ಸೌತ್‌ಹ್ಯಾಂಪ್ಟನ್: ಇಲ್ಲಿನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆರಿಸಿಕೊಂಡಿದ್ದಾರೆ. ಈ ಪಂದ್ಯವನ್ನು ಗೆದ್ದು ಟಿ20ಐ ಸರಣಿಯಲ್ಲಿ ಕ್ಲೀನ್ ಸ್ವೀಪ್ ಆಘಾತವನ್ನು ತಪ್ಪಿಸಿಕೊಳ್ಳಲು ಪ್ರವಾಸಿ ತಂಡ ಎದುರು ನೋಡುತ್ತಿದೆ. ಆದರೆ, ಆಂಗ್ಲರು ಕೊನೆಯ ಪಂದ್ಯದಲ್ಲಿ ಗೆದ್ದು ಐಸಿಸಿ ಟಿ20 ತಂಡಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಲು ಬಯಸುತ್ತಿದ್ದಾರೆ.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ವೈಭವ್ ಸೂರ್ಯವಂಶಿ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಕೈ ಬಿಡಲಾಗಿದ್ದು, ಇವರ ಸ್ಥಾನಕ್ಕೆ ಕ್ರಮವಾಗಿ ಸಂಜು ಸ್ಯಾಮ್ಸನ್ ಮತ್ತು ಡೆಬ್ಯೂಟಂಟ್ ಸೂರ್ಯಾಂಶ್ ಶೆಡ್ಗೆ ಅವರಿಗೆ ಅವಕಾಶವನ್ನು ನೀಡಲಾಗಿದೆ. ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ರೆಹಾನ್ ಮಹ್ಮೂದ್ ಅವರ ಸ್ಥಾನದಲ್ಲಿ ಲಿಯಾಮ್ ಡಾಸನ್ ಪ್ಲೇಯಿಂಗ್ XIಗೆ ಮರಳಿದ್ದಾರೆ.
IND vs ENG: ಜೋಫ್ರಾ ಆರ್ಚರ್ ಎದುರು ವೈಭವ್ ವೈಫಲ್ಯಕ್ಕೆ ಕಾರಣ ತಿಳಿಸಿದ ಮೊಯೀನ್ ಅಲಿ!
ಅಂದ ಹಾಗೆ ಈ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 06:30ಕ್ಕೆ ನಡೆಯಬೇಕಾಗಿತ್ತು. ಆದರೆ, ಭಾರತ ತಂಡ ಬಸ್ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿತ್ತು. ಹಾಗಾಗಿ ಆಟಗಾರರು ಮೈದಾನದಲ್ಲಿ ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಪಂದ್ಯದ ಟಾಸ್ 07: 15ಕ್ಕೆ ನಡೆಯಿತು.
ಭಾರತ ತಂಡದ ಪಾಲಿನ ಕಹಿ ಅನುಭವ ಎಂದರೆ, ಯುಕೆ ಪ್ರವಾಸದಲ್ಲಿ ಇಲ್ಲಿಯವರೆಗೂ ಆಡಿದ ಆರು ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಗೆದ್ದಿಲ್ಲ ಎಂಬುದು. ಅದರಲ್ಲಿಯೂ ವಿಶೇಷವಾಗಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇನ್ನೂ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಬ್ರಿಸ್ಟನ್‌ನ ಕೌಂಟಿ ಗ್ರೌಂಡ್‌ನಲ್ಲಿಯೂ ಭಾರತ ತಂಡ ಬ್ಯಾಟಿಂಗ್ ವೈಫಲ್ಯದಿಂದ 9 ವಿಕೆಟ್‌ಗಳ ಸೋಲು ಅನುಭವಿಸಿತ್ತು. ಆ ಮೂಲಕ ಟೀಮ್ ಇಂಡಿಯಾ ಭಾರಿ ನಿರಾಶೆಯನ್ನು ಅನುಭವಿಸಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿಧ್ ಕೃಷ್ಣ
ಇಂಗ್ಲೆಂಡ್: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್
ತಂಡಗಳು
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ಶಿವಂ ದುಬೆ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್ ಕೃಷ್ಣ, ಸಂಜು ಸ್ಯಾಮ್ಸನ್, ರವಿ ಬಿಷ್ಣೋಯ್, ಸೂರ್ಯಾಂಶ್ ಶೆಡ್ಗೆ
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್, ಲಿಯಾಮ್ ಡಾಸನ್, ಸನ್ನಿ ಬಾಕರ್, ಜೋರ್ಡನ್ ಕಾಕ್ಸ್, ಸಾಕಿಬ್ ಮಹ್ಮೂದ್, ಲ್ಯೂಕ್ ವುಡ್