ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೇವಲ 28 ಎಸೆತಗಳಲ್ಲಿ ಲಿಸ್ಟ್ ಎ ಶತಕ; ವಿಶ್ವ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

ಭಾರತ ತಂಡದಲ್ಲಿ ನಿಯಮಿತವಾಗಿ ಅವಕಾಶ ಪಡೆಯುವಲ್ಲಿ ವಿಫಲವಾಗಿದ್ದ ಯುವ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ, ಯುಎಇ ವಿರುದ್ಧ ಲಿಸ್ಟ್‌ ಎ ಪಂದ್ಯದಲ್ಲಿ ವೇಗದ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾದ ಜೇಕ್‌ ಮಗರ್ಕ್‌ ಅವರ ದಾಖಲೆಯನ್ನು ಮುರಿದಿದ್ದಾರೆ.

28 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ವೈಭವ್‌!

28 ಎಸೆತಗಳಲ್ಲಿ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ. -

Profile
Ramesh Kote Nov 24, 2026 4:57 PM

ದೋಹಾ: ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ಆಟಗಾರ ವೈಭವ್‌ ಸೂರ್ಯವಂಶಿ (Vaibhav Sooryavanshi) ಅವರು ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ್ದಾರೆ. ಅವರು ಯುಎಇ ವಿರುದ್ಧದ ರೈಸಿಂಗ್‌ ಸ್ಟಾರ್ಸ್‌ ಏಷ್ಯಾ ಕಪ್‌ ಟೂರ್ನಿಯ ಪಂದ್ಯದಲ್ಲಿ (ACC Men's Asia Cup Rising Stars 2026) ಕೇವಲ 28 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಅತ್ಯಂತ ಶತಕ ಬಾರಿಸಿ, ಈ ಹಿಂದೆ 29 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದ ದಕ್ಷಿಣ ಆಫ್ರಿಕಾದ ಜೇಕಬ್‌ ಬೆಥೆಲ್‌ ಅವರನ್ನು 15 ರ ವಯಸ್ಸಿನ ವೈಭವ್‌ ಸೂರ್ಯವಂಶಿ ಹಿಂದಿಕ್ಕಿದ್ದಾರೆ.

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ. ಯುಎಇ ವಿರುದ್ಧದ ಎಸಿಸಿ ಮೆನ್ಸ್ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯ ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಬಾರಿಸಿದ ಆಟಗಾರ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ಪಂಜಾಬ್‌ ಕಿಂಗ್ಸ್‌ಗೆ ಪರಸ್ ಮಾಂಬ್ರೆ ಬೌಲಿಂಗ್‌ ಕೋಚ್‌

ಜೇಕ್ ಮೆಗರ್ಕ್ ದಾಖಲೆ ಮುರಿದ ವೈಭವ್‌

ಇದಕ್ಕೂ ಮೊದಲು ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಗರ್ಕ್ 29 ಎಸೆತಗಳಲ್ಲಿ ಶತಕ ಬಾರಿಸಿದ್ದು ಲಿಸ್ಟ್ ಎ ಕ್ರಿಕೆಟ್‌ನ ವೇಗದ ಶತಕದ ದಾಖಲೆಯಾಗಿತ್ತು. ಇದೀಗ 28 ಎಸೆತಗಳಲ್ಲಿ ಶತಕ ಪೂರೈಸಿದ ಸೂರ್ಯವಂಶಿ ಆ ದಾಖಲೆಯನ್ನು ಮುರಿದಿದ್ದಾರೆ.

ದೋಹಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ ಎ ತಂಡ 251 ರನ್‌ಗಳ ಗುರಿ ಬೆನ್ನಟ್ಟುವಾಗ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಸೂರ್ಯವಂಶಿ ಮೊದಲ ಓವರ್‌ನಿಂದಲೇ ಯುಎಇ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ನಂತರದ 12 ಎಸೆತಗಳಲ್ಲಿ ಮತ್ತೊಂದು 50 ರನ್ ಗಳಿಸಿ ಶತಕದ ಗಡಿ ತಲುಪಿದರು.



ವೇಗದ ಲಿಸ್ಟ್ ಎ ಶತಕಗಳ ಪಟ್ಟಿ

1.ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ

2.ಜೇಕ್ ಫ್ರೇಸರ್-ಮೆಗರ್ಕ್: 29 ಎಸೆತಗಳಲ್ಲಿ

3.ಎಬಿ ಡಿವಿಲಿಯರ್ಸ್‌: 31 ಎಸೆತಗಳಲ್ಲಿ

4.ಸಕಿಬುಲ್ ಗನಿ: 32 ಎಸೆತಗಳಲ್ಲಿ

5.ಇಶಾನ್ ಕಿಶನ್: 33 ಎಸೆತಗಳಲ್ಲಿ

6.ಅನ್ಮೋಲ್ಪ್ರೀತ್ ಸಿಂಗ್: 35 ಎಸೆತಗಳಲ್ಲಿ

7.ಕೋರಿ ಆಂಡರ್ಸನ್: 36 ಎಸೆತಗಳಲ್ಲಿ

8.ಗ್ರಹಾಂ ರೋಸ್: 36 ಎಸೆತಗಳಲ್ಲಿ

ಆ ಮೂಲಕ ಸೂರ್ಯವಂಶಿ ತಮ್ಮ ಅದ್ಭುತ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕೇವಲ 15 ವರ್ಷದ ಈ ಪ್ರತಿಭೆ ಈಗಾಗಲೇ ಭಾರತೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದು, ಅವರ ಸ್ಫೋಟಕ ಆಟ ಅಭಿಮಾನಿಗಳ ಗಮನ ಸೆಳೆದಿದೆ.