ಚಂಡೀಗಢ: ಇಲ್ಲಿನ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ಭಾರತ ಹಾಗೂ ದಕ್ಷಿಣ ಆಫ್ರಿಕಾ (IND vs SA) ನಡುವೆ ಎರಡನೇ ಟಿ20ಐ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav), ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಏಡೆನ್ ಮಾರ್ಕ್ರಮ್ ನಾಯಕತ್ವದ ಎದುರಾಳಿ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್ ಮಾಡಲು ಆತಿಥೇಯ ತಂಡ ಯೋಜನೆ ರೂಪಿಸಿದೆ.
ಕಟನ್‌ನಲ್ಲಿ ಮೊದಲನೇ ಟಿ20ಐ ಪಂದ್ಯವನ್ನು ಗೆದ್ದಿದ್ದ ಭಾರತ ತಂಡ, ಎರಡನೇ ಪಂದ್ಯಕ್ಕೆ ತನ್ನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆರಂಭಿಕ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ. ಆದರೆ, ದಕ್ಷಿಣ ಆಫ್ರಿಕಾ ತಂಡದ ಪ್ಲೇಯಿಂಗ್ xiನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಟ್ರಿಸ್ಟನ್ ಸ್ಟಬ್ಸ್, ಕೇಶವ್ ಮಹಾರಾಜ್ ಹಾಗೂ ಎನ್ರಿಕ್ ಅವರ ಬದಲು ರೀಝಾ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ ಹಾಗೂ ಒಟ್ನಿಲ್ ಬಾರ್ಟಮನ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.
IND vs SA: ವಿರಾಟ್ ಕೊಹ್ಲಿಯ ಟಿ20ಐ ದಾಖಲೆ ಮುರಿಯುವ ಸನಿಹದಲ್ಲಿ ಅಭಿಷೇಕ್ ಶರ್ಮಾ!
ಇನ್ನು ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ, ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಪ್ರದರ್ಶನದ ಸಹಾಯದಿಂದ 101 ರನ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 175 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿಯನ್ನು ಹಿಂಬಾಲಿಸಿದ್ದ ದಕ್ಷಿಣ ಆಫ್ರಿಕಾ ತಂಡ ಕೇವಲ 74 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಭಾರತದ ಪರ 59 ರನ್ ಸಿಡಿಸಿದ್ದ ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಉಭಯ ತಂಡಗಳ ಪ್ಲೇಯಿಂಗ್ XI
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಜಾರ್ಜ್ ಲಿಂಡೆ, ಮಾರ್ಕೊ ಯೆನ್ಸೆನ್, ಲುಥೊ ಸಿಪಾಮ್ಲಾ, ಲುಂಗಿ ಎನ್ಗಿಡಿ, ಒಟ್ನೀಲ್ ಬಾರ್ಟ್‌ಮನ್
ಭಾರತ : ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್), ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.
ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರಝಾ ಹೆಂಡ್ರಿಕ್ಸ್, ಮಾರ್ಕೊ ಯೆನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್ಗಿಡಿ, ಎನ್ರಿಕ್ ನೊರ್ಕಿಯಾ, ಲುಥೊ ಸಿಪಾಮ್ಲಾ, ಟ್ರಿಸ್ಟನ್ ಸ್ಟಬ್ಸ್.