IND vs ZIM: ಜಿಂಬಾಬ್ವೆ ಟಿ20ಐ ಸರಣಿಗೆ ಭಾರತ ತಂಡ ಪ್ರಕಟ, ಸಂಜು ಸ್ಯಾಮ್ಸನ್ ಔಟ್!
India's T20 Squad for Zimbabwe T20I Series: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ, ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟು ಪ್ರಭ್‌ಸಿಮ್ರಾನ್ ಸಿಂಗ್ ಅವರನ್ನು ಎರಡನೇ ವಿಕೆಟ್ ಸ್ಥಾನಕ್ಕೆ ಆರಿಸಲಾಗಿದೆ. ಇದರ ಜೊತೆಗೆ ಮೂವರು ಹೊಸ ಆಟಗಾರರಿಗೆ ಈ ಸರಣಿಯಲ್ಲಿ ಚೊಚ್ಚಲ ಅವಕಾಶವನ್ನು ನೀಡಲಾಗಿದೆ.
ಜಿಂಬಾಬ್ವೆ ಟಿ20ಐ ಸರಣಿಗೆ ಭಾರತ ತಂಡ ಪ್ರಕಟ. -
ನವದೆಹಲಿ: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಗೆ (IND vs ZIM) 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಇಂಗ್ಲೆಂಡ್ ಟಿ20ಐ ಸರಣಿಯಲ್ಲಿ ಆಡುತ್ತಿರುವ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಕೈ ಬಿಡುವ ಅಚ್ಚರಿ ಮೂಡಿಸಲಾಗಿದೆ. ಅಂದ ಹಾಗೆ ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡದಲ್ಲಿ ಒಟ್ಟು ಮೂವರು ಹೊಸಬರಿಗೆ ಚೊಚ್ಚಲ ಅವಕಾಶವನ್ನು ನೀಡಲಾಗಿದೆ. ಟಿ20ಐ ಸರಣಿಯ ಮೂರೂ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ.
ಭಾರತ ತಂಡದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇಂಗ್ಲೆಂಡ್ ವಿರುದ್ಧ ಎರಡನೇ ಪಂದ್ಯದಲ್ಲಿ ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆಗೆ ಅವಕಾಶ ನೀಡಲಾಗಿತ್ತು. ಚೊಚ್ಚಲ ಪಂದ್ಯದಲ್ಲಿ ಅವಕಾಶ ಪಡೆದ ವೈಭವ್ ತಮ್ಮ ಸ್ಥಾನವನ್ನು ಜಿಂಬಾಬ್ವೆ ಸರಣಿಗೂ ಉಳಿಸಿಕೊಂಡಿದ್ದಾರೆ.
IND vs ENG: ತಮಾಷೆ ಮಾಡುತ್ತಿದ್ದೀರಾ? ಸಂಜು ಸ್ಯಾಮ್ಸನ್‌ಗೆ ಕೊಕ್ ನೀಡಿದ್ದಂತೆ ಸಂಜಯ್ ಮಾಂಜ್ರೇಕರ್ ಕಿಡಿ!
ಇದೇ ವೇಳೆ, ಮಯಾಂಕ್ ಯಾದವ್ ಹಾಗೂ ರಿಂಕು ಸಿಂಗ್ ಅವರನ್ನು ಮತ್ತೆ ಭಾರತ ತಂಡಕ್ಕೆ ಮರಳಿ ಕರೆಸಿಕೊಳ್ಳಲಾಗಿದೆ. ಇದರ ಜೊತೆಗೆ ಪ್ರಭ್‌ಸಿಮ್ರನ್ ಸಿಂಗ್, ಅಶೋಕ್ ಶರ್ಮಾ ಹಾಗೂ ಯಶ್ ಠಾಕೂರ್ ಅವರಿಗೆ ಮೊದಲ ಬಾರಿ ಭಾರತ ತಂಡದಲ್ಲಿ ಚೊಚ್ಚಲ ಅವಕಾಶವನ್ನು ನೀಡಲಾಗಿದೆ. ಮತ್ತೊಂದೆಡೆ, ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಹರ್ಷ ದುಬೆ ಅವರಿಗೆ ಮೊದಲ ಬಾರಿ ಟಿ20 ಅಂತಾರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.
🚨 News 🚨#TeamIndia squad announced for the 3️⃣-match T20I series against Zimbabwe.
— BCCI (@BCCI) July 6, 2026
More Details ▶️ https://t.co/sC19D5eW8y#ZIMvIND pic.twitter.com/ctbM5gFMtY
ಇಂಗ್ಲೆಂಡ್ ಪ್ರವಾಸದಲ್ಲಿನ ಭಾರತದ ಸೀಮಿತ ಓವರ್‌ಗಳ ಸರಣಿ ಜುಲೈ 19ರಂದು ಮುಕ್ತಾಯಗೊಳ್ಳಲಿದೆ. ಅದರ ಕೇವಲ ನಾಲ್ಕು ದಿನಗಳ ಬಳಿಕ ಭಾರತ, ಜಿಂಬಾಬ್ವೆ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯ ಎಲ್ಲಾ ಮೂರು ರಾಜಧಾನಿ ಹರಾರೆಯಲ್ಲಿರುವ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿಯೇ ನಡೆಯಲಿವೆ. ಕೇವಲ ನಾಲ್ಕು ದಿನಗಳ ಅವಧಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನು ಆಡಲಿದ್ದು, ಇದರೊಂದಿಗೆ ಭಾರತದ ಸೀಮಿತ ಓವರ್‌ಗಳ ಕ್ರಿಕೆಟ್ ಅಭಿಯಾನ ಅಂತ್ಯಗೊಳ್ಳಲಿದೆ.
ಇದರ ನಂತರ ಭಾರತ ತನ್ನ ಮುಂದಿನ ಸವಾಲಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ.
IND vs ENG: ಸಂಜು ಸ್ಯಾಮ್ಸನ್‌ರನ್ನು ಕೈ ಬಿಡಲು ಕಾರಣ ತಿಳಿಸಿದ ಆರ್ ಅಶ್ವಿನ್!
ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್ ಹಾಗೂ ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್‌ಕೀಪರ್).