ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IND vs NED: ನೆದರ್ಲೆಂಡ್ಸ್‌ ವಿರುದ್ದ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಭಾರತ!

India vs Netherlands: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿದೆ.

ನೆದರ್ಲೆಂಡ್ಸ್‌ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಭಾರತ!

ಭಾರತ vs ನಮೀಬಿಯಾ ನಡುವಣ ಪಂದ್ಯ. -

Profile
Ramesh Kote Feb 18, 2026 6:58 PM

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2026) ಟೂರ್ನಿಯ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್‌ (IND vs NED) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav), ಮೊದಲು ಬ್ಯಾಟಿಂಗ್‌ ನಡೆಸಲು ನಿರ್ಧರಿಸಿದ್ದಾರೆ. ಆ ಮೂಲಕ ದೊಡ್ಡ ಮೊತ್ತವನ್ನು ಕಲೆ ಹಾಕುವ ಯೋಜನೆಯನ್ನು ಆತಿಥೇಯ ತಂಡ ಹಾಕಿಕೊಂಡಿದೆ.

ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ ಎಂದು ಟಾಸ್‌ ಗೆದ್ದ ಬಳಿಕ ನಾಯಕ ಸೂರ್ಯಕುಮಾರ್‌ ಯಾದವ್‌ ಮಾಹಿತಿ ನೀಡಿದ್ದಾರೆ. ಕುಲ್ದೀಪ್‌ ಯಾದವ್‌ ಸ್ಥಾನಕ್ಕೆ ಅರ್ಷದೀಪ್‌ ಹಾಗೂ ಉಪ ನಾಯಕ ಅಕ್ಷರ್‌ ಪಟೇಲ್‌ಗೆ ವಿಶ್ರಾಂತಿಯನ್ನು ನೀಡಿದ್ದು, ಅವರ ಸ್ಥಾನಕ್ಕೆ ಮತ್ತೊರ್ವ ಸ್ಪಿನ್‌ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ಗೆ ಅವಕಾಶವನ್ನು ನೀಡಲಾಗಿದೆ. ಇನ್ನು ಎದುರಾಳಿ ನೆದರ್ಲೆಂಡ್ಸ್‌ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಫ್ರೆಡ್‌ ಕ್ಲಾಸೆನ್‌ ಅವರ ಸ್ಥಾನಕ್ಕೆ ನೋಹ್ ಕ್ರೋಸ್ ಅವರಿಗೆ ಸ್ಥಾನವನ್ನು ಕಲ್ಪಿಸಲಾಗಿದೆ.

PAK vs NAM: ಯುಎಸ್‌ಎ ಕನಸು ಭಗ್ನ, ನಮೀಬಿಯಾ ವಿರುದ್ಧ ಗೆದ್ದ ಪಾಕಿಸ್ತಾನಕ್ಕೆ ಸೂಪರ್‌-8ರ ಟಿಕೆಟ್‌!

ಭಾರತ ತಂಡ, ಆಡಿದ ಆರಂಭಿಕ ಮೂರೂ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಆ ಮೂಲಕ ಟೂರ್ನಿಯ ಸೂಪರ್‌-8ಕ್ಕೆ ಅಧಿಕೃತವಾಗಿ ಅರ್ಹತೆ ಪಡೆದಿತ್ತು. ಆರಂಭಿಕ ಪಂದ್ಯದಲ್ಲಿ ಯುಎಸ್‌ಎ, ಎರಡನೇ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಹಾಗೂ ತನ್ನ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲುವು ಪಡೆದಿತ್ತು. ಇದರ ಫಲವಾಗಿ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಅಂತಿಮ ಎಂಟರ ಘಟ್ಟಕ್ಕೆ ಬ್ಲೂ ಬಾಯ್ಸ್‌ ಅರ್ಹತೆ ಪಡೆದಿದ್ದರು.



ಎದುರಾಳಿ ನೆದರ್ಲೆಂಡ್ಸ್‌ ತಂಡ ಆಡಿದ ಆರಂಭಿಕ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಪಡೆದಿತ್ತು. ಪಾಕಿಸ್ತಾನ ಹಾಗೂ ಯುಎಸ್‌ಎ ವಿರುದ್ಧ ಸೋಲು ಅನುಭವಿಸಿದರೂ ನಮೀಬಿಯಾ ಎದುರು 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಪಡೆದಿತ್ತು. ಆದರೆ, ಎರಡು ಪಂದ್ಯಗಳ ಸೋಲಿನಿಂದಾಗಿ ನೆದರ್ಲೆಂಡ್ಸ್‌ ಅಂತಿಮ ಎಂಟರ ಘಟ್ಟಕ್ಕೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.



ಇತ್ತಂಡಗಳ ಪ್ಲೇಯಿಂಗ್‌ XI

ಭಾರತ: ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ

SA vs UAE: ಯುಎಇ ಎದುರು ಸುಲಭ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ!

ನೆದರ್ಲೆಂಡ್ಸ್‌: ಮೈಕಲ್ ಲೆವಿಟ್, ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್(ವಿಕೆಟ್‌ ಕೀಪರ್‌), ಝಾಕ್ ಲಯನ್-ಕ್ಯಾಚೆಟ್, ನೋಹ್ ಕ್ರೋಸ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ಕೈಲ್ ಕ್ಲೈನ್