IND vs ENG 3rd T20I: ಟ್ರೆಂಟ್ ಬ್ರಿಡ್ಜ್‌ನಲ್ಲಿ ಟಾಸ್ ಬೌಲಿಂಗ್ ಆರಿಸಿಕೊಂಡ ಭಾರತ!
IND vs ENG 3rd T20I: ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಇದೀಗ ನಡೆಯುತ್ತಿರುವ ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಬೌಲಿಂಗ್ ಆರಿಸಿಕೊಂಡಿದೆ. ಆ ಮೂಲಕ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಲು ಎದುರು ನೋಡುತ್ತಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟಿ20ಐ ಪಂದ್ಯ. -
ನಾಟಿಂಗ್‌ಹ್ಯಾಮ್: ಇಲ್ಲಿನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಇದೀಗ ನಡೆಯುತ್ತಿರುವ ಮೂರನೇ ಟಿ20ಐ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆಯನ್ನು ಟೀಮ್ ಇಂಡಿಯಾ ಹಾಕಿಕೊಂಡಿದೆ. ಕಳೆದ ಪಂದ್ಯದಲ್ಲಿಯೂ ಕೂಡ ಭಾರತ ತಂಡ ಮೊದಲು ಬ್ಯಾಟ್ ಮಾಡಿತ್ತು. ಆದರೆ, ಡೆತ್ ಓವರ್‌ಗಳಲ್ಲಿನ ಬೌಲಿಂಗ್ ವೈಫಲ್ಯದಿಂದಾಗಿ ಸೋಲು ಅನುಭವಿಸಿತ್ತು.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ ಎಂದು ಟಾಸ್ ವೇಳೆ ಶ್ರೇಯಸ್ ಅಯ್ಯರ್ ಹೇಳಿದರು. ಅಲ್ಲದೆ, ಎರಡನೇ ಪಂದ್ಯದಲ್ಲಿ ದುಬಾರಿಯಾಗಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ಅವರ ಸ್ಥಾನಕ್ಕೆ ಐಪಿಎಲ್ ಹಿರೋ ಪ್ರಿನ್ಸ್ ಯಾದವ್‌ಗೆ ಸ್ಥಾನವನ್ನು ನೀಡಲಾಗಿದೆ. ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ XI ಅನ್ನು ಜುಲೈ 6 ರಂದೇ ಪ್ರಕಟಿಸಲಾಗಿತ್ತು. ಎರಡನೇ ಪಂದ್ಯದಲ್ಲಿ ಆಡಿದ್ದ ಅದೇ ಆಡುವ ಬಳಗವನ್ನು ಮೂರನೇ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ.
IND vs ZIM: ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಹೆಡ್ ಕೋಚ್? ಗೌತಮ್ ಗಂಭೀರ್ ಇಲ್ಲ!
ಉಭಯ ತಂಡಗಳ ನಡುವಣ ಟಿ20ಐ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ಮುಗಿದಿವೆ. ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆದಿದ್ದ ಮೊದಲನೇ ಪಂದ್ಯ ಮಳೆಗೆ ಬಲಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ 189 ರನ್‌ಗಳನ್ನು ಕಲೆ ಹಾಕಿತ್ತು. ಆದರೆ, ಇಂಗ್ಲೆಂಡ್ ತಂಡದ ಚೇಸಿಂಗ್‌ಗೆ ಮಳೆರಾಯ ಅವಕಾಶ ನೀಡಿರಲಿಲ್ಲ. ಅಂತಿಮವಾಗಿ ಈ ಪಂದ್ಯ ಅಂತಿಮವಾಗಿ ಫಲಿತಾಂಶವಿಲ್ಲದೆ ಅಂತ್ಯವಾಗಿತ್ತು.
🚨 Toss 🚨#TeamIndia have won the toss and elected to bowl first at Trent Bridge.
— BCCI (@BCCI) July 7, 2026
Updates ▶️ https://t.co/jan4S8zsaV#ENGvIND pic.twitter.com/ptcxBFxRP5
ಬಳಿಕ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು. ಆ ಮೂಲಕ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಆಂಗ್ಕರು 1-0 ಮುನ್ನಡೆ ಪಡೆದುಕೊಂಡಿದ್ದಾರೆ. ಇದೀಗ ಭಾರತ ತಂಡ ಈ ಟಿ20ಐ ಸರಣಿಯನ್ನು ಗೆಲ್ಲಬೇಕೆಂದರೆ ಇನ್ನುಳಿದ ಮೂರೂ ಪಂದ್ಯಗಳಲ್ಲಿ ಗೆಲ್ಲಬೇಕಾದ ಅಗತ್ಯವಿದೆ. ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ದೊಡ್ಡ ಜೊತೆಯಾಟಗಳನ್ನು ಆಡಬೇಕಾಗಿದೆ, ಇನ್ನು ಬೌಲಿಂಗ್ ವಿಭಾಗದಲ್ಲಿಯೂ ಬೌಲರ್‌ಗಳ ಪುಟಿದೇಳಬೇಕಾಗಿದೆ.
#TeamIndia's Playing XI that will take the field at Trent Bridge 🙌
— BCCI (@BCCI) July 7, 2026
Updates ▶️ https://t.co/jan4S8zsaV#ENGvIND pic.twitter.com/pd7i9lmmko
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಶಿವಂ ದುಬೇ, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
ಇಂಗ್ಲೆಂಡ್: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್
Let's go lads! 🦁
— England Cricket (@englandcricket) July 7, 2026
We lose the toss and bat first!
Click below for our Match Centre:
ತಂಡಗಳು
ಭಾರತ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ನಾಯಕ), ಶ್ರೇಯಸ್ ಅಯ್ಯರ್ (ನಾಯಕ), ಶಿವಂ ದುಬೇ, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಸಂಜು ಸ್ಯಾಮ್ಸನ್, ಪ್ರಸಿಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ಸೂರ್ಯಾಂಶ್ ಶೆಡ್ಗೆ, ಪ್ರಿನ್ಸ್ ಯಾದವ್
ಇಂಗ್ಲೆಂಡ್: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್, ಸನ್ನಿ ಬಾಕರ್, ರೆಹಾನ್ ಅಹ್ಮದ್, ಜೇಮ್ಸ್ ಕೋಲ್ಸ್, ಜೋರ್ಡನ್ ಕಾಕ್ಸ್, ಸಾಕಿಬ್ ಮಹ್ಮೂದ್, ಲ್ಯೂಕ್ ವುಡ್