ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಗೆ (IND vs NZ) ಎರಡು ಪ್ರತ್ಯೇಕ ಭಾರತ ತಂಡಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಪ್ರಕಟಿಸಿದೆ. ಆರಂಭಿಕ ಮೂರು ಪಂದ್ಯಗಳಿಗೆ ಶುಭಮನ್ ಗಿಲ್ ನಾಯಕತ್ವದಲ್ಲಿ 16 ಸದಸ್ಯರ ಭಾರತ ತಂಡವನ್ನು (India's ODI Squad) ಪ್ರಕಟಿಸಲಾಗಿದ್ದರೆ, ಕೊನೆಯ ನಾಲ್ಕು ಮತ್ತು ಐದನೇ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ನಾಯಕತ್ವದ 16 ಮಂದಿ ಆಟಗಾರರ ಭಾರತ ತಂಡವನ್ನು ರಚಿಸಲಾಗಿದೆ. ಈ ಎರಡೂ ತಂಡಗಳಲ್ಲಿ ಟಿ20ಐ ತಂಡದಲ್ಲಿನ ಕೆಲ ಆಟಗಾರರನ್ನು ಆಡಿಸಲಾಗುತ್ತಿದೆ.
ಭಾರತದ ಏರಡೂ ಏಕದಿನ ತಂಡಗಳಲ್ಲಿ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ. ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ವಿಫಲರಾಗಿದ್ದರು. ಹಾಗಾಗಿ ಕಿವೀಸ್ ಏಕದಿನ ಸರಣಿಯಲ್ಲಿ ಅವರ ಸ್ಥಾನಕ್ಕೆ ಅಕ್ಷರ್ ಪಟೇಲ್ಗೆ ಸ್ಥಾನವನ್ನು ಕಲ್ಪಿಸಲಾಗಿದೆ.
IND vs NZ: ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ, ಮೊಹಮ್ಮದ್ ಶಮಿಗೆ ಸ್ಥಾನವಿಲ್ಲ!
ಎರಡು ಟೆಸ್ಟ್ ಹಾಗೂ ಎಲ್ಲಾ ಐದು ಏಕದಿನ ಪಂದ್ಯಗಳ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಸ್ಥಾನವನ್ನು ಪಡೆದಿದ್ದಾರೆ. ಏಕದಿನ ತಂಡದಲ್ಲಿ ಇದೇ ಮೊದಲ ಬಾರಿ ಕುಮಾರ್ ಕುಶಾಗ್ರಗೆ ಸ್ಥಾನವನ್ನು ನೀಡಲಾಗಿದೆ. ಆರಂಭಿಕ ಮೂರು ಪಂದ್ಯಗಳ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ ಹಾಗೂ ಕೊನೆಯ ಎರಡು ಪಂದ್ಯಗಳಿಂದ ಗಿಲ್ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಗಿಲ್ ಟೆಸ್ಟ್ ಸರಣಿಗೆ ತಯಾರಿ ನಡೆಸಲಿದ್ದಾರೆ.
ಆರಂಭಿಕ 3 ಏಕದಿನ ಪಂದ್ಯಗಳಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಾಂಬೋಜ್, ಗುರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ*, ಕುಲ್ದೀಪ್ ಯಾದವ್
ನಾಲ್ಕು ಮತ್ತು ಐದನೇ ಪಂದ್ಯಗಳಿಗೆ ಭಾರತ: ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್, ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಆಕಿಬ್ ನಬಿ, ಗುರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಯಶ್ ಠಾಕೂರ್, ಕುಲ್ದೀಪ್ ಯಾದವ್