ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೇರಬಲ್ಲ ಎರಡು ತಂಡಗಳನ್ನು ಆರಿಸಿದ ಮೈಕಲ್ ಕ್ಲಾರ್ಕ್!
Michael Clarke on IND vs AUS: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ ಎಂದು ಆಸೀಸ್ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ದೊಡ್ಡ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ಕೇವಲ ಒಂದು ರನ್‌ನಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೇರಬಲ್ಲ ತಂಡಗಳನ್ನು ಆರಿಸಿದ ಮೈಕಲ್ ಕ್ಲಾರ್ಕ್.

ದುಬೈ: ಪ್ರಸ್ತುತ ನಡೆಯುತ್ತಿರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅರ್ಹತೆ ಪಡೆಯಲಿದ್ದು, ರೋಹಿತ್ ಶರ್ಮಾ ಪಡೆ ಕೇವಲ ಒಂದು ರನ್‌ನಿಂದ ಆಸೀಸ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಭವಿಷ್ಯ ನುಡಿದಿದ್ದಾರೆ. ಅಂದ ಹಾಗೆ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿಯೂ ಭಾರತ ಹಾಗೂ ಆಸ್ಟ್ರೇಲಿಯಾ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತವನ್ನು ಮಣಿಸಿ ಆಸ್ಟ್ರೇಲಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.
ಪ್ರಸಕ್ತ ಟೂರ್ನಿಯ ಸೆಮಿಫೈನಲ್ಸ್‌ಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅರ್ಹತೆ ಪಡೆದಿವೆ ಹಾಗೂ ಅಂತಿಮ ನಾಲ್ಕರ ಹಂತದಲ್ಲಿಯೂ ಈ ಎರಡೂ ತಂಡಗಳು ಕಾದಾಟ ನಡೆಸುವ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧ ಗೆದ್ದು ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್‌ಗಳಿಂದ ಗೆಲುವು ಪಡೆದಿದೆ ಹಾಗೂ ಬಿ ಗುಂಪಿನ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.
IND vs NZ: ನ್ಯೂಜಿಲೆಂಡ್ ಪಂದ್ಯಕ್ಕೆ ಮೊಹಮ್ಮದ್ ಶಮಿ ಬದಲು ಯುವ ವೇಗಿಗೆ ಅವಕಾಶ!
ಭಾನುವಾರ ನಡೆಯುವ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಗೆದ್ದರೆ ಬಿ ಗುಂಪಿನ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನಕ್ಕೇರಲಿದೆ. ಆ ಮೂಲಕ ಬಿ ಗ್ರೂಪ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಎದುರು ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಕಾದಾಟ ನಡೆಸಲಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಟೀಮ್ ಇಂಡಿಯಾ ಸೋತರೆ, ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಇಳಿಯಲಿದೆ ಹಾಗೂ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಸೆಣಸಲಿದೆ.
ರೆವ್‌ಸ್ಪೋರ್ಟ್ಸ್ ಜೊತೆ ಮಾತನಾಡಿದ ಮೈಕಲ್ ಕ್ಲಾರ್ಕ್, "ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಲಗ್ಗೆ ಇಡಲಿದೆ ಹಾಗೂ ಫೈನಲ್‌ನಲ್ಲಿ ಭಾರತದ ವಿರುದ್ದ ಕಾದಾಟ ನಡೆಸಲಿದೆ ಎಂದು ನಾನು ಭಾವಿಸುತ್ತೇನೆ. ಆಸ್ಟ್ರೇಲಿಯಾ ತಂಡ ಫೈನಲ್ ಗೆಲ್ಲಬೇಕೆಂದು ನಾನು ಬಯಸುತ್ತೇನೆ, ಆದರೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಲಲಿದೆ. ಪ್ರಸ್ತುತ ಭಾರತ ವಿಶ್ವದ ಅತ್ಯುತ್ತಮ ಹಾಗೂ ನಂ.1 ತಂಡವಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್ ಆಡಲಿದ್ದು, ಟೀಮ್ ಇಂಡಿಯಾ ಕೇವಲ ಒಂದು ರನ್‌ನಿಂದ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ," ಎಂದು ಅವರು ಭವಿಷ್ಯ ನುಡಿದಿದ್ದಾರೆ.
IND vs NZ: ಭಾರತ-ಕಿವೀಸ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ ಹೇಗಿದೆ?
ರೋಹಿತ್ ಶರ್ಮಾ ಗರಿಷ್ಠ ಸ್ಕೋರರ್ ಆಗಲಿದ್ದಾರೆ: ಕ್ಲಾರ್ಕ್
ಆರಂಭಿಕ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಮೈಕಲ್ ಕ್ಲಾರ್ಕ್ ಬೆಂಬಲ ಸೂಚಿಸಿದ್ದಾರೆ. ಟೀಮ್ ಇಂಡಿಯಾ ನಾಯಕ ಫಾರ್ಮ್ ಮರಳಲಿದ್ದು, ಅವರು ಈ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಸ್ಕೋರರ್ ಆಗಲಿದ್ದಾರೆಂದು ಆಸೀಸ್ ಮಾಜಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಲಿದ್ದಾರೆ, ಇದರಲ್ಲಿ ಯಾವುದೇ ಅನುಮಾನವಿಲ್ಲ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನ ಇಂಗ್ಲೆಂಡ್ ವಿರುದ್ದ ಕಟಕ್‌ನಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದರು ಹಾಗೂ ಅವರು ಚೆಂಡನ್ನು ಚೆನ್ನಾಗಿ ಹೊಡೆಯುತ್ತಿದ್ದರು. ಇಂಥಾ ಕಂಡೀಷನ್ಸ್‌ನಲ್ಲಿ ಭಾರತ ತಂಡಕ್ಕೆ ಇವರ ಪಾತ್ರ ತುಂಬಾ ಮುಖ್ಯವಾಗಿದೆ. ಪವರ್‌ಪ್ಲೇನಲ್ಲಿ ಅವರು ತುಂಬಾ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಪ್ರದರ್ಶನವನ್ನು ತೋರುತ್ತಾರೆ. ಅವರು ಪಂದ್ಯದಲ್ಲಿ ಅಪಾಯವನ್ನು ತೆಗೆದುಕೊಳ್ಳುತ್ತಾರೆ ಹಾಗೂ ಅವರು ಅತ್ಯುತ್ತಮ ಆಟಗಾರ ಎಂದು ನಾನು ಭಾವಿಸುತ್ತೇನೆ. ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದರೆ, ನನಗೆ ಯಾವುದೇ ರೀತಿಯ ಅಚ್ಚರಿಯಾಗುವುದಿಲ್ಲ. ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಲಿದ್ದಾರೆ," ಎಂದು ಮೈಕಲ್ ಕ್ಲಾರ್ಕ್ ಭವಿಷ್ಯ ನುಡಿದಿದ್ದಾರೆ.