ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rishabh Pant: ಏಷ್ಯಾ ಕಪ್‌ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ದೊಡ್ಡ ತಲೆ ನೋವು!

ಮುಂಬರುವ ಏಷ್ಯಾ ಕಪ್‌ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಭಾರತ ಹಾಗೂ ಇಂಗ್ಲೆಂಡ್‌ ಟೆಸ್ಟ್‌ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಏಷ್ಯಾ ಕಪ್‌ ಸೇರಿದಂತೆ ಎರಡು ಸರಣಿಗಳಿಗೆ ಅಲಭ್ಯರಾಗಲಿದ್ದಾರೆಂದು ವರದಿಯಾಗಿದೆ.

ಏಷ್ಯಾ ಕಪ್‌ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ದೊಡ್ಡ ತಲೆ ನೋವು!

ರಿಷಭ್‌ ಪಂತ್‌ ಗಾಯದಿಂದ ಗುಣಮುಖರಾಗಲು 6 ವಾರ ಅಗತ್ಯ.

Profile Ramesh Kote Aug 7, 2025 8:17 PM

ನವದೆಹಲಿ: ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು (IND vs ENG) 2-2 ಅಂತರದಲ್ಲಿ ಡ್ರಾ ಮಾಡಿಕೊಂಡಿದ್ದ ಭಾರತ ತಂಡ ಇದೀಗ ಮುಂಬರುವ ಏಷ್ಯಾ ಕಪ್‌ ಟೂರ್ನಿಗೆ(Asia cup 2025) ತಯಾರಿಯನ್ನು ಆರಂಭಿಸಲಿದೆ. ಇದರ ನಡುವೆ ಭಾರತ ತಂಡಕ್ಕೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ. ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ (Rishabh Pant) ಮುಂದಿನ ಆರು ವಾರಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ. ಹಾಗಾಗಿ ಏಷ್ಯಾ ಕಪ್‌ ಸೇರಿದಂತೆ, ಎರಡು ಪ್ರಮುಖ ಸರಣಿಗಳಿಗೆ ಅವರು ಅಲಭ್ಯರಾಗಲಿದ್ದಾರೆಂದು ವರದಿಯಾಗಿದೆ.

ಇಂಗ್ಲೆಂಡ್‌ ವಿರುದ್ಧ ಮ್ಯಾಂಚೆಸ್ಟರ್‌ ಟೆಸ್ಟ್‌ ಪಂದ್ಯದ ಮೊದಲನೇ ದಿನ ಬ್ಯಾಟಿಂಗ್‌ ವೇಳೆ ಕ್ರಿಸ್‌ ವೋಕ್ಸ್‌ ಎಸೆತದಲ್ಲಿ ರಿಷಭ್‌ ಪಂತ್‌ ಪಾದದ ಗಾಯಕ್ಕೆ ತುತ್ತಾಗಿದ್ದರು ಹಾಗೂ ನಂತರ ಅವರು ಬ್ಯಾಟಿಂಗ್‌ ಮುಂದುವರಿಸಲಿಲ್ಲ. ನಂತರ ಎರಡನೇ ದಿನ ಗಾಯದ ಹೊರತಾಗಿಯೂ ಕ್ರೀಸ್‌ಗೆ ಬಂದು ಬ್ಯಾಟಿಂಗ್‌ ನಡೆಸಿದ್ದರು. ಬಳಿಕ ಅವರು ಐದನೇ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಏಕೆಂದರೆ ಅವರ ಗಾಯದ ಸ್ವರೂಪ ಗಂಭೀರವಾಗಿತ್ತು. ಇದೀಗ ಪಂತ್‌ ಅವರ ಪಾದಕ್ಕೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಲಾಗುತ್ತಿದೆ.

IND vs ENG: ಟೀಕೆಗಳಿಗೆ ಗುರಿಯಾಗಿರುವ ಜಸ್‌ಪ್ರೀತ್‌ ಬುಮ್ರಾಗೆ ಸಚಿನ್‌ ತೆಂಡೂಲ್ಕರ್‌ ವಿಶೇಷ ಸಂದೇಶ!

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಿಷಭ್ ಪಂತ್ ಅವರ ಕಾಲ್ಬೆರಳು ಮುರಿತಕ್ಕೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲದಿರಬಹುದು. ಆದಾಗ್ಯೂ, ಅವರು ಕನಿಷ್ಠ ಆರು ವಾರಗಳ ಕಾಲ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ. ಇದರರ್ಥ ಅವರು ಸೆಪ್ಟೆಂಬರ್‌ನಲ್ಲಿ ನಡೆಯಲಿರುವ 2025ರ ಏಷ್ಯಾ ಕಪ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಭಾಗವಾಗಿರುವುದಿಲ್ಲ.

ಭಾರತ ಟಿ20ಐ ತಂಡಕ್ಕೆ ರಿಷಭ್‌ ಪಂತ್‌ ನಿಯಮಿತ ವಿಕೆಟ್‌ ಕೀಪರ್‌ ಅಲ್ಲ. ಹಾಗಾಗಿ ಏಷ್ಯಾ ಕಪ್‌ ಟೂರ್ನಿಗೆ ಅವರ ಅಲಭ್ಯತೆಯು ಭಾರತ ತಂಡಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಗೆ ಅಲಭ್ಯರಾದರೆ, ಅದು ಭಾರತ ತಂಡಕ್ಕೆ ಭಾರಿ ಹಿನ್ನಡೆಯನ್ನು ತಂದೊಡ್ಡಲಿದೆ. ಏಕೆಂದರೆ ಭಾರತ ಟೆಸ್ಟ್‌ ತಂಡಕ್ಕೆ ಇವರೇ ಉಪ ನಾಯಕ.

Asia Cup 2025: ಏಷ್ಯಾ ಕಪ್‌ಗೆ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಆಯ್ಕೆ ಸಾಧ್ಯತೆ!

2025ರ ಏಷ್ಯಾ ಕಪ್‌ ಟೂರ್ನಿಯ ಭಾರತದ ಸಂಭಾವ್ಯ ತಂಡ

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ, ಪ್ರಸಿಧ್‌ ಕೃಷ್ಣ, ಕೃಣಾಲ್ ಪಾಂಡ್ಯ