INDW vs ENGW: ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ಮಹಿಳಾ ತಂಡ ಪ್ರಕಟ!
ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಭಾರತ ಮಹಿಳಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 2 ರಂದು ಶನಿವಾರ ಪ್ರಕಟಿಸಿದೆ. ಗಾಯಗೊಂಡಿರುವ ಅಮಂಜೋತ್ ಕೌರ್ ತಂಡದಿಂದ ಹೊರಗುಳಿದಿದ್ದಾರೆ. ಜುಲೈ10 ರಂದು ಈ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಭಾರತ ಮಹಿಳಾ ಟೆಸ್ಟ್ ತಂಡವನ್ನು ಪ್ರಕಟಿಸಿದ ಬಿಸಿಸಿಐ. -
ಮುಂಬೈ: ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಂದು ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಏಕೈಕ ಮಹಿಳಾ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು (India women Test Squad) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮೇ 2 ರಂದು ಶನಿವಾರ ಪ್ರಕಟಿಸಿದೆ. 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (ICC Women's T20 World Cup) ಹಾಗೂ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಬೆನ್ನಲ್ಲೆ ಬಿಸಿಸಿಐ ಮಹಿಳಾ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಟಿ20 ವಿಶ್ವಕಪ್ ಫೈನಲ್ ಮುಗಿದ 10 ದಿನಗಳ ಬಳಿಕ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಎಂದಿನಂತೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಇವರಿಗೆ ಉಪನಾಯಕಿಯಾಗಿ ಸ್ಮೃತಿ ಮಂಧಾನಾ ಸಾಥ್ ನೀಡಲಿದ್ದಾರೆ. ಆಸ್ಟ್ರೇಲಿಯಾ ಎದುರು ಈ ಹಿಂದೆ ಏಕೈಕ ಟೆಸ್ಟ್ ಪಂದ್ಯವನ್ನು ಆಡಿದ್ದ ತಂಡದಲ್ಲಿ ಇದೀಗ ಮೂರು ಬದಲಾವಣೆಯನ್ನು ಮಾಡಲಾಗಿದೆ. ವೈಷ್ಣವಿ ಶರ್ಮಾ, ಉಮಾ ಛೆಟ್ರಿ ಹಾಗೂ ಅಮನ್‌ಜೋತ್ ಕೌರ್ ಅವರ ಸ್ಥಾನಗಳಿಗೆ ಕ್ರಮವಾಗಿ ನಂದಾನಿ ಶರ್ಮಾ, ಯಾಸ್ತಿಕಾ ಭಾಟಿಯಾ ಹಾಗೂ ಶ್ರೀ ಚರಣಿಗೆ ಅವಕಾಶವನ್ನು ನೀಡಲಾಗಿದೆ.
Women's T20 World Cup 2026: ಭಾರತ ಮಹಿಳಾ ತಂಡವನ್ನು ಪ್ರಕಟಿಸಿದ ಬಿಸಿಸಿಐ!
ವಿಕೆಟ್‌ಕೀಪರ್-ಬ್ಯಾಟರ್ ಯಾಸ್ತಿಕಾ ದೀರ್ಘಕಾಲದ ಗಾಯದಿಂದ ಗುಣಮುಖವಾಗಿ ಮತ್ತೆ ತಂಡಕ್ಕೆ ಮರಳಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್ ಟೂರ್ನಿಯ ತಂಡದಲ್ಲಿ ಹೆಚ್ಚುವರಿ ವಿಕೆಟ್‌ಕೀಪರ್ ಆಗಿಯೂ ಅವರನ್ನು ಆಯ್ಕೆ ಮಾಡಲಾಗಿದೆ. ನಂದಾನಿಗೂ ಇಂಗ್ಲೆಂಡ್ ಸರಣಿ ಮತ್ತು ಟಿ20 ವಿಶ್ವಕಪ್ ಟೂರ್ನಿಯ ಟಿ20ಐ ತಂಡದಲ್ಲಿ ಮೊದಲ ಬಾರಿ ಅವಕಾಶ ಲಭಿಸಿದೆ.
ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್ ಮತ್ತು ಪ್ರತಿಕಾ ರಾವಲ್ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಗುಳಿದಿದ್ದರೂ, ಈಗ ಮತ್ತೆ ತಂಡಕ್ಕೆ ಮರಳಿದ್ದಾರೆ. ಈ ಮೂವರು ಆಟಗಾರರು ಮಾರ್ಚ್ 6ರಂದು ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆ ಪಂದ್ಯದಲ್ಲಿ ರಾಣಾ ಮತ್ತು ರಾವಲ್ ಮೈದಾನಕ್ಕಿಳಿದಿದ್ದರು.
BCCI Honorary Secretary Mr Devajit Saikia announces #TeamIndia’s squad for the ICC Women’s T20 World Cup 2026, the three-match T20I series against England, and the upcoming Test against England 🇮🇳
— BCCI Women (@BCCIWomen) May 2, 2026
Details ▶️ https://t.co/cZnGDxMPtb #WomenInBlue | #T20WorldCup pic.twitter.com/4bTVZlo7js
ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕ), ಸ್ಮೃತಿ ಮಂಧಾನಾ ( ಉಪನಾಯಕ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಪ್ರತೀಕಾ ರಾವಾಲ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದಾನಿ ಶರ್ಮಾ, ಹರ್ಲೀನ್ ಡಿಯೋಲ್, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಸಯಾಲಿ ಸಾತ್ಘರೆ, ಸ್ನೇಹಾ ರಾಣಾ