ಬಿಸ್ಟಲ್: ಇಲ್ಲಿನ ಕೌಂಟಿ ಗ್ರೌಂಡ್‌ನಲ್ಲಿ ಇದೀಗ ನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು (IND vs ENG) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ. ಆ ಮೂಲಕ ದೊಡ್ಡ ಮೊತ್ತವನ್ನು ಕಲೆ ಹಾಕಲು ಎದುರು ನೋಡುತ್ತಿದೆ. ಮತ್ತೊಂದು ಕಡೆ ಎರಡು ಪಂದ್ಯಗಳನ್ನು ಈಗಾಗಲೇ ಸೋತಿರುವ ಭಾರತ, ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಬೇಕೆಂದರೆ ಇನ್ನುಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ.
ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಒತ್ತಡಕ್ಕೆ ಒಳಗಾಗಿರುವ ಭಾರತ ತಂಡ, ಈ ಸರಣಿಯನ್ನು ಸಮಬಲ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಅವರು ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆ ತರಲಾಗಿದೆ ಎಂದರು. ಅವರ ಪ್ರಕಾರ ವಾಷಿಂಗ್ಟನ್ ಸುಂದರ್ ಹಾಗೂ ಪ್ರಸಿಧ್ ಕೃಷ್ಣ ಅವರು ಕ್ರಮವಾಗಿ ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ಅವರ ಸ್ಥಾನಕ್ಕೆ ಮರಳಿದ್ದಾರೆ.
ʻನನಗೆ ವಿಶ್ರಾಂತಿ ಬೇಡʼ: ಸಂಜು ಸ್ಯಾಮ್ಸನ್ ಪಾತ್ರದಲ್ಲಿ ಗಂಭಿರ್‌ರನ್ನು ಟೀಕಿಸಿದ ಆರ್ ಅಶ್ವಿನ್!
ಇಂಗ್ಲೆಂಡ್ ಪ್ಲೇಯಿಂಗ್ xiನಲ್ಲಿ ಒಂದು ಬದಲಾವಣೆ
ಇಂಗ್ಲೆಂಡ್ ತಂಡದ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಲಿಯಾಮ್ ಡಾಸನ್ ಅವರ ಸ್ಥಾನಕ್ಕೆ ರೆಹಾನ್ ಅಹ್ಮದ್ ಅವರನ್ನು ಕರೆ ತರಲಾಗಿದೆ. ಆರಂಭಿಕ ಎರಡು ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ತಂಡ, ಈ ಪಂದ್ಯವನ್ನು ಟಿ20ಐ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಳ್ಳಲು ಬಯಸುತ್ತಿದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ : ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್ ಕೃಷ್ಣ
ಇಂಗ್ಲೆಂಡ್ : ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜೋಶ್ ಟಂಗ್
ತಂಡಗಳು
ಭಾರತ : ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್ ಕೃಷ್ಣ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸಂಜು ಸ್ಯಾಮ್ಸನ್, ರವಿ ಬಿಷ್ಣೋಯ್, ಸೂರ್ಯಾಂಶ್ ಶೆಡ್ಗೆ
ಇಂಗ್ಲೆಂಡ್ : ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್, ಲಿಯಾಮ್ ಡಾಸನ್, ಸನ್ನಿ ಬಾಕರ್, ಜೋರ್ಡನ್ ಕಾಕ್ಸ್, ಸಾಕಿಬ್ ಮಹ್ಮೂದ್, ಲ್ಯೂಕ್ ವುಡ್