ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಾಖಲೆಯ ಮೊತ್ತವನ್ನು ಚೇಸ್‌ ಮಾಡಿ ಹ್ಯಾಗ್ಲಿ ಓವಲ್‌ನಲ್ಲಿ ಇತಿಹಾಸ ಬರೆದ ಭಾರತ ತಂಡ!

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20ಐ ಪಂದ್ಯದಲ್ಲಿ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಆತಿಥೇಯ ನ್ಯೂಜಿಲೆಂಡ್ ನೀಡಿದ 226 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ, ಟಿ20ಐ ಕ್ರಿಕೆಟ್‌ನಲ್ಲಿ ತನ್ನ ಅತ್ಯಂತ ದೊಡ್ಡ ಯಶಸ್ವಿ ರನ್ ಚೇಸ್ ದಾಖಲಿಸಿದೆ. ಎರಡು ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿದ ಭಾರತ, ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

IND vs NZ: ಹ್ಯಾಗ್ಲಿ ಓವಲ್‌ನಲ್ಲಿ ಇತಿಹಾಸ ಬರೆದ ಭಾರತ ತಂಡ!

226 ರನ್‌ ಚೇಸ್‌ ಮಾಡಿ ಇತಿಹಾಸ ನಿರ್ಮಿಸಿದ ಭಾರತ. -

Profile
Ramesh Kote Oct 22, 2026 5:29 PM

ಕ್ರೈಸ್ಟ್‌ಚರ್ಚ್‌: ನ್ಯೂಜಿಲೆಂಡ್‌ ವಿರುದ್ಧದ ಮೊದಲನೇ ಟಿ20ಐ ಪಂದ್ಯದಲ್ಲಿ (IND vs NZ) 226 ರನ್‌ಗಳನ್ನು ಯಶಸ್ವಿಯಾಗಿ ಚೇಸ್‌ ಮಾಡಿದ ಭಾರತ ತಂಡ (Indian Cricket team) ಇತಿಹಾಸವನ್ನು ನಿರ್ಮಿಸಿದೆ. ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೊತ್ತವನ್ನು ಚೇಸ್‌ ಮಾಡಿದ ದಾಖಲೆಯನ್ನು ಭಾರತ ಬರೆದಿದೆ. ಸಂಜು ಸ್ಯಾಮ್ಸನ್‌ (Sanju samson) ಹಾಗೂ ನಮನ್‌ ಧೀರ್‌ ಅವರ ಬ್ಯಾಟಿಂಗ್‌ ಬಲದಿಂದ ಟೀಮ್‌ ಇಂಡಿಯಾ, ಇನ್ನೂ 2ಎಸೆತಗಳು ಬಾಕಿ ಇರುವಾಗಲೇ ಗೆದ್ದು ಬೀಗಿತು. ಈ ಪಂದ್ಯದ ಗೆಲುವಿನ ಮೂಲಕ ಭಾರತ ಟಿ20ಐ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿದೆ.

ಗುರುವಾರ ಇಲ್ಲಿನ ಹ್ಯಾಗ್ಲಿ ಓವಲ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 225 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ತಂಡದ ಪರ ಗ್ಲೆನ್ ಫಿಲಿಪ್ಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 40 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕ ಭಾರತೀಯ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಫಿಲಿಪ್ಸ್ ಮತ್ತು ಬೆವನ್ ಜೇಕಬ್ಸ್ ನಾಲ್ಕನೇ ವಿಕೆಟ್‌ಗೆ 73 ರನ್‌ಗಳ ಮಹತ್ವದ ಜೊತೆಯಾಟವಾಡಿದರು. ಇದರಿಂದ ನ್ಯೂಜಿಲೆಂಡ್ ತಂಡ ಬಲಿಷ್ಠ ಮೊತ್ತ ತಲುಪಲು ಸಾಧ್ಯವಾಯಿತು. ಭಾರತದ ಪರ ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

IND vs NZ: ಸಂಜು-ನಮನ್‌ ಸ್ಪೋಟಕ ಬ್ಯಾಟಿಂಗ್‌, ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ!

ಸಂಜು ಸ್ಯಾಮ್ಸನ್–ಅಭಿಷೇಕ್ ಶರ್ಮಾ ಅಬ್ಬರ

226 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಭರ್ಜರಿ ಆರಂಭ ಒದಗಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ ಕೇವಲ ಆರು ಓವರ್‌ಗಳ ಒಳಗೆ 93 ರನ್‌ಗಳನ್ನು ಕಲೆಹಾಕಿ ಗೆಲುವಿನ ಭರವಸೆ ಮೂಡಿಸಿದರು.

ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳಲ್ಲಿ 67 ರನ್ ಸಿಡಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಮತ್ತೊಂದೆಡೆ, ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 29 ರನ್ ಗಳಿಸಿ ವೇಗವಾಗಿ ರನ್‌ಗಳನ್ನು ಕಲೆಹಾಕಿದರು. ಆದರೆ ಪವರ್‌ಪ್ಲೇ ಅಂತಿಮ ಹಂತದಲ್ಲಿ ಮೈಕೆಲ್ ಬ್ರೇಸ್‌ವೆಲ್ ಬೌಲಿಂಗ್‌ನಲ್ಲಿ ಅಭಿಷೇಕ್ ಔಟಾದರು. ಆ ಬಳಿಕ ಭಾರತ ಕೆಲವೇ ಓವರ್‌ಗಳ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಇಶಾನ್ ಕಿಶನ್ ಅವರ ವಿಕೆಟ್‌ಗಳು ಪತನಗೊಂಡಾಗ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತೆ ಹಿಡಿತ ಸಾಧಿಸುವ ಲಕ್ಷಣಗಳು ಕಂಡುಬಂದವು.



ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಆಟ

ಮಧ್ಯಮ ಕ್ರಮಾಂಕದಲ್ಲಿ ಭಾರತಕ್ಕೆ ಆಸರೆಯಾದ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 28 ಎಸೆತಗಳಲ್ಲಿ 42 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ, ಶ್ರೇಯಸ್ ಒತ್ತಡಕ್ಕೆ ಮಣಿಯದೆ ರನ್ ಗಳಿಸುವ ಮೂಲಕ ಪಂದ್ಯವನ್ನು ಭಾರತದ ಪರ ತಿರುಗಿಸಲು ನೆರವಾದರು. ಕೊನೆಯ ಹಂತದಲ್ಲಿ ನಮನ ಧೀರ್ ನಿರ್ಣಾಯಕ ಪಾತ್ರ ವಹಿಸಿದರು. ಅಂತಿಮ ಓವರ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಭಾರತದ ಐತಿಹಾಸಿಕ ಗೆಲುವನ್ನು ಖಚಿತಪಡಿಸಿದರು.

ಭಾರತ 19.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿ ನಾಲ್ಕು ವಿಕೆಟ್‌ಗಳ ಗೆಲುವು ದಾಖಲಿಸಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿತು.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಗರಿಷ್ಠ ಯಶಸ್ವಿ ರನ್ ಚೇಸ್‌ಗಳು

ಎದುರಾಳಿ ತಂಡ ಬೆನ್ನಟ್ಟಿದ ಗುರಿ ಸ್ಥಳ ವರ್ಷ ಗೆಲುವಿನ ಅಂತರ
ನ್ಯೂಜಿಲೆಂಡ್ 226 ಕ್ರೈಸ್ಟ್‌ಚರ್ಚ್ 2026 4 ವಿಕೆಟ್‌, 2 ಎಸೆತ ಬಾಕಿ
ಆಸ್ಟ್ರೇಲಿಯಾ 209 ವಿಶಾಖಪಟ್ಟಣ 2023 2 ವಿಕೆಟ್‌, 1 ಎಸೆತ ಬಾಕಿ
ನ್ಯೂಜಿಲೆಂಡ್ 209 ರಾಯ್‌ಪುರ 2026 7 ವಿಕೆಟ್‌, 30 ಎಸೆತ ಬಾಕಿ
ವೆಸ್ಟ್ ಇಂಡೀಸ್ 208 ಹೈದರಾಬಾದ್ 2019 6 ವಿಕೆಟ್‌, 8 ಎಸೆತ ಬಾಕಿ
ಶ್ರೀಲಂಕಾ 207 ಮೊಹಾಲಿ 2009 6 ವಿಕೆಟ್‌, 5 ಎಸೆತ ಬಾಕಿ