INDW vs ENGW: 334ನೇ ಪಂದ್ಯವನ್ನು ಆಡಿ ಮಿಥಾಲಿ ರಾಜ್ ದಾಖಲೆ ಮುರಿದ ಹರ್ಮನ್‌ಪ್ರೀತ್ ಕೌರ್!
ಇಂಗ್ಲೆಂಡ್ ವಿರುದ್ಧ ಐದನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆದರೂ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿ 334 ಪಂದ್ಯಗಳನ್ನು ಆಡುವ ಮೂಲಕ ಮಾಜಿ ನಾಯಕ ಮಿಥಾಲಿ ರಾಜ್ ಅವರನ್ನು ಹಿಂದಿಕ್ಕಿದ್ದಾರೆ.

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್.

ಬರ್ಮಿಂಗ್‌ಹ್ಯಾಮ್: ಇಲ್ಲಿನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದಿದ್ದ ಐದನೇ ಹಾಗೂ ಟಿ20ಐ ಸರಣಿಯ(INDW vs ENGW) ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆದರೂ ಐದು ಪಂದ್ಯಗಳ ಮಹಿಳಾ ಟಿ20ಐ ಸರಣಿಯನ್ನು ಭಾರತ ತಂಡ 3-2 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಆದರೆ, ಐದನೇ ಟಿ20ಐ ಪಂದ್ಯವನ್ನು ಆಡುವ ಮೂಲಕ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಮಾಜಿ ನಾಯಕ ಮಿಥಾಲಿ ರಾಜ್ (Mithali Raj) ಅವರ ಹಲವು ವರ್ಷಗಳ ವಿಶ್ವ ದಾಖಲೆಯನ್ನು ಹರ್ಮನ್ ಮುರಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ ಮಹಿಳಾ ತಂಡ ಮೂರರಲ್ಲಿ ಗೆಲುವು ಪಡೆದಿದೆ. ಇದರ ಫಲವಾಗಿ ಇದೇ ಮೊದಲ ಬಾರಿ ಅಂಗ್ಲರ ನಾಡಿನಲ್ಲಿ ಇಂಗ್ಲೆಂಡ್ ಮಹಿಳಾ ತಂಡ 3-2 ಅಂತರದಲ್ಲಿ ಟಿ20ಐ ಸರಣಿಯನ್ನು ಗೆದ್ದಿದೆ. ಅದರಲ್ಲಿಯೂ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಮಹಿಳಾ ತಂಡ ಈ ಐತಿಹಾಸಿಕ ಸಾಧನೆಯನ್ನು ಮಾಡಿದೆ. ಈ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರು ಕೇವಲ 15 ರನ್ ಗಳಿಸಿದರೂ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ.
IND vs ENG: ರಿಷಭ್ ಪಂತ್ ರನ್‌ಔಟ್ ಆದ ಬಗ್ಗೆ ಕೆಎಲ್ ರಾಹುಲ್ ಪ್ರತಿಕ್ರಿಯೆ!
ಮಿಥಾಲಿ ರಾಜ್ ದಾಖಲೆ ಮುರಿದ ಹರ್ಮನ್‌ಪ್ರೀತ್ ಕೌರ್
ಹರ್ಮನ್‌ಪ್ರೀತ್ ಕೌರ್ ಅವರು ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ 182 ಪಂದ್ಯಗಳನ್ನು ಆಡಿದ್ದಾರೆ. ಅವರು 146 ಏಕದಿನ ಪಂದ್ಯಗಳು ಹಾಗೂ ಆರು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆ ಮೂಲಕ ಅವರು ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿಯೂ 334 ಪಂದ್ಯಗಳನ್ನು ಆಡಿದ್ದಾರೆ. ಆ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಲ್ಲಾ ಸ್ವರೂಪದಲ್ಲಿಯೂ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಭಾರತದ ಆಟಗಾರ್ತಿ ಎಂಬ ನೂತನ ಮೈಲುಗಲ್ಲು ತಲುಪಿದ್ದಾರೆ. ಆ ಮೂಲಕ ಭಾರತದ ಪರ 333 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಮಿಥಾಲಿ ರಾಜ್ ಅವರ ದಾಖಲೆಯನ್ನು ಹರ್ಮನ್‌ಪ್ರೀತ್ ಕೌರ್ ಮುರಿದಿದ್ದಾರೆ.
IND vs ENG: ಚೆಂಡು ಬದಲಿಸುವಾಗ ಸಮಯ ವ್ಯರ್ಥ ಮಾಡಿದ ಅಂಪೈರ್ ವಿರುದ್ಧ ರವಿ ಶಾಸ್ತ್ರಿ ಕಿಡಿ!
ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಭಾರತದ ಮಹಿಳಾ ಆಟಗಾರ್ತಿಯರು
ಹರ್ಮನ್‌ಪ್ರೀತ್ ಕೌರ್: 334
ಮಿಥಾಲಿ ರಾಜ್: 333
ಜೂಲನ್ ಗೋಸ್ವಾಮಿ: 284
ಸ್ಮೃತಿ ಮಂಧಾನಾ: 261
ದೀಪ್ತಿ ಶರ್ಮಾ: 239
ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿಯೂ ಹರ್ಮನ್‌ಪ್ರೀತ್ ಕೌರ್, 8 ಶತಕಗಳು ಹಾಗೂ 85 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಇವರ ವೈಯಕ್ತಿಕ ಗರಿಷ್ಠ ಮೊತ್ತ 171 ರನ್‌ಗಳು. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಇದು ಅತ್ಯಂತ ಗರಿಷ್ಠ ವೈಯಕ್ತಿಕ ಮೊತ್ತ ಇದಾಗಿದೆ.