ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

T20 World Cup 2026: ಭಾರತ ತಂಡದ ಸೂಪರ್‌-8ರ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ!

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೂಪರ್‌ 8ರ ಮೊದಲನೇ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ತಂಡಗಳ ಜೊತೆ ಭಾರತ ತಂಡ ಸ್ಥಾನ ಪಡೆದಿದೆ. ಭಾರತ ತಂಡ ಫೆಬ್ರವರಿ 22 ಮತ್ತು 26 ರಂದು ಹಾಗೂ ಮಾರ್ಚ್ ಒಂದರಂದು ತನ್ನ ಸೂಪರ್ 8 ಪಂದ್ಯಗಳನ್ನು ಆಡಲಿದೆ.

ಭಾರತ ತಂಡದ ಸೂಪರ್‌-8ರ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ!

ಭಾರತ ತಂಡದ ಸೂಪರ್‌-8ರ ಪಂದ್ಯಗಳ ವೇಳಾಪಟ್ಟಿ. -

Profile
Ramesh Kote Feb 17, 2026 8:45 PM

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2026ರ ಟಿ20 ವಿಶ್ವಕಪ್‌ (ICC T20 World Cup 2026) ಟೂರ್ನಿಯ ಸೂಪರ್ 8 ಹಂತಕ್ಕೆ ಈಗಾಗಲೇ ಏಳು ತಂಡಗಳು ಅರ್ಹತೆ ಪಡೆದಿವೆ. ಸೂಪರ್ 8ರಲ್ಲಿ ತಲಾ ನಾಲ್ಕು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ (India) ತಂಡದ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಜಿಂಬಾಬ್ವೆ ಇವೆ. ಆಸ್ಟ್ರೇಲಿಯಾ (Australia) ತಂಡ ಸೂಪರ್‌-8ಕ್ಕೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿತ್ತು. ಆದರೆ,ಲೀಗ್‌ ಹಂತದಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರ ಪರಿಣಾಮ ಸೂಪರ್‌-8ರಿಂದ ಹೊರ ಬಿದ್ದಿದೆ. ಒಟ್ಟು 5 ಅಂಕಗಳನ್ನು ಪಡೆದ ಜಿಂಬಾಬ್ವೆ ಬಿ ಗುಂಪಿನಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ಅರ್ಹತೆ ಪಡೆದಿದೆ.

2026ರ ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಎಲ್ಲಾ ತಂಡಗಳು ತಲಾ ಮೂರು ಪಂದ್ಯಗಳನ್ನು ಆಡಲಿವೆ. ಭಾರತ ಫೆಬ್ರವರಿ 22 ರಂದು ಅಹಮದಾಬಾದ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ನಂತರ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಟೀಮ್‌ ಇಂಡಿಯಾ, ಫೆಬ್ರವರಿ 26 ರಂದು ಚೆನ್ನೈನ ಚೆಪಾಕ್‌ನಲ್ಲಿ ಜಿಂಬಾಬ್ವೆಯನ್ನು ಎದುರಿಸಲಿದೆ. ಆಸ್ಟ್ರೇಲಿಯಾ ಸೂಪರ್ 8 ಹಂತ ತಲುಪಿದ್ದರೆ, ಈ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು ಎದುರಿಸುತ್ತಿತ್ತು. ಭಾರತ ತನ್ನ ಅಂತಿಮ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ ಒಂದರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

T20 World Cup: ಆಸ್ಟ್ರೇಲಿಯಾ ಕನಸು ಭಗ್ನ, ಸೂಪರ್‌-8ಕ್ಕೆ ಪ್ರವೇಶಿಸಿದ ಜಿಬಾಬ್ವೆ!

ಭಾರತ ತಂಡದ ಸೂಪರ್ 8 ಪಂದ್ಯಗಳು

ಭಾರತ vs ದಕ್ಷಿಣ ಆಫ್ರಿಕಾ, ಫೆಬ್ರವರಿ 22, ನರೇಂದ್ರ ಮೋದಿ ಕ್ರೀಡಾಂಗಣ-ಅಹಮದಾಬಾದ್, ಸಂಜೆ 7:00 ಗಂಟೆಗೆ

ಭಾರತ vs ಜಿಂಬಾಬ್ವೆ, ಫೆಬ್ರವರಿ 26, ಎಂಎ ಚಿದಂಬರಂ ಕ್ರೀಡಾಂಗಣ-ಚೆನ್ನೈ, ಸಂಜೆ 7:00 ಗಂಟೆಗೆ

ಭಾರತ vs ವೆಸ್ಟ್ ಇಂಡೀಸ್, ಮಾರ್ಚ್ 1, ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣ- ಕೋಲ್ಕತ್ತಾ, ಸಂಜೆ 7:00 ಗಂಟೆಗೆ

ಸೆಮಿಫೈನಲ್ಸ್‌ ಹಾದಿ ಹೇಗಿರಲಿದೆ?

ಸೂಪರ್ 8ರ ಎರಡೂ ಗುಂಪಿಗಳ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸುವ ಎರಡು ತಂಡಗಳು ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯಲಿವೆ. ಮೊದಲನೇ ಸೆಮಿಫೈನಲ್ ಪಂದ್ಯ ಮಾರ್ಚ್ 4 ರಂದು ಮತ್ತು ಎರಡನೇ ಸೆಮಿಫೈನಲ್‌ ಪಂದ್ಯ ಮಾರ್ಚ್ 5 ರಂದು ನಡೆಯಲಿದೆ. ಎರಡನೇ ಸೆಮಿಫೈನಲ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಾಕಿಸ್ತಾನ ಸೆಮಿಫೈನಲ್‌ಗೆ ಅರ್ಹತೆ ಪಡೆದರೆ, ಮೊದಲ ಸೆಮಿಫೈನಲ್ ಕೊಲಂಬೊದ ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

T20 World Cup: ಅಫ್ಘಾನಿಸ್ತಾನ ಔಟ್‌, ಕೆನಡಾ ವಿರುದ್ಧ ಗೆದ್ದು ಸೂಪರ್‌-8ಕ್ಕೆ ಪ್ರವೇಶಿಸಿದ ನ್ಯೂಜಿಲೆಂಡ್‌!

ಒಂದು ವೇಳೆ ಪಾಕ್‌ ಸೆಮಿಫೈನಲ್‌ಗೆ ಅರ್ಹತೆ ಪಡೆಯದಿದ್ದರೆ, ಆ ಪಂದ್ಯ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೂ ಕೂಡ ಇದೇ ನಿಯಮ ಅನ್ವಯವಾಗಲಿದೆ. ಪಾಕಿಸ್ತಾನ ಫೈನಲ್‌ಗೆ ಅರ್ಹತೆ ಪಡೆದರೆ, ಆಗ ಆ ಪಂದ್ಯವನ್ನು ಕೊಲಂಬೊದಲ್ಲಿ ನಡೆಸಲಾಗುವುದು. ಒಂದು ವೇಳೆ ಅರ್ಹತೆ ಪಡೆದಿಲ್ಲವಾದರೆ ಆ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ. ಅಂದ ಹಾಗೆ ಇನ್ನೂ ಪಾಕಿಸ್ತಾನ ತಂಡ ಇನ್ನೂ ಸೂಪರ್-8ಕ್ಕೆ ಅರ್ಹತೆ ಪಡೆದಿಲ್ಲ. ಅವರು ಫೆಬ್ರವರಿ 18 ರಂದು ನಮೀಬಿಯಾ ವಿರುದ್ಧ ಆಡಲಿದ್ದಾರೆ ಮತ್ತು ಆ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸೂಪರ್ 8ಕ್ಕೆ ಪಾಕ್‌ ಅರ್ಹತೆ ಪಡೆಯಲಿದೆ.