ದುಬೈ: ಇಲ್ಲಿನ ದುಬೈಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಯಲ್ಲಿ ಸೂಪರ್-4ರ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ (IND vs PAK) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ (India) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಎದುರಾಳಿ ಪಾಕಿಸ್ತಾನ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಲಾಗಿದೆ. ಲೀಗ್ ಪಂದ್ಯದಂತೆ ಈ ಹಣಾಹಣಿಯಲ್ಲಿಯೂ ಎದುರಾಳಿ ಪಾಕ್ ತಂಡವನ್ನು ಕಡಿಮೆ ಮೊತ್ತಕ್ಕೆ ಕಟಗಟಿ ಹಾಕಲು ಟೀಮ್ ಇಂಡಿಯಾ ಯೋಜನೆಯನ್ನು ಹಾಕಿಕೊಂಡಿದೆ.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಒಮಾನ್ ವಿರುದ್ಧ ಆಡಿದ್ದ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಅವರನ್ನು ಕೈ ಬಿಡಲಾಗಿದ್ದು, ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್ ಬುಮ್ರಾ ಹಾಗೂ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ಲೇಯಿಂಗ್ XIಗೆ ಮರಳಿದ್ದಾರೆ. ಇನ್ನು ಎದುರಾಳಿ ಪಾಕಿಸ್ತಾನ ತಂಡದ ಪ್ಲೇಯಿಂಗ್ XIನಲ್ಲಿಯೂ ಎರಡು ಬದಲಾವಣೆಯನ್ನು ತರಲಾಗಿದೆ. ಹಸನ್ ನವಾಝ್ ಮತ್ತು ಖುಷ್ದಿಲ್ ಶಾ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ.
IND vs PAK: ʻಆಂಡಿ ಪೈಕ್ರಾಫ್ಟ್ ಸ್ಕೂಲ್ ಟೀಚರ್ ಅಲ್ಲʼ-ಪಾಕಿಸ್ತಾನವನ್ನು ಟೀಕಿಸಿದ ಆರ್ ಅಶ್ವಿನ್!
ಟೂರ್ನಿಯ ಲೀಗ್ ಹಂತದದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆದರೆ, ಈ ಪಂದ್ಯದ ಬಳಿಕ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಆಟಗಾರರು ಎದುರಾಳಿ ತಂಡದ ಆಟಗಾರರಿಗೆ ಶೇಕ್‌ಹ್ಯಾಂಡ್ ನೀಡಿರಲಿಲ್ಲ. ಇದು ವಿವಾದಕ್ಕೆ ಕಾರಣವಾಗಿತ್ತು. ನಂತರ ಪಾಕಿಸ್ತಾನ ಕ್ರಿಕೆಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಇದರಿಂದ ಸಾಕಷ್ಟು ಹೈಡ್ರಾಮಾ ನಡೆದಿತ್ತು. ಇದೀಗ ಪಾಕಿಸ್ತಾನ ತಂಡ, ಸೂಪರ್-4ರ ಪಂದ್ಯದಲ್ಲಿ ಭಾರತವನ್ನು ಮಣಿಸಿ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್( ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ
ಪಾಕಿಸ್ತಾನ: ಸೈಯಮ್ ಆಯುಬ್, ಸಹಿಬ್ದಾಜ್ ಫರ್ಹಾನ್, ಫಖರ್ ಝಮಾನ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲಾತ್, ಮೊಹಮ್ದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್