IND vs ENG: ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಭಾರತ, ವೈಭವ್ ಸೂರ್ಯವಂಶಿಗೆ ಚೊಚ್ಚಲ ಅವಕಾಶ!
IND vs ENG 2nd T20I: ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟಿ20ಐ ಪಂದ್ಯ. -
ಮ್ಯಾಂಚೆಸ್ಟರ್: ಇಲ್ಲಿನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಮೊದಲು ಬ್ಯಾಟಿಂಗ್ ನಡೆಸಲು ನಿರ್ಧರಿಸಿದ್ದಾರೆ. ಆ ಮೂಲಕ ಎದುರಾಳಿ ತಂಡಕ್ಕೆ ದೊಡ್ಡ ಮೊತ್ತದ ಗುರಿಯನ್ನು ನೀಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.ಅಂದ ಹಾಗೆ 15ರ ವಯಸ್ಸಿನ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಈ ಪಂದ್ಯದಲ್ಲಿ ಚೊಚ್ಚಲ ಅವಕಾಶ ನೀಡಿದ್ದು, ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.
ಮೊದಲನೇ ಪಂದ್ಯದಂತೆ ಎರಡನೇ ಹಣಾಹಣಿಯಲ್ಲಿಯೂ ವೈಭವ್ ಸೂರ್ಯವಂಶಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಈ ವೇಳೆ ಅಯ್ಯರ್ 15ರ ವಯಸ್ಸಿನ ವೈಭವ್ ಸೂರ್ಯವಂಶಿ ಅವರು ಸಂಜು ಸ್ಯಾಮ್ಸನ್ ಅವರ ಸ್ಥಾನದಲ್ಲಿ ಆಡುತ್ತಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆಂದು ಹೇಳಿದರು. ಕಳೆದ ಮೂರು ಪಂದ್ಯಗಳ ವೈಭವ್ ಬೆಂಚ್ ಕಾದಿದ್ದರು. ಆದರೆ, ಸಂಜು ಕೊನೆಯ ಮೂರು ಪಂದ್ಯಗಳ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಇದರ ಪರಿಣಾಮ ಟೀಮ್ ಮ್ಯಾನೇಜ್‌ಮೆಂಟ್ 15ರ ವಯಸ್ಸಿನ ಆಟಗಾರನಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಅವಕಾಶವನ್ನು ನೀಡಿತು.
IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಸಚಿನ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ!
ಸಚಿನ್ ದಾಖಲೆ ಮುರಿದ ವೈಭವ್
ಎರಡನೇ ಟಿ20ಐ ಪಂದ್ಯದಲ್ಲಿ ಅವಕಾಶ ಪಡೆಯುವ ಮೂಲಕ ವೈಭವ್ ಸೂರ್ಯವಂಶಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡರು. ಆ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ 15 ವರ್ಷ, 99 ದಿನಗಳ ವಯಸ್ಸಿನಲ್ಲಿ ಇಂಟರ್‌ನ್ಯಾಷನಲ್ ಕ್ರಿಕೆಟ್‌ಗೆ ಆಗಮಿಸಿದರೆ, ಕ್ರಿಕೆಟ್ ದೇವರು 16 ವರ್ಷ, 205 ದಿನಗಳ ವಯಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
The start of a special chapter ✨
— BCCI (@BCCI) July 4, 2026
A proud moment as Vaibhav Sooryavanshi receives his #TeamIndia cap from Vice-Captain Tilak Varma 🧢
Updates ▶️ https://t.co/WYfL8tAm58 #ENGvIND pic.twitter.com/zpLtixYDgM
ಇಂಗ್ಲೆಂಡ್ ಪ್ಲೇಯಿಂಗ್ XIನಲ್ಲಿ 2 ಬದಲಾವಣೆ
ಇನ್ನು ಎದುರಾಳಿ ಇಂಗ್ಲೆಂಡ್ ತಂಡದ ಪ್ಲೇಯಿಂಗ್ Xiನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಜೋಫ್ರಾ ಆರ್ಚರ್ ಹಾಗೂ ಜಾಶ್ ಟಂಗ್ ಪ್ಲೇಯಿಂಗ್ XIಗೆ ಮರಳುವ ಮೂಲಕ ಸಾಕಿಬ್ ಮಹ್ಮೂದ್ ಹಾಗೂ ಲ್ಯೂಕ್ ವುಡ್ ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ.
ಮೊದಲನೇ ಪಂದ್ಯ ಮಳೆಗೆ ಬಲಿ
ಜುಲೈ ಒಂದರಂದು ಚೆಸ್ಟರ್ ಲೀ-ಸ್ಟ್ರೀಟ್‌ನ ರಿವರ್‌ಸೈಡ್ ಗ್ರೌಂಡ್‌ನಲ್ಲಿ ನಡೆದಿದ್ದ ಮೊದಲನೇ ಟಿ20ಐ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ, ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್ ಹಾಗೂ ಶಿವಂ ದುಬೇ ಅವರ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 189 ರನ್‌ಗಳನ್ನು ಕಲೆ ಹಾಕಿತ್ತು. ಆದರೆ, ಮಳೆಯಿಂದಾಗಿ ಇಂಗ್ಲೆಂಡ್ ತಂಡದ ಇನಿಂಗ್ಸ್ ಆರಂಭಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಈ ಪಂದ್ಯದ ಫಲಿತಾಂಶ ಮೂಡಿ ಬಂದಿರಲಿಲ್ಲ.
Presenting #TeamIndia's Playing XI for the 2️⃣nd T20I in Manchester 📝
— BCCI (@BCCI) July 4, 2026
Updates ▶️ https://t.co/WYfL8tAm58 #ENGvIND pic.twitter.com/JJn13atG3W
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೇ, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್( ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಜಾಶ್ ಟಂಗ್