ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IND vs NZ: ನಾಲ್ಕನೇ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

IND vs NZ 4th T20I Match: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಇದೀಗ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಸೂರ್ಯಕುಮಾರ್‌ ಯಾದವ್‌, ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರವಾಸಿ ನ್ಯೂಜಿಲೆಂಡ್‌ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ನಾಲ್ಕನೇ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

ಭಾರತ vs ನ್ಯೂಜಿಲೆಂಡ್‌ ನಡುವಣ 4ನೇ ಟಿ20ಐ ಪಂದ್ಯ. -

Profile
Ramesh Kote Jan 28, 2026 6:58 PM

ವಿಶಾಖಪಟ್ಟಣಂ: ಇಲ್ಲಿನ ಆಂಧ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ (IND vs NZ) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರವಾಸಿ ನ್ಯೂಜಿಲೆಂಡ್‌ (New Zealand) ತಂಡ ಮೊದಲು ಬ್ಯಾಟ್‌ ಮಾಡಲಿದೆ. ಈಗಾಗಲೇ ಆರಂಭಿಕ ಮೂರೂ ಪಂದ್ಯಗಳನ್ನು ಗೆದ್ದಿರುವ ಟೀಮ್‌ ಇಂಡಿಯಾ, ಕೊನೆಯ ಎರಡು ಪಂದ್ಯಗಳು ಬಾಕಿ ಇರುವಾಗಲೇ ಟಿ20ಐ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಹಾಗಾಗಿ ಇನ್ನುಳಿದ ಎರಡು ಪಂದ್ಯಗಳ ಫಲಿತಾಂಶಗಳ ಭಾರತದ ಸರಣಿ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಮೂರು ಪಂದ್ಯಗಳನ್ನು ಆಡಿದ್ದ ಇಶಾನ್‌ ಕಿಶನ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಯುವ ವೇಗದ ಬೌಲರ್‌ ಅರ್ಷದೀಪ್‌ ಸಿಂಗ್‌ಗೆ ಅವಕಾಶವನ್ನು ನೀಡಲಾಗಿದೆ. ಇನ್ನೂ ಸಂಪೂರ್ಣ ಫಿಟ್‌ ಆಗದ ಕಾರಣ ಉಪ ನಾಯಕ ಅಕ್ಷರ್‌ ಪಟೇಲ್‌ ಅವರು ನಾಲ್ಕನೇ ಪಂದ್ಯದ ಆಯ್ಕೆಗೂ ಲಭ್ಯರಾಗಿಲ್ಲ. ಇವರು ಕೊನೆಯ ಪಂದ್ಯಕ್ಕೆ ಲಭ್ಯರಾಗಬಹುದು ಎಂದು ನಾಯಕ ಸೂರ್ಯಕುಮಾರ್‌ ಯಾದವ್‌ ಟಾಸ್‌ ವೇಳೆ ತಿಳಿಸಿದ್ದಾರೆ.

T20 World Cup 2026: ಈ ಬಾರಿ ಟಿ20 ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ರಾಹುಲ್‌ ದ್ರಾವಿಡ್‌!

ಎದುರಾಳಿ ನ್ಯೂಜಿಲೆಂಡ್‌ ತಂಡದಲ್ಲಿಯೂ ಒಂದು ಬದಲಾವಣೆಯನ್ನು ತರಲಾಗಿದೆ. ಕೈಲ್‌ ಜೇಮಿಸನ್‌ ಅವರ ಸ್ಥಾನಕ್ಕೆ ಝ್ಯಾಕರಿ ಫೌಲ್ಕ್ಸ್‌ ಪ್ಲೇಯಿಂಗ್‌ XIಗೆ ಬಂದಿದ್ದಾರೆ ಎಂದು ಕಿವೀಸ್‌ ನಾಯಕ ಮಿಚೆಲ್‌ ಸ್ಯಾಂಟ್ನರ್‌ ತಿಳಿಸಿದ್ದಾರೆ. ಈಗಾಗಲೇ ಆರಂಭಿಕ ಮೂರು ಪಂದ್ಯಗಳನ್ನು ಸೋತಿರುವ ನ್ಯೂಜಿಲೆಂಡ್‌ ತಂಡ, ಕನಿಷ್ಠ ಕೊನೆಯ ಎರಡು ಪಂದ್ಯಗಳನ್ನು ಗೆದ್ದು ಟಿ20 ವಿಶ್ವಕಪ್‌ ಟೂರ್ನಿಗೆ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಎದುರು ನೋಡುತ್ತಿದೆ.



ಇತ್ತಂಡಗಳ ಪ್ಲೇಯಿಂಗ್‌ XI

ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್‌ದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್‌ ಬುಮ್ರಾ

ನ್ಯೂಜಿಲೆಂಡ್‌: ಟಿಮ್ ಸೀಫರ್ಟ್(ವಿಕೆಟ್‌ ಕೀಪರ್‌), ಡೆವೋನ್ ಕಾನ್ವೇ, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಝಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ

ತಂಡಗಳು

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಜಸ್‌ಪ್ರೀತ್‌ ಬುಮ್ರಾ, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್

ನ್ಯೂಜಿಲೆಂಡ್‌: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್(ವಿಕೆಟ್‌ ಕೀಪರ್‌), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್‌ವೆಲ್, ಲಾಕಿ ಫರ್ಗ್ಯೂಸನ್, ಜಕಾರಿ ಫೌಲ್ಕ್ಸ್, ಬೆವೊನ್ ಜಾಕೋಬ್ಸ್