹೊಂದಿದ್ದಾರೆ. ಒಟ್ಟಾರೆ ಆಸ್ಟ್ರೇಲಿಯಾ ದಿಗ್ಗಜ ಮೈಕಲ್‌ ಬೆವೆನ್‌ ಬಳಿಕ ಎರಡನೇ ಅತ್ಯುತ್ತಮ ಸರಾಸರಿ ಹೊಂದಿದ ಬ್ಯಾಟ್ಸ್‌ಮನ್‌ ಆಗಿದ್ದಾರೆ.

IND vs SA: 15 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್‌ ಪಂದ್ಯ ಜಯಿಸಿದ ದಕ್ಷಿಣ ಆಫ್ರಿಕಾ

ಋತುರಾಜ್‌ ಗಾಯಕ್ವಾಡ್‌ಎ ಲಿಸ್ಟ್‌ ಎ ವೃತ್ತಿ ಜೀವನ

2016-17ರ ಸಾಲಿನಲ್ಲಿ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮಹಾರಾಷ್ಟ್ರ ಪರ ಋತುರಾಜ್‌ ಗಾಯಕ್ವಾಡ್‌ ಮೊದಲ ಶತಕವನ್ನು ಬಾರಿಸಿದ್ದರು. ನಂತರ ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನವನ್ನು ತೋರುವ ಮೂಲಕ ಅವರು 2021ರಲ್ಲಿ ಭಾರತ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಆಡಿದ 85 ಪಂದ್ಯಗಳಿಂದ 17 ಶತಕಗಳು ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆ ಮೂಲಕ 4509 ರನ್‌ಗಳನ್ನು ಗಳಿಸಿದ್ದಾರೆ.