ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs NZ: 300ನೇ ಟಿ20ಐ ಪಂದ್ಯವನ್ನು ಆಡಿ ಪಾಕಿಸ್ತಾನ ಒಳಗೊಂಡ ಎಲೈಟ್‌ ಲಿಸ್ಟ್‌ ಸೇರಿದ ಭಾರತ!

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಕ್ಟೋಬರ್ 24ರಂದು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ಟಿ20ಐ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಭಾರತ ತಂಡದ ಪಾಲಿಗೆ 300ನೇ ಪಂದ್ಯವಾಗಿದೆ. ಆ ಮೂಲಕ ಪಾಕಿಸ್ತಾನ ಒಳಗೊಂಎ ಎಲೈಟ್‌ ಲಿಸ್ಟ್‌ಗೆ ಭಾರತ ಸೇರ್ಪಡೆಯಾಗಿದೆ.

ಪಾಕಿಸ್ತಾನ ಒಳಗೊಂಡ ಎಲೈಟ್‌ ಲಿಸ್ಟ್‌ ಸೇರಿದ ಭಾರತ!

300ನೇ ಟಿ20ಐ ಪಂದ್ಯವನ್ನು ಆಡಿದ ಭಾರತ ತಂಡ. -

Profile
Ramesh Kote Oct 24, 2026 6:40 PM

ಕ್ರೈಸ್ಟ್‌ ಚರ್ಚ್‌: ಭಾರತ ಮತ್ತು ನ್ಯೂಜಿಲೆಂಡ್ (IND vs NZ) ತಂಡಗಳು ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಶನಿವಾರ (ಅಕ್ಟೋಬರ್ 24) ಮುಖಾಮುಖಿಯಾಗಿದ್ದವು. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್‌ ನಡೆದ ಬೆನ್ನಲ್ಲೆ ಭಾರತ ಕಿಕೆಟ್‌ ತಂಡ ಟಿ20ಐ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದೆ.

ಈ ಪಂದ್ಯ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಮಹತ್ವದ್ದಾಗಿದೆ. ಏಕೆಂದರೆ, ಇದು ಭಾರತ ತಂಡ ಆಡಿದ 300ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಆ ಮೂಲಕ ಪಾಕಿಸ್ತಾನದ ನಂತರ 300 ಟಿ20 ಪಂದ್ಯಗಳನ್ನು ಆಡಿದ ವಿಶ್ವದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

IND vs NZ: ತಿಲಕ್‌-ನಿತೀಶ್‌ ಝಲಕ್‌, ಎರಡನೇ ಪಂದ್ಯದಲ್ಲಿಯೂ ಭಾರತಕ್ಕೆ 4 ವಿಕೆಟ್‌ ರೋಚಕ ಜಯ!

ಅತಿ ಹೆಚ್ಚು ಟಿ20ಐ ಪಂದ್ಯಗಳನ್ನಾಡಿದ ತಂಡಗಳು

  1. ಪಾಕಿಸ್ತಾನ – 304 ಪಂದ್ಯಗಳು
  2. ಭಾರತ – 300 ಪಂದ್ಯಗಳು
  3. ನ್ಯೂಜಿಲೆಂಡ್ – 269 ಪಂದ್ಯಗಳು
  4. ವೆಸ್ಟ್ ಇಂಡೀಸ್ – 260 ಪಂದ್ಯಗಳು
  5. ಶ್ರೀಲಂಕಾ – 243 ಪಂದ್ಯಗಳು

ಪಾಕಿಸ್ತಾನ ತಂಡ ಇದುವರೆಗೆ 304 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 4 ವಿಕೆಟ್‌ಗಳಿಂದ ಮಣಿಸಿತು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂಪರ್ ಓವರ್‌ನ ಗೆಲುವುಗಳನ್ನು ಹೊರತುಪಡಿಸಿ 201 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ದಾಖಲೆಯನ್ನು ಭಾರತ ಬರೆದಿದೆ.



ಈ ಪಂದ್ಯದ ಆರಂಭಕ್ಕೂ ಮುನ್ನ ಭಾರತ ಆಡಿದ 299 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 199 ಗೆಲುವುಗಳನ್ನು ದಾಖಲಿಸಿತ್ತು. ಹೀಗಾಗಿ, 200ನೇ ಗೆಲುವು ಸಾಧಿಸಲು ಭಾರತಕ್ಕೆ ಈ ಪಂದ್ಯದಲ್ಲಿ ಮತ್ತೊಂದು ಅವಕಾಶ ಲಭಿಸಿದೆ. 2026ರ ಕ್ಯಾಲೆಂಡರ್ ವರ್ಷದಲ್ಲಿ ಭಾರತ ತಂಡ ಈಗಾಗಲೇ 36 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯವು 37ನೇ ಪಂದ್ಯವಾಗಿದೆ.

IND vs NZ: ಟಿ20ಐ ಕ್ರಿಕೆಟ್‌ನ ಪವರ್‌ಪ್ಲೇನಲ್ಲಿ 100 ಸಿಕ್ಸರ್‌ ಬಾರಿಸಿ ರೋಹಿತ್‌ ಶರ್ಮಾ ದಾಖಲೆ ಮುರಿದ ಅಭಿಷೇಕ್‌ ಶರ್ಮಾ!

2026ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪರಸ್ಪರ ಏಳು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ವರ್ಷ ಭಾರತ ಒಟ್ಟು 24 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಎರಡನೇ ಪಂದ್ಯ ಏನಾಯಿತು?

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ನ್ಯೂಜಿಲೆಂಡ್‌ ತಂಡ, ಗ್ಲೆನ್‌ ಫಿಲಿಪ್ಸ್‌ ಹಾಗೂ ಬೆವನ್‌ ಜೇಕಬ್ಸ್‌ ಅವರ ಅರ್ಧಶತಕಗಳ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ 180 ರನ್‌ಗಳನ್ನು ಕಲೆ ಹಾಕಿತು. ಬಳಿಕ ಗುರಿಯನ್ನು ಹಿಂಬಾಲಿಸಿದ ಟೀಮ್‌ ಇಂಡಿಯಾ, ತಿಲಕ್‌ ವರ್ಮಾ ಅರ್ಧಶತಕದ ಬಲದಿಂದ 19.5 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 181 ರನ್‌ ಗಳಿಸಿ ನಾಲ್ಕು ವಕೆಟ್‌ ಗೆಲುವು ಪಡೆಯಿತು. 26 ಎಸೆತಗಳಲ್ಲಿ ಅಜೇಯ 51 ರನ್‌ ಬಾರಿಸಿದ ತಿಲಕ್‌ ವರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.