ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Women's T20 World Cup 2026: ಭಾರತ ಮಹಿಳಾ ತಂಡವನ್ನು ಪ್ರಕಟಿಸಿದ ಬಿಸಿಸಿಐ!

India's Squad for Women's T20 WC: ಮುಂಬರುವ 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

2026ರ ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ!

2026ರ ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ. -

Profile
Ramesh Kote May 2, 2026 6:02 PM

ಮುಂಬೈ: ಶನಿವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ (Women's T20 World Cup 2026) 15 ಸದಸ್ಯರ ಭಾರತ ತಂಡವನ್ನು (India's Sqaud for Women's T20 World Cup) ಪ್ರಕಟಿಸಿದೆ. ನಿರೀಕ್ಷೆಯಂತೆ ಹರ್ಮನ್‌ಪ್ರೀತ್ ಕೌರ್ ತಂಡದ ನಾಯಕಿಯಾಗಿ ನೇಮಕಗೊಂಡಿದ್ದು, ಸ್ಮೃತಿ ಮಂಧಾನಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜೆಮಿಮಾ ರೋಡ್ರಿಗಸ್‌, ಶಫಾಲಿ ವರ್ಮಾ ಮತ್ತು ರಿಚಾ ಘೋಷ್ ಸೇರಿದಂತೆ ಅನೇಕ ಸ್ಟಾರ್‌ ಆಟಗಾರ್ತಿಯರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಗಾಯದ ಕಾರಣ ಅಮನ್ಜೋತ್ ಕೌರ್ ತಂಡದಿಂದ ಹೊರಗುಳಿದ ಪ್ರಮುಖ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದಾರೆ. ಬ್ಯಾಟರ್‌ಗಳಾದ ಪ್ರತಿಕಾ ರಾವಲ್ ಮತ್ತು ಹಾರ್ಲೀನ್ ಡಿಯೋಲ್ ಹಾಗೂ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಸ್ನೇಹ್ ರಾಣಾ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

DC vs RR: ವೈಭವ್‌ ಸೂರ್ಯವಂಶಿಯನ್ನು ಎದುರಿಸುವಾಗ ಭಯಪಟ್ಟಿದ್ದೆ ಎಂದ ಕೈಲ್‌ ಜೇಮಿಸನ್‌!

ಭಾರತ ಮಹಿಳಾ ಟಿ20 ವಿಶ್ವಕಪ್ 2026 ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ಉಪ ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ ಕೀಪರ್‌), ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್‌), ನಂದಾನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌, ಕ್ರಾಂತಿ ಗೌಡ್‌, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್.

ತಂಡದ ಘೋಷಣೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ ನಾಯಕಿ ಹರ್ಮನ್‌ಪ್ರೀತ್ ಕೌರ್, ಗಾಯಗೊಂಡ ಅಮನ್ಜೋತ್ ಕೌರ್ ಅವರ ಬದಲಿಗೆ ಮಧ್ಯಕ್ರಮ ಬ್ಯಾಟರ್ ಭಾರರಿ ಫುಲ್ಮಾಲಿಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಫುಲ್ಮಾಲಿ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರಲ್ಲಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು.



ವೇಗದ ಬೌಲರ್ ನಂದಾನಿ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಡಬ್ಲುಪಿಎಲ್‌ 2026ರಲ್ಲಿ 10 ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಗಳ ಪಟ್ಟಿಯಲ್ಲಿ ಜಂಟಿಯಾಗಿ ಮೊದಲ ಸ್ಥಾನವನ್ನು ಅಲಂಕರಿಸಿದ್ದರು.

ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಸ್ಪಿನ್ ದಾಳಿಯನ್ನು ಶ್ರೀ ಚರಣಿ, ಶ್ರೇಯಾಂಕಾ ಪಾಟೀಲ್ ಮತ್ತು ರಾಧಾ ಯಾದವ್ ಮುನ್ನಡೆಸಲಿದ್ದಾರೆ. ಈ ಮೂವರು ಸ್ನೇಹ್ ರಾಣಾ ಮತ್ತು 20 ವರ್ಷದ ವೈಷ್ಣವಿ ಶರ್ಮಾ ಅವರನ್ನು ಮೀರಿಸಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರ್ಮನ್‌ಪ್ರೀತ್, ರಾಧಾ ಯಾದವ್ ಅವರನ್ನು ಆಲ್‌ರೌಂಡರ್ ಆಯ್ಕೆಯಾಗಿ ಗುರುತಿಸಿದ್ದು, ಅವರು ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದನ್ನು ಹೈಲೈಟ್ ಮಾಡಿದ್ದಾರೆ.

RCB vs GT: ರಜತ್‌ ಪಾಟಿದಾರ್‌ರ ವಿವಾದಾತ್ಮಕ ಕ್ಯಾಚ್‌ ಬಗ್ಗೆ ಪ್ರತಿಕ್ರಿಯಿಸಿದ ಜೇಸನ್‌ ಹೋಲ್ಡರ್!

ಜೂನ್‌ 14ರಂದು ಟೂರ್ನಿ ಆರಂಭ

ಅನುಭವಿ ವೇಗಿ ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್ ಮತ್ತು ನಂದನಿ ಶರ್ಮಾ ಅವರು ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಯಸ್ತಿಕಾ ಭಾಟಿಯಾ ಅವರನ್ನು ಬ್ಯಾಕಪ್ ವಿಕೆಟ್‌ಕೀಪರ್ ಆಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. 2026ರ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿದ್ದು, ಜೂನ್ 14ರಂದು ಆರಂಭವಾಗಲಿದೆ.