ಕ್ರೈಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ (IND vs NZ) ತಂಡಗಳು ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಶನಿವಾರ (ಅಕ್ಟೋಬರ್ 24) ಮುಖಾಮುಖಿಯಾಗಿದ್ದವು. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ನಡೆದ ಬೆನ್ನಲ್ಲೆ ಭಾರತ ಕಿಕೆಟ್ ತಂಡ ಟಿ20ಐ ಕ್ರಿಕೆಟ್ನಲ್ಲಿ ನೂತನ ಮೈಲುಗಲ್ಲು ತಲುಪಿದೆ.
ಈ ಪಂದ್ಯ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಮಹತ್ವದ್ದಾಗಿದೆ. ಏಕೆಂದರೆ, ಇದು ಭಾರತ ತಂಡ ಆಡಿದ 300ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಆ ಮೂಲಕ ಪಾಕಿಸ್ತಾನದ ನಂತರ 300 ಟಿ20 ಪಂದ್ಯಗಳನ್ನು ಆಡಿದ ವಿಶ್ವದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
IND vs NZ: ತಿಲಕ್-ನಿತೀಶ್ ಝಲಕ್, ಎರಡನೇ ಪಂದ್ಯದಲ್ಲಿಯೂ ಭಾರತಕ್ಕೆ 4 ವಿಕೆಟ್ ರೋಚಕ ಜಯ!
ಅತಿ ಹೆಚ್ಚು ಟಿ20ಐ ಪಂದ್ಯಗಳನ್ನಾಡಿದ ತಂಡಗಳು
- ಪಾಕಿಸ್ತಾನ – 304 ಪಂದ್ಯಗಳು
- ಭಾರತ – 300 ಪಂದ್ಯಗಳು
- ನ್ಯೂಜಿಲೆಂಡ್ – 269 ಪಂದ್ಯಗಳು
- ವೆಸ್ಟ್ ಇಂಡೀಸ್ – 260 ಪಂದ್ಯಗಳು
- ಶ್ರೀಲಂಕಾ – 243 ಪಂದ್ಯಗಳು
ಪಾಕಿಸ್ತಾನ ತಂಡ ಇದುವರೆಗೆ 304 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 4 ವಿಕೆಟ್ಗಳಿಂದ ಮಣಿಸಿತು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸೂಪರ್ ಓವರ್ನ ಗೆಲುವುಗಳನ್ನು ಹೊರತುಪಡಿಸಿ 201 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ದಾಖಲೆಯನ್ನು ಭಾರತ ಬರೆದಿದೆ.
ಈ ಪಂದ್ಯದ ಆರಂಭಕ್ಕೂ ಮುನ್ನ ಭಾರತ ಆಡಿದ 299 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 199 ಗೆಲುವುಗಳನ್ನು ದಾಖಲಿಸಿತ್ತು. ಹೀಗಾಗಿ, 200ನೇ ಗೆಲುವು ಸಾಧಿಸಲು ಭಾರತಕ್ಕೆ ಈ ಪಂದ್ಯದಲ್ಲಿ ಮತ್ತೊಂದು ಅವಕಾಶ ಲಭಿಸಿದೆ. 2026ರ ಕ್ಯಾಲೆಂಡರ್ ವರ್ಷದಲ್ಲಿ ಭಾರತ ತಂಡ ಈಗಾಗಲೇ 36 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯವು 37ನೇ ಪಂದ್ಯವಾಗಿದೆ.
2026ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪರಸ್ಪರ ಏಳು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ವರ್ಷ ಭಾರತ ಒಟ್ಟು 24 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಎರಡನೇ ಪಂದ್ಯ ಏನಾಯಿತು?
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ ತಂಡ, ಗ್ಲೆನ್ ಫಿಲಿಪ್ಸ್ ಹಾಗೂ ಬೆವನ್ ಜೇಕಬ್ಸ್ ಅವರ ಅರ್ಧಶತಕಗಳ ಬಲದಿಂದ ತನ್ನ ಪಾಲಿನ 20 ಓವರ್ಗಳಿಗೆ 6 ವಿಕೆಟ್ಗಳ ನಷ್ಟಕ್ಕೆ 180 ರನ್ಗಳನ್ನು ಕಲೆ ಹಾಕಿತು. ಬಳಿಕ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ, ತಿಲಕ್ ವರ್ಮಾ ಅರ್ಧಶತಕದ ಬಲದಿಂದ 19.5 ಓವರ್ಗಳಿಗೆ 6 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ನಾಲ್ಕು ವಕೆಟ್ ಗೆಲುವು ಪಡೆಯಿತು. 26 ಎಸೆತಗಳಲ್ಲಿ ಅಜೇಯ 51 ರನ್ ಬಾರಿಸಿದ ತಿಲಕ್ ವರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.